ಭಾರತ vs ನ್ಯೂಜಿಲೆಂಡ್: ಅಂತಿಮ ಪಂದ್ಯವೂ ಫಲಿತಾಂಶವಿಲ್ಲದೆ ರದ್ದು, 1-0 ಅಂತರದಿಂದ ಸರಣಿ ಕಿವೀಸ್ ವಶಕ್ಕೆ

ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯ ಕೂಡ ಮಳೆಗೆ ಆಹುತಿಯಾಗಿದೆ. ಹೀಗಾಗಿ ಫಲಿತಾಂಶವಿಲ್ಲದೆ ಎರಡನೇ ಪಂದ್ಯ ಕೂಡ ರದ್ದಾಗಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ನ್ಯೂಜಿಲೆಂಡ್ 1-0 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ. ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತವನ್ನು 7 ವಿಕೆಟ್‌ಗಳ ಅಂತರದಿಂದ ಮಣಿಸಿತ್ತು.
ಕ್ರೈಸ್ಟ್ ಚರ್ಚ್‌ನಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ನೀರಸ ಪ್ರದರ್ಶನ ನೀಡಿತ್ತು. ಪ್ರಮುಖ ಬ್ಯಾಟರ್‌ಗಳು ನೀರಸ ಪ್ರದರ್ಶನ ನೀಡಿದ ಕಾರಣ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಕೇವಲ 219 ರನ್‌ಗಳನ್ನು ಮಾತ್ರವೇ ಗಳಿಸಿ ಆಲೌಟ್ ಆಯಿತು. ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 18 ಓವರ್‌ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 104 ರನ್‌ಗಳಿಸಿದಾಗ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿತು. ಬಳಿಕ ಪಂದ್ಯ ನಡೆಯಲು ಅವಕಾಶವೇ ದೊರೆಯದ ಕಾರಣ ನ್ಯೂಜಿಲೆಂಡ್ ತಂಡ ಗೆಲ್ಲುವ ಅದ್ಭಯತ ಅವಕಾಶವನ್ನು ಕಳೆದುಕೊಂಡಿತು.

ಕಳಪೆ ಪ್ರದರ್ಶನ ನೀಡಿದ ಪ್ರಮುಖ ಆಟಗಾರರು
ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಉತ್ತಮ ಆರಂಭವನ್ನು ಪಡೆಯುವಲ್ಲಿ ವಿಫಲವಾಯಿತು. ಶುಬ್ಮನ್ ಹಿಲ್ ಈ ಪಂದ್ಯದಲ್ಲಿ ಕೇವಲ 13 ರನ್‌ಗಳಿಗೆ ವಿಕೆಟ್ ಕಳೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿದೆ. ಬಳಿಕ ಶಿಖರ್ ಧವನ್ ಕೂಡ 28 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಸತತವಾಗಿ ಕಳಪ ಪ್ರದರ್ಶನ ನೀಡುತ್ತಿರುವ ರಿಷಭ್ ಪಂತ್ ಈ ಪಂದ್ಯದಲ್ಲಿಯೂ ಅದನ್ನು ಮುಂದುವರಿಸಿದ್ದು ಕೇವಲ 10 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಅದ್ಭುತ ಲಯದಲ್ಲಿರುವ ಸೂರ್ಯಕುಮಾರ್ ಯಾದವ್ ಕೂಡ ಈ ಪಂದ್ಯದಲ್ಲಿ ಮಿಂಚಲು ವಿಫಲವಾಗಿದ್ದು ತಂಡಕ್ಕೆ ದೊಡ್ಡ ಹೊನ್ನಡೆಯುಂಟು ಮಾಡಿತು. ಸೂರ್ಯ ಈ ಪಂದ್ಯದಲ್ಲಿ ಕೇವಲ 6 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು.

ವಾಶಿಂಗ್ಟನ್ ಸುಂದರ್ ಅದ್ಭುತ ಆಟ, ಮತ್ತೆ ಮಿಂಚಿದ ಐಯ್ಯರ್
ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಐಯ್ಯರ್ ಈ ಪಂದ್ಯದಲ್ಲಿಯೂ ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿದ್ದಾರೆ. 49 ರನ್‌ಗಳಿಸಿ ಐಯ್ಯರ್ ತಮ್ಮ ವಿಕೆಟ್ ಕಳೆದುಕೊಂಡರು. ದೀಪಕ್ ಹೂಡಾ 12 ರನ್‌ಗಳಿಗೆ ಔಟಾದರೆ ವಾಶಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ಜವಾಬ್ಧಾರಿಯುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದರು. ಅರ್ಧ ಶತಕ ಸಿಡಿಸಿದ ವಾಶಿಂಗ್ಟನ್ ಸುಂದರ್ 51 ರನ್‌ಗಳಿಸಿ ಟಿಮ್ ಸೌಥಿಗೆ ವಿಕೆಟ್ ಒಪ್ಪಿಸಿದರಿ. ಇನ್ನು ದೀಪಕ್ ಚಹರ್ 12 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಈ ಮೂಲಕ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಕೇವಲ 219 ರನ್‌ಗಳನ್ನು ಮಾತ್ರವೇ ಗಳಿಸಿತು.

ಅಡ್ಡಿಯಾಯಿತು ಮಳೆ
ಇನ್ನು ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡಕ್ಕೆ ಅದ್ಭುತ ಆರಂಭ ದೊರೆಯಿತು. ಮೊದಲ ವಿಕೆಟ್‌ಗೆ ಫಿನ್ ಅಲೆನ್ ಹಾಗೂ ಡೆವೋನ್ ಕಾನ್ವೆ ಜೋಡಿ ಆರಂಭಿಕ ಜೋಡಿ 97 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟರು. ಫಿನ್ ಆಲೆನ್ 57 ರನ್‌ಗಳ ಕೊಡುಗೆ ನೀಡಿ ವಿಕೆಟ್ ಕಳೆದುಕೊಂಡರು. ಈ ಮೂಲಕ ನ್ಯೂಜಿಲೆಂಡ್ ಗೆಲುವಿನತ್ತ ಹೆಜ್ಜೆ ಹಾಕಿತ್ತು. ಆದರೆ 18 ಓವರ್ ಅಂತ್ಯವಾಗುತ್ತಿದ್ದಂತೆಯೇ ಮಳೆ ಆರಂಭವಾದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಬಳಿಕ ಪಂದ್ಯದ ಆರಂಭಕ್ಕೆ ಅವಕಾಶವೇ ದೊರೆಯದ ಕಾರಣ ಪಂದ್ಯ ಫಲಿತಾಂಶ ಕಾಣದೆ ರದ್ದಾಯಿತು. ಡಕ್ವರ್ತ್ ಲೂಯೀಸ್ ನಿಯಮದ ಅನ್ವಯಕ್ಕೆ 20 ಓವರ್ ಸಂಪೂರ್ಣವಾದ ಕಾರಣ ಪಂದ್ಯ ಫಲಿತಾಂಶ ಪಡೆಯಲು ಕೂಡ ಸಾಧ್ಯವಾಗಲಿಲ್ಲ. ಹೀಗಾಗಿ ಟೀಮ್ ಇಂಡಿಯಾ ಮತ್ತೊಂದು ಸೋಲಿನಿಂದ ಸ್ವಲ್ಪದರಲ್ಲಿ ಬಚಾವಾಯಿತು.

ಇತ್ತಂಡಗಳ ಆಡುವ ಬಳಗ
ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಬೆಂಚ್: ಮೈಕೆಲ್ ಬ್ರೇಸ್ವೆಲ್, ಜೇಮ್ಸ್ ನೀಶಮ್
ಟೀಮ್ ಇಂಡಿಯಾ ಆಡುವ ಬಳಗ: ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಾಲ್
ಬೆಂಚ್: ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications