IND vs NZ Test: ಭಾರತ ವಿರುದ್ಧದ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ ತಂಡ ಪ್ರಕಟ; ಸ್ಟಾರ್ ಆಟಗಾರ ಆಡೋದು ಡೌಟ್?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿ ಅಕ್ಟೋಂಬರ್ 16 ರಿಂದ ಆರಂಭವಾಗಲಿದೆ. ಈ ಟೆಸ್ಟ್ ಸರಣಿಗಾಗಿ ನ್ಯೂಜಿಲೆಂಡ್ ತಂಡ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ. ಇದೀಗ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಪ್ರಕಟಿಸಿದೆ.
ಉಭಯ ತಂಡಗಳ ನಡುವೆ ಮೊದಲ ಟೆಸ್ಟ್ ಪಂದ್ಯ ಅಕ್ಟೋಬರ್ 16 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಇದಾದ ಬಳಿಕ 24 ರಿಂದ ಪುಣೆಯಲ್ಲಿ ಎರಡನೇ ಪಂದ್ಯ ನಡೆಯಲಿದೆ. ಸರಣಿಯ ಕೊನೆಯ ಪಂದ್ಯವು ನವೆಂಬರ್ 1 ರಿಂದ ಮುಂಬೈನಲ್ಲಿ ಶುರುವಾಗಲಿದೆ. 2021ರ ನಂತರ ಕಿವೀಸ್ ತಂಡ ಭಾರತದಲ್ಲಿ ಟೆಸ್ಟ್ ಸರಣಿ ಆಡಲು ಸಜ್ಜಾಗಿದೆ.

ಸ್ಟಾರ್ ಆಟಗಾರ ಆಡುವುದು ಡೌಟ್?
ನ್ಯೂಜಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ಅವರಯ ಭಾರತದ ವಿರುದ್ಧದ ಟೆಸ್ಟ್ ಸರಣಿ ಆಡುವುದು ಅನುಮಾನ ಎನ್ನಲಾಗುತ್ತಿದೆ. ಅವರನ್ನು ತಂಡದಲ್ಲಿ ಇರಿಸಲಾಗಿದೆ. ಆದರೆ ಅವರು ಆರಂಭಿಕ ಪಂದ್ಯದಲ್ಲಿ ಆಡುವ ಬಗ್ಗೆ ಅನುಮಾನವಿದೆ. ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ತೊಡೆಸಂದು ಗಾಯದಿಂದಾಗಿ ವಿಲಿಯಮ್ಸನ್ ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗವಹಿಸುವುದು ಅನುಮಾನ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಬುಧವಾರ ತಿಳಿಸಿದೆ. ಇನ್ನೊಂದೆಡೆ ಕೇನ್ ವಿಲಿಯಮ್ಸನ್ ಶುಕ್ರವಾರ ತಂಡದೊಂದಿಗೆ ಭಾರತಕ್ಕೆ ಹೋಗುವುದಿಲ್ಲ. ಬದಲಿಗೆ ಮನೆಯಲ್ಲಿಯೇ ಇದ್ದು ಚೇತರಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಕಿವೀಸ್ ಹೊಸ ನಾಯಕ
ಭಾರತ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ವೇಗದ ಬೌಲರ್ ಟಿಮ್ ಸೌಥಿ ನ್ಯೂಜಿಲೆಂಡ್‌ನ ಟೆಸ್ಟ್ ನಾಯಕತ್ವವನ್ನು ತೊರೆದಿದ್ದರು. ಶ್ರೀಲಂಕಾ ವಿರುದ್ಧದ ಹೀನಾಯ ಸೋಲಿನ ನಂತರ ಸೌಥಿ ಈ ನಿರ್ಧಾರ ಕೈಗೊಂಡಿದ್ದರು. ಇದಾದ ಬಳಿಕ ಸ್ಟಾರ್ ಬ್ಯಾಟರ್ ಟಾಮ್ ಲ್ಯಾಥಮ್ ಅವರನ್ನು ನಾಯಕ ಎಂದು ಘೋಷಿಸಲಾಗಿತ್ತು. ಈಗಾಗಲೇ ಲ್ಯಾಥಮ್ ಅವರು ಏಕದಿನ ಮತ್ತು ಟಿ20 ತಂಡಗಳ ನಾಯಕರಾಗಿದ್ದು, ಭಾರತ ವಿರುದ್ಧ ಟೆಸ್ಟ್ ಸರಣಿಯಿಂದ ನ್ಯೂಜಿಲೆಂಡ್ ತಂಡವನ್ನು ಮೂರು ಮಾದರಿಯಲ್ಲೂ ಮುನ್ನಡೆಸಲಿದ್ದಾರೆ.
ಮೊದಲ ಟೆಸ್ಟ್‌ಗೆ ಮಾತ್ರ ಬ್ರೇಸ್‌ವೆಲ್
ಆಲ್‌ರೌಂಡರ್ ಮೈಕೆಲ್ ಬ್ರೇಸ್‌ವೆಲ್ ಅವರು ನ್ಯೂಜಿಲೆಂಡ್‌ನೊಂದಿಗೆ ಅಕ್ಟೋಬರ್ 16 ರಿಂದ ಬೆಂಗಳೂರಿನಲ್ಲಿ ಪ್ರಾರಂಭವಾಗುವ ಮೊದಲ ಟೆಸ್ಟ್‌ಗೆ ಆಡಲಿದ್ದಾರೆ. ಇದಾದ ನಂತರ ಅವರು ತಮ್ಮ ಎರಡನೇ ಮಗುವಿನ ಜನನಕ್ಕಾಗಿ ಮನೆಗೆ ಮರಳಲಿದ್ದಾರೆ. ಪುಣೆ ಮತ್ತು ಮುಂಬೈನಲ್ಲಿ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಬ್ರೇಸ್‌ವೆಲ್ ಬದಲಿಗೆ ಇಶ್ ಸೋಧಿ ಸ್ಥಾನ ಪಡೆದಿದ್ದಾರೆ.
ಭಾರತ ವಿರುದ್ಧ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ ತಂಡ
ಟಾಮ್ ಲ್ಯಾಥಮ್ (ನಾಯಕ), ಟಾಮ್ ಬ್ಲಂಡೆಲ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡ್ಯಾರೆಲ್ ಮಿಚೆಲ್, ವಿಲ್ ಓ ರೂರ್ಕ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಬೆನ್ ಸಿಯರ್ಸ್, ಇಶ್ ಸೋಧಿ, ಟಿಮ್ ಸೌಥಿ, ಕೇನ್ ವಿಲಿಯಮ್ಸನ್, ವಿಲ್ ಯಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications