IND Vs NZ ODI: ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತದ್ದೇ ಪ್ರಾಬಲ್ಯ: ಗೆದ್ದ ಪಂದ್ಯಗಳೆಷ್ಟು ಗೊತ್ತಾ?

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಸಿದ್ಧವಾಗುತ್ತಿದೆ. ಮೊದಲ ಪಂದ್ಯವನ್ನಾಡಲು ಈಗಾಗಲೇ ಹೈದರಾಬಾದ್ ತಲುಪಿದೆ. ಜನವರಿ 18ರ ಬುಧವಾರ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.
ಸರಣಿಯ ಎರಡನೇ ಪಂದ್ಯ ಜನವರಿ 21 ರಂದು ರಾಯ್ಪುರದಲ್ಲಿ ನಡೆಯಲಿದ್ದು, ಅಂತಿಮ ಪಂದ್ಯ ಜನವರಿ 24 ರಂದು ಇಂದೋರ್ ನಲ್ಲಿ ನಡೆಯಲಿದೆ. 2022ರ ನವೆಂಬರ್ ತಿಂಗಳಿನಲ್ಲಿ ಭಾರತ ನ್ಯೂಜಿಲೆಂಡ್ ಪ್ರವಾಸದ ವೇಳೆ 3 ಪಂದ್ಯಗಳ ಏಕದಿನ ಸರಣಿಯನ್ನು ನ್ಯೂಜಿಲೆಂಡ್ 1-0 ಅಂತರದಲ್ಲಿ ಗೆದ್ದಿತ್ತು. ಆ ಸೋಲಿಗೆ ಸೇಡು ತೀರಿಸಿಕೊಳ್ಳುವ ಕಾತರದಲ್ಲಿದೆ ಟೀಂ ಇಂಡಿಯಾ.
ಭಾರತ ಮತ್ತು ನ್ಯೂಜಿಲೆಂಡ್ ಇದುವರೆಗೂ ಒಟ್ಟಾರೆಯಾಗಿ 113 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 55 ಪಂದ್ಯಗಳಲ್ಲಿ ಜಯ ಸಾಧಿಸಿದ್ದು ನ್ಯೂಜಿಲೆಂಡ್ 50 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಒಂದು ಪಂದ್ಯ ಟೈನಲ್ಲಿ ಅಂತ್ಯವಾಗಿದ್ದು, 7 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಯಾಗಿವೆ.
ಎರಡೂ ತಂಡಗಳು ಬಲಿಷ್ಠವಾಗಿದ್ದು, ದಾಖಲೆಯಲ್ಲಿ ಭಾರತ ಕೆಲವೇ ಪಂದ್ಯಗಳಿಂದ ಮುನ್ನಡೆಯಲ್ಲಿದೆ. ಆದರೆ, ಭಾರತದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಟೀಂ ಇಂಡಿಯಾ ಉತ್ತಮ ದಾಖಲೆ ಹೊಂದಿದೆ.

ತವರಿನಲ್ಲಿ ಟೀಂ ಇಂಡಿಯಾ ಅಧಿಪತ್ಯ
ತವರಿನಲ್ಲಿ ನಡೆದಿರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಭಾರಿ ಮುನ್ನಡೆ ಸಾಧಿಸಿದೆ. ಭಾರತ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ 34 ಪಂದ್ಯಗಳನ್ನಾಡಿದ್ದು 26 ಪಂದ್ಯಗಳಲ್ಲಿ ಜಯ ಸಾಧಿಸಿದೆ. ನ್ಯೂಜಿಲೆಂಡ್ ಕೇವಲ 8 ಪಂದ್ಯಗಳಲ್ಲಿ ಮಾತ್ರ ಗೆಲುವು ಕಂಡಿದೆ. 2000ರ ಇಸವಿಯಿಂದ ಈವರೆಗೆ ತವರಿನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಕೇವಲ 4 ಏಕದಿನ ಪಂದ್ಯಗಳಲ್ಲಿ ಮಾತ್ರ ಸೋಲು ಕಂಡಿದೆ.
ಆತ ಭಾರತ ತಂಡದ ಭವಿಷ್ಯದ ಸೂಪರ್ ಸ್ಟಾರ್ ಎಂದು ಹಾಡಿ ಹೊಗಳಿದ ಇರ್ಫಾನ್ ಪಠಾಣ್

ಕೊನೆಯ ಐದು ಪಂದ್ಯಗಳಲ್ಲಿ 3 ಗೆಲುವು
ಭಾರತ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಿದ ಕೊನೆಯ 5 ಏಕದಿನ ಪಂದ್ಯಗಳಲ್ಲಿ 3-2 ರಿಂದ ಗೆಲುವು ಸಾಧಿಸಿದೆ.
2016ರ ಅಕ್ಟೋಬರ್ 26 ರಂದು ನಡೆದ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತವನ್ನು 19 ರನ್‌ಗಳಿಂದ ಸೋಲಿಸಿತ್ತು. 2016ರ ಅಕ್ಟೋಬರ್ 29ರಂದು ನಡೆದ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 190 ರನ್‌ಗಳ ಬೃಹತ್ ಅಂತರದಲ್ಲಿ ಜಯ ಸಾಧಿಸಿತ್ತು.
2017 ರ ಅಕ್ಟೋಬರ್ 22ರಂದು ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತದ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದರೆ, ಅಕ್ಟೋಬರ್ 25 ರಂದು ನಡೆದ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳಿಂದ ಜಯ ಸಾಧಿಸಿತ್ತು. ನಂತರ ಕೊನೆಯದಾಗಿ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ 2017 ರ ಅಕ್ಟೋಬರ್ 29ರಂದು ಆಡಿದ ಪಂದ್ಯದಲ್ಲಿ ಭಾರತ 6 ರನ್‌ಗಳ ರೋಚಕ ಜಯ ಸಾಧಿಸಿತ್ತು.

ಏಕದಿನ ಸರಣಿಗೆ ಭಾರತ, ನ್ಯೂಜಿಲೆಂಡ್ ತಂಡ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಆಡಮ್ ಮಿಲ್ನೆ, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಸೋ ಶಿಪ್ಲಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications