IND vs NZ 3rd T20: ಶುಭ್ಮನ್ ಗಿಲ್ ಸ್ಫೋಟಕ ಶತಕ; ಕಿವೀಸ್ ವಿರುದ್ಧ ಬೃಹತ್ ಮೊತ್ತ ದಾಖಲಿಸಿದ ಭಾರತ

ಬುಧವಾರ, ಫೆಬ್ರವರಿ 1ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3 ಪಂದ್ಯಗಳ ಸರಣಿಯ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ಪ್ರವಾಸಿ ನ್ಯೂಜಿಲೆಂಡ್ ತಂಡದ ವಿರುದ್ಧ ಬೃಹತ್ ಮೊತ್ತ ದಾಖಲಿಸಿ, ಸವಾಲಿನ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಆರಂಭಿಕ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿದೆ. ನ್ಯೂಜಿಲೆಂಡ್ ತಂಡ ಗೆಲ್ಲಲು 235 ರನ್ ಗಳಿಸಬೇಕಿದೆ.
2023ರ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ತನ್ನ ಅದ್ಭುತ ಫಾರ್ಮ್‌ಗೆ ಮರಳಿದ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಆಕ್ರಮಣಕಾರಿ ಆಟವಾಡಿ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಚೊಚ್ಚಲ ಶತಕವನ್ನು ಬಾರಿಸಿದರು.
ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಶುಭ್ಮನ್ ಗಿಲ್ 63 ಎಸೆತಗಳಲ್ಲಿ 12 ಬೌಂಡರಿ ಮತ್ತು 7 ಸಿಕ್ಸರ್‌ಗಳ ನೆರವಿನಿಂದ 126 ರನ್ ಬಾರಿಸಿ ಮಿಂಚಿದರು. ಇದಕ್ಕೂ ಮುನ್ನ ಶುಭ್ಮನ್ ಗಿಲ್ ಜೊತೆ ಇನ್ನಿಂಗ್ಸ್ ಅರಂಭಿಸಿದ್ದ ಇಶಾನ್ ಕಿಶನ್ ಕೇವಲ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ನಂತರ ಬಂದ, ರಾಹುಲ್ ತ್ರಿಪಾಠಿ 22 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 44 ರನ್ ಬಾರಿಸಿದರು. ಇನ್ನು ಸುರ್ಯಕುಮಾರ್ ಯಾದವ್ ಅವರು 13 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದರು.
ನಂತರ, ಶುಭ್ಮನ್ ಗಿಲ್ ಜೊತೆಗೂಡಿದ ಹಾರ್ದಿಕ್ ಪಾಂಡ್ಯ ನಾಲ್ಕನೇ ವಿಕೆಟ್‌ಗೆ 103 ರನ್‌ಗಳ ಜೊತೆಯಾಟ ನೀಡಿದರು. ನಾಯಕ ಹಾರ್ದಿಕ್ ಪಾಂಡ್ಯ 17 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್‌ನ ನೆರವಿನಿಂದ 30 ರನ್ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ನ್ಯೂಜಿಲೆಂಡ್ ಪರ ಮೈಕೆಲ್ ಬ್ರೇಸ್‌ವೆಲ್, ಬ್ಲೇರ್ ಟಿಕ್ನರ್, ಇಶ್ ಸೋಧಿ, ಡೇರಿಲ್ ಮಿಚೆಲ್ ತಲಾ ಒಂದೊಂದು ವಿಕೆಟ್ ಪಡೆದರು.

ಮೊದಲ ಟಿ20 ಪಂದ್ಯವನ್ನು 21 ರನ್‌ಗಳಿಂದ ಪ್ರವಾಸಿ ನ್ಯೂಜಿಲೆಂಡ್ ಗೆದ್ದರೆ, ಎರಡನೇ ಟಿ20 ಪಂದ್ಯವನ್ನು ಭಾರತ ಪ್ರಯಾಸಕರವಾಗಿ 6 ವಿಕೆಟ್‌ಗಳ ಗೆಲುವು ಸಾಧಿಸಿ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿಕೊಂಡಿತು.
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳೆರಡು ತಲಾ ಒಂದೊಂದು ಬದಲಾವಣೆ ಮಾಡಿವೆ. ಭಾರತ ತಂಡದಲ್ಲಿ ಯುಜ್ವೇಂದ್ರ ಚಹಾಲ್ ಬದಲಾಗಿ ಉಮ್ರಾನ್ ಮಲಿಕ್ ಆಡುತ್ತಿದ್ದಾರೆ. ಇನ್ನು ಜೇಕೊಬ್ ಡಫಿ ಬದಲಾಗಿ ಬೆನ್ ಲಿಸ್ಟರ್ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಭಾರತ vs ನ್ಯೂಜಿಲೆಂಡ್ 3ನೇ ಟಿ20 ಪಂದ್ಯದ ಆಡುವ 11ರ ಬಳಗ
ಭಾರತ: ಶುಭ್ಮನ್ ಗಿಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಕುಲದೀಪ್ ಯಾದವ್, ಉಮ್ರನ್ ಮಲಿಕ್, ಅರ್ಶ್‌ದೀಪ್ ಸಿಂಗ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಬೆನ್ ಲಿಸ್ಟರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications