ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ ODI Series : ಆಕ್ಲೆಂಡ್ ತಲುಪಿದ ಟೀಂ ಇಂಡಿಯಾ, ಏಕದಿನ ಸರಣಿಯಲ್ಲೂ ಗೆಲ್ಲುವ ವಿಶ್ವಾಸ

IND vs NZ ODI: After Clinch T20 Series Team India Reaches Auckland For 1st ODI Match Of The Series

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 1-0 ಅಂತರದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿಗೆ ಸಿದ್ಧವಾಗುತ್ತಿದೆ. ನೇಪಿಯರ್ ನಿಂದ ಈಗಾಗಲೇ ಆಕ್ಲೆಂಡ್ ತಲುಪಿರುವ ಶಿಖರ್ ಧವನ್ ಪಡೆ ಅಭ್ಯಾಸವನ್ನು ನಡೆಸಿದೆ. ಗುರುವಾರ ತಂಡದ ಸಂಪೂರ್ಣ ಅಭ್ಯಾಸ ನಡೆಸಲಿದೆ.

ನವೆಂಬರ್ 25ರ ಶುಕ್ರವಾರ ಏಕದಿನ ಸರಣಿಯ ಮೊದಲನೇ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನ ಬೆಳಿಗ್ಗೆ 7 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ. ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡಕ್ಕೆ ನಾಯಕನಾಗಿದ್ದರು, ಏಕದಿನ ಸರಣಿಯಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದಾರೆ.

ಈ ಪ್ರಸಿದ್ಧ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೆಎಲ್ ರಾಹುಲ್ಈ ಪ್ರಸಿದ್ಧ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೆಎಲ್ ರಾಹುಲ್

ಶಿಖರ್ ಧವನ್ ನೇತೃತ್ವದಲ್ಲಿ ಭಾರತ ತಂಡ ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಗೆಲುವು ಸಾಧಿಸಿತ್ತು. ಯುವ ತಂಡದೊಂದಿಗೆ ಬಲಿಷ್ಠ ಹರಿಣಗಳ ವಿರುದ್ಧವೇ ಸರಣಿ ಗೆದ್ದಿರುವ ಶಿಖರ್ ಧವನ್‌ಗೆ ನ್ಯೂಜಿಲೆಂಡ್‌ನಲ್ಲೂ ಸರಣಿ ಗೆಲ್ಲುವ ವಿಶ್ವಾಸವಿದೆ.

ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್ ಅವರನ್ನು ಹೊರತುಪಡಿಸಿದ ಉಳಿದ ಎಲ್ಲಾ ಆಟಗಾರರು ಏಕದಿನ ಸರಣಿಗಾಗಿ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಶಿಖರ್ ಧವನ್ ಮತ್ತು ದೀಪಕ್ ಚಾಹರ್ ಏಕದಿನ ಸರಣಿಯಲ್ಲಿ ಆಡಲಿದ್ದಾರೆ. ಟಿ20 ಸರಣಿಯಲ್ಲಿ ಸ್ಥಾನ ಪಡೆಯದ ಹಲವರು ಏಕದಿನ ಸರಣಿಯಲ್ಲಿ ಆಡುವ ಬಳಗದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ.

ಏಕದಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ

ಏಕದಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ

ಟಿ20 ಸರಣಿಯಲ್ಲಿ ಮೊದಲನೇ ಪಂದ್ಯ ರದ್ದಾದ ಬಳಿಕ ಉಳಿದ ಎರಡೂ ಪಂದ್ಯಗಳಲ್ಲಿ ಸ್ಥಾನ ಪಡೆಯುವಲ್ಲಿ ಸಂಜು ಸ್ಯಾಮ್ಸನ್ ವಿಫಲರಾಗಿದ್ದರು. ರಿಷಬ್ ಪಂತ್ ಮತ್ತು ಇಶಾನ್ ಕಿಶನ್ ಭಾರತಕ್ಕಾಗಿ ಇನ್ನಿಂಗ್ಸ್ ಆರಂಭಿಸಿದ್ದರು, ಆದರೆ ಇಬ್ಬರೂ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು.

ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡದ ಬಗ್ಗೆ ಈಗಾಗಲೇ ಸಾಕಷ್ಟು ಟೀಕೆ ವ್ಯಕ್ತವಾಗಿದ್ದು, ಏಕದಿನ ಸರಣಿಯಲ್ಲಿ ಅವರು ಆಡುವುದು ಖಚಿತವಾಗಿದೆ. ಶುಭಮನ್ ಗಿಲ್ ಮತ್ತು ಶಿಖರ್ ಧವನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದು, ಸಂಜು ಸ್ಯಾಮ್ಸನ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ. ಇನ್ನು ಯುವ ವೇಗಿ ಉಮ್ರಾನ್ ಮಲಿಕ್ ಕೂಡ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

ಐಪಿಎಲ್ ಮಿನಿ ಹರಾಜಿನ ದಿನಾಂಕ ಬದಲಿಸಿ ಎಂದು ಪಟ್ಟು ಹಿಡಿದ ಫ್ರಾಂಚೈಸಿಗಳು: ವರದಿ

ಲಕ್ಷ್ಮಣ್ ನೇತೃತ್ವದಲ್ಲಿ ಆಟಗಾರರ ಅಭ್ಯಾಸ

ಲಕ್ಷ್ಮಣ್ ನೇತೃತ್ವದಲ್ಲಿ ಆಟಗಾರರ ಅಭ್ಯಾಸ

ನ್ಯೂಜಿಲೆಂಡ್ ಸರಣಿಗಾಗಿ ಹಿರಿಯ ಆಟಗಾರರ ಜೊತೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ತಂಡಕ್ಕೆ ಕೂಡ ವಿಶ್ರಾಂತಿ ನೀಡಲಾಗಿದ್ದು, ವಿವಿಎಸ್ ಲಕ್ಷ್ಮಣ್ ಕೋಚ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ, ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಭಾರತದ ಯುವ ಪಡೆ ಗೆದ್ದುಕೊಂಡಿದೆ.

ಟಿ20ಯಲ್ಲಿ ಅಬ್ಬರಿಸಿದ್ದ ಸೂರ್ಯಕುಮಾರ್ ಯಾದವ್ ತಮ್ಮ ಏಕದಿನ ದಾಖಲೆಗಳನ್ನು ಉತ್ತಮಪಡಿಸಿಕೊಳ್ಳಲು ನೋಡುತ್ತಿದೆ. 2023ರಲ್ಲಿ ಏಕದಿನ ವಿಶ್ವಕಪ್‌ ದೃಷ್ಟಿಯಿಂದ ಹಲವು ಆಟಗಾರರು ತಮ್ಮ ಸ್ಥಾನ ಉಳಿಸಿಕೊಳ್ಳಲು ಉತ್ತಮ ಪ್ರದರ್ಶನ ನೀಡಲೇಬೇಕಿದೆ.

ಏಕದಿನ ಸರಣಿಗೆ ಭಾರತ, ನ್ಯೂಜಿಲೆಂಡ್ ತಂಡ

ಏಕದಿನ ಸರಣಿಗೆ ಭಾರತ, ನ್ಯೂಜಿಲೆಂಡ್ ತಂಡ

ಭಾರತ : ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜುವೇಂದ್ರ ಚಹಾಲ್, ಕುಲದೀಪ್ ಯಾದವ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್

ನ್ಯೂಜಿಲೆಂಡ್ : ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಆಡಮ್ ಮಿಲ್ನೆ, ಗ್ಲೆನ್ ಫಿಲಿಪ್ಸ್ , ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಜಿಮ್ಮಿ ನೀಶಮ್ (ಮೊದಲ 2 ಪಂದ್ಯಗಳಿಗೆ ಮಾತ್ರ ಆಯ್ಕೆ), ಹೆನ್ರಿ ನಿಕೋಲ್ಸ್ (3ನೇ ಏಕದಿನ ಪಂದ್ಯಕ್ಕೆ ಮಾತ್ರ ಆಯ್ಕೆ)

Story first published: Wednesday, November 23, 2022, 14:41 [IST]
Other articles published on Nov 23, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X