For Quick Alerts
ALLOW NOTIFICATIONS  
For Daily Alerts
 

Ind Vs NZ: ಭಾರತದಂತೆ ಎರಡು ಪ್ರತ್ಯೇಕ ತಂಡ ರಚಿಸಲು ಮುಂದಾದ ನ್ಯೂಜಿಲೆಂಡ್

Ind Vs NZ: New Zealand Set To Announce 13 Man Squad Ahead Of T20I And ODI Series

ಭಾರತದ ವಿರುದ್ಧ ಏಕದಿನ ಮತ್ತು ಟಿ20 ಸರಣಿಗಾಗಿ ಎರಡು ಪ್ರತ್ಯೇಕ ತಂಡಗಳನ್ನು ಪ್ರಕಟಿಸುವುದಾಗಿ ನ್ಯೂಜಿಲೆಂಡ್ ಮುಖ್ಯ ಕೋಚ್ ಗ್ಯಾರಿ ಸ್ಟೆಡ್ ತಿಳಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಸೋತ ಬಳಿಕ ಅವರು ಭಾರತದ ವಿರುದ್ಧದ ಸರಣಿಗೆ ಮುಂದಾಗಿದ್ದಾರೆ.

ಅನುಭವಿಗಳಾದ ಕೇನ್ ವಿಲಿಯಮ್ಸ್ ಮತ್ತು ಟ್ರೆಂಟ್ ಬೌಲ್ಟ್ ಟಿ20 ಸರಣಿಗಾಗಿ ಆಡದಿರುವ ಸಾಧ್ಯತೆ ಇದೆ. ನ್ಯೂಜಿಲೆಂಡ್ ಭಾರತದ ಯುವಪಡೆ ವಿರುದ್ಧ ತಮ್ಮ ಸಾಮರ್ಥ್ಯವನ್ನು ಪರೀಕ್ಷಿಸಲು ಮುಂದಾಗಿದ್ದಾರೆ, ಅವರೂ ಕೂಡ ಯುವಕರಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ.

ಕೇನ್ ವಿಲಿಯಮ್ಸನ್ ಮತ್ತು ಟ್ರೆಂಟ್ ಬೌಲ್ಟ್ ಭಾರತದಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್‌ನಲ್ಲಿ ಆಡಲಿದ್ದಾರೆ, ಸತತವಾಗಿ ಅವರು ಪಂದ್ಯಗಳನ್ನಾಡುತ್ತಿದ್ದು, ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ. ಎನ್‌ಜಿಸಿ ಒಪ್ಪಂದಿಂದ ಹೊರಗುಳಿದಿರುವ ಬೌಲ್ಟ್ ಟಿ20 ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಇದೆ. ಅವರು ಬಿಬಿಎಲ್‌ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡದಲ್ಲಿ ಆಡಲಿದ್ದಾರೆ.

ಏಕದಿನ ವಿಶ್ವಕಪ್ ಟೂರ್ನಿಯನ್ನು ಪರಿಗಣಿಸಿ ಹಲವು ಹೊಸಬರಿಗೆ ಅವಕಾಶ ನೀಡುವ ಮೂಲಕ ತಂಡದ ಬೆಂಚ್ ಬಲಪಡಿಸಲು ನ್ಯೂಜಿಲೆಂಡ್ ಮುಂದಾಗಿದೆ.

Ind Vs NZ: New Zealand Set To Announce 13 Man Squad Ahead Of T20I And ODI Series

ಮಾರ್ಟಿನ್ ಗಪ್ಟಿಲ್ ತಂಡಕ್ಕೆ ಮರಳುವ ಸಾಧ್ಯತೆ

ಟಿ20 ವಿಶ್ವಕಪ್‌ನಲ್ಲಿ ಫಿನ್ ಅಲೆನ್‌ಗೆ ಸ್ಥಾನ ವಿಟ್ಟುಕೊಟ್ಟು ಬೆಂಚ್ ಕಾದಿದ್ದ ಮಾರ್ಟಿನ್ ಗುಪ್ಟಿಲ್ ಮತ್ತೆ ಏಕದಿನ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ. ಟಾಮ್ ಲ್ಯಾಥಮ್, ಹೆನ್ರಿ ನಿಕೋಲ್ಸ್, ವಿಲ್ ಯಂಗ್ ಮತ್ತು ಬ್ಲೇರ್ ಟಿಕ್ನರ್ ಸಹ ತಂಡಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ. ಆಡಮ್ ಮಿಲ್ನೆ, ಮೈಕೆಲ್ ಬ್ರೇಸ್‌ವೆಲ್ ಮತ್ತು ಮಾರ್ಕ್ ಚಾಪ್‌ಮನ್ ಟಿ20 ವಿಶ್ವಕಪ್ ತಂಡದ ಭಾಗವಾಗಿದ್ದರು ಆದರೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದರು.

ವಿಲಿಯಮ್ಸನ್‌ಗೆ ವಿಶ್ರಾಂತಿ ನೀಡಿದರೆ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ ಅಥವಾ ಟಾಮ್ ಲಥಮ್‌ಗೆ ಅವಕಾಶ ಸಿಗುವ ಸಾಧ್ಯತೆ ಇದೆ.

ಸೆಪ್ಟೆಂಬರ್‌ನಲ್ಲಿ ನ್ಯೂಜಿಲೆಂಡ್ ಎ ತಂಡವನ್ನು ಭಾರತ ಎ ತಂಡವು ಸೋಲಿಸಿತ್ತು. ಬೆನ್ ಸಿಯರ್ಸ್ ಮತ್ತು ಮ್ಯಾಟ್ ಫಿಶರ್ ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ವಿಕೆಟ್ ಕೀಪರ್-ಬ್ಯಾಟರ್ ಡೇನ್ ಕ್ಲೀವರ್ ಟಿ20 ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ರಚಿನ್ ರವೀಂದ್ರ ಕೂಡ ಆಲ್ ರೌಂಡರ್ ಸ್ಥಾನಕ್ಕೆ ಆಯ್ಕೆಯಾಗಬಹುದು.

ಭಾರತದ ವಿರುದ್ಧ ನ್ಯೂಜಿಲೆಂಡ್ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡಲಿದೆ. ನವೆಂಬರ್ 18 ರಂದು ಸರಣಿ ಪ್ರಾರಂಭವಾಗಲಿದೆ. ಹಾರ್ದಿಕ್ ಪಾಂಡ್ಯ ಟಿ20 ತಂಡಕ್ಕೆ ನಾಯಕರಾಗಿದ್ದರೆ, ಶಿಖರ್ ಧವನ್ ಏಕದಿನ ತಂಡಕ್ಕೆ ನಾಯಕರಾಗಿದ್ದಾರೆ.

Story first published: Saturday, November 12, 2022, 23:55 [IST]
Other articles published on Nov 12, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+