Ind vs NZ 3rd ODI : ಭಾರತ vs ನ್ಯೂಜಿಲಂಡ್: ಕಿವೀಸ್‌ಗೆ ಸುಲಭ ಸವಾಲು ನೀಡಿದ ಶಿಖರ್ ಧವನ್ ಪಡೆ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿರುವ ಟೀಮ್ ಇಂಡಿಯಾ ನೀರಸ ಬ್ಯಾಟಿಂಗ್ ಪ್ರದರ್ಶಿಸಿದ್ದು 219 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾಗಿದೆ. ಹೀಗಾಗಿ ಅಂತಿಮ ಪಂದ್ಯದದಲ್ಲಿ ನ್ಯೂಜಿಲೆಂಡ್ ತಂಡ 220 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟುವ ಸವಾಲು ಪಡೆದುಕೊಂಡಿದೆ.

ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆಯುವಲ್ಲಿ ವಿಫಲವಾಯಿತು. ಶುಬ್ಮನ್ ಹಿಲ್ ಈ ಪಂದ್ಯದಲ್ಲಿ ಕೇವಲ 13 ರನ್‌ಗಳಿಗೆ ವಿಕೆಟ್ ಕಳೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿದೆ. ಬಳಿಕ ಶಿಖರ್ ಧವನ್ ಕೂಡ 28 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಸತತವಾಗಿ ಕಳಪ ಪ್ರದರ್ಸನ ನೀಡುತ್ತಿರುವ ರಿಷಭ್ ಪಂತ್ ಈ ಪಂದ್ಯದಲ್ಲಿಯೂ ಅದನ್ನು ಮುಂದುವರಿಸಿದ್ದು ಕೇವಲ 10 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಅದ್ಭುತ ಲಯದಲ್ಲಿರುವ ಸೂರ್ಯಕುಮಾರ್ ಯಾದವ್ ಕೂಡ ಈ ಪಂದ್ಯದಲ್ಲಿ ಮಿಂಚಲು ವಿಫಲವಾಗಿದ್ದು ತಂಡಕ್ಕೆ ದೊಡ್ಡ ಹೊನ್ನಡೆಯುಂಟು ಮಾಡಿತು. ಸೂರ್ಯ ಈ ಪಂದ್ಯದಲ್ಲಿ ಕೇವಲ 6 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಐಯ್ಯರ್ ಈ ಪಂದ್ಯದಲ್ಲಿಯೂ ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿದ್ದಾರೆ. 49 ರನ್‌ಗಳಿಸಿ ಐಯ್ಯರ್ ತಮ್ಮ ವಿಕೆಟ್ ಕಳೆದುಕೊಂಡರು. ದೀಪಕ್ ಹೂಡಾ 12 ರನ್‌ಗಳಿಗೆ ಔಟಾದರೆ ವಾಶಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ಜವಾಬ್ಧಾರಿಯುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದರು. ಅರ್ಧ ಶತಕ ಸಿಡಿಸಿದ ವಾಶಿಂಗ್ಟನ್ ಸುಂದರ್ 51 ರನ್‌ಗಳಿಸಿ ಟಿಮ್ ಸೌಥಿಗೆ ವಿಕೆಟ್ ಒಪ್ಪಿಸಿದ್ದಾರೆ. ಇನ್ನು ದೀಪಕ್ ಚಹರ್ 12 ರನ್‌ಗಳಿಸಿದ್ದಾರೆ.

ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಬೆಂಚ್: ಮೈಕೆಲ್ ಬ್ರೇಸ್ವೆಲ್, ಜೇಮ್ಸ್ ನೀಶಮ್

ಟೀಮ್ ಇಂಡಿಯಾ ಆಡುವ ಬಳಗ: ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಾಲ್
ಬೆಂಚ್: ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, November 30, 2022, 11:28 [IST]
Other articles published on Nov 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X