IND vs NZ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್, ಎರಡೂ ತಂಡದಲ್ಲಿ ಒಂದು ಬದಲಾವಣೆ

ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ನೇಪಿಯರ್ ನ ಮೆಕ್‌ಲೀನ್ ಪಾರ್ಕ್‌ನಲ್ಲಿ ಈ ಪಂದ್ಯ ನಡೆಯುತ್ತಿದೆ.
ಮಳೆಯಿಂದಾಗಿ ಟಾಸ್ ತಡವಾಯಿತು. ಟಾಸ್ ನಂತರ ಪಂದ್ಯ ಆರಂಭವಾಗುವ ಕೆಲ ಸಮಯದ ಮುನ್ನ ಮಳೆ ಕಣ್ಣಾಮುಚ್ಚಾಲೆ ಆಡುತ್ತಿದ್ದು, ಪಂದ್ಯ ತಡವಾಗಿ ಆರಂಭವಾಗಲಿದೆ.
ಸರಣಿಯ ಮೊದಲನೇ ಪಂದ್ಯ ಮಳೆಯಿಂದಾಗಿ ರದ್ದಾದ ನಂತರ ನವೆಂಬರ್ 20ರಂದು ಮೌಂಟ್ ಮೌಂಗನುಯಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ 65ರನ್‌ಗಳ ದೊಡ್ಡ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
3ನೇ ಟಿ20 ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಬದಲಾವಣೆಯಾಗಿದೆ, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಬದಲಿಗೆ ಮಧ್ಯಮ ವೇಗಿ ಹರ್ಷಲ್ ಪಟೇಲ್ ಸ್ಥಾನ ಪಡೆದಿದ್ದಾರೆ. ಉಳಿದಂತೆ ಸಂಜು ಸ್ಯಾಮ್ಸನ್ ಮತ್ತು ಉಮ್ರಾನ್ ಮಲಿಕ್ ಬೆಂಚ್ ಕಾಯುವುದನ್ನು ಮುಂದುವರೆಸಿದ್ದಾರೆ. ಸತತ ವೈಫಲ್ಯದ ಹೊರತಾಗಿಯೂ ರಿಷಬ್ ಪಂತ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಆರೋಗ್ಯದ ಕಾರಣದಿಂದಾಗಿ 3ನೇ ಟಿ20 ಪಂದ್ಯಕ್ಕೆ ಅಲಭ್ಯರಾಗಿದ್ದು ಟಿಮ್ ಸೌಥಿ ತಂಡವನ್ನು ಮುನ್ನಡೆಸಲಿದ್ದಾರೆ. ಕೇನ್ ವಿಲಿಯಮ್ಸನ್ ಬದಲಿಗೆ ಮಾರ್ಕ್ ಚಾಪ್‌ಮನ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಸರಣಿ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿ ಟೀಂ ಇಂಡಿಯಾ
ಎರಡನೇ ಟಿ20 ಪಂದ್ಯದಲ್ಲಿ 65 ರನ್‌ಗಳ ಭರ್ಜರಿ ಸಾಧಿಸಿ, ಸರಣಿಯಲ್ಲಿ 1-0 ಮುನ್ನಡೆ ಪಡೆದಿರುವ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ಗೆಲ್ಲುವ ಫೇವರಿಟ್ ಆಗಿದೆ. ಹಾರ್ದಿಕ್ ಪಾಂಡ್ಯ ಮತ್ತು ತಂಡ ಸರಣಿಯನ್ನು ವೈಟ್‌ವಾಷ್ ಮಾಡುವ ಉತ್ಸಾಹದಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಬೌಲಿಂಗ್ ಪ್ರದರ್ಶನ ತಂಡದ ಉತ್ಸಾಹವನ್ನು ಹೆಚ್ಚಿಸಿದೆ.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ: ಇಶಾನ್ ಕಿಶನ್, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಇಶ್ ಸೋಧಿ, ಟಿಮ್ ಸೌಥಿ(ನಾಯಕ), ಲಾಕಿ ಫರ್ಗುಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications