IND vs NZ 2nd ODI: 2ನೇ ಏಕದಿನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಭಾನುವಾರ (ನವೆಂಬರ್ 27) ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು ಎದುರಿಸುತ್ತಿದೆ.
ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಹೀಗಾಗಿ ಶಿಖರ್ ಧವನ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಶುಕ್ರವಾರ (ನವೆಂಬರ್ 25) ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆದ ಏಕದಿನ ಸರಣಿಯ ಮೊದಲ ಪಂದ್ಯವನ್ನು ನ್ಯೂಜಿಲೆಂಡ್ ಗೆದ್ದು 1-0 ಅಂತರದಲ್ಲಿ ಮುನ್ನಡೆ ಸಾಧಿಸಿರುವ ಕಾರಣ, ಈ ಪಂದ್ಯ ಭಾರತ ತಂಡಕ್ಕೆ ನಿರ್ಣಾಯಕ ಪಂದ್ಯವಾಗಿರಲಿದೆ. ಸರಣಿಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಭಾರತಕ್ಕೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.
ಬ್ಲ್ಯಾಕ್‌ಕ್ಯಾಪ್ಸ್ ಮೊದಲ ಏಕದಿನ ಪಂದ್ಯವನ್ನು 7 ವಿಕೆಟ್‌ಗಳಿಂದ ಗೆದ್ದಿತ್ತು. ಟಾಮ್ ಲ್ಯಾಥಮ್ ಅಜೇಯ 145 ರನ್ ಮತ್ತು ನಾಯಕ ಕೇನ್ ವಿಲಿಯಮ್ಸನ್ ಅಜೇಯ 94 ರನ್ ಗಳಿಸಿ 307 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಲು ನೆರವಾಗಿದ್ದರು.
ಪ್ರವಾಸಿ ಭಾರತ ತಂಡದಲ್ಲಿ ಎರಡು ಬದಲಾವಣೆಗಳಾಗಿದ್ದು, ಸಂಜು ಸ್ಯಾಮ್ಸನ್ ಮತ್ತು ಶಾರ್ದೂಲ್ ಠಾಕೂರ್ ಬದಲಿಗೆ ದೀಪಕ್ ಹೂಡಾ ಮತ್ತು ದೀಪಕ್ ಚಹಾರ್ ಅವರಿಗೆ ಅವಕಾಶ ನೀಡಿದೆ. ಇನ್ನು ಆತಿಥೇಯ ನ್ಯೂಜಿಲೆಂಡ್ ತಂಡವು ಒಂದು ಬದಲಾವಣೆ ಮಾಡಿದ್ದು, ಆಡಮ್ ಮಿಲ್ನೆ ಬದಲಿಗೆ ಮೈಕೆಲ್ ಬ್ರೇಸ್‌ವೆಲ್ ಅವರನ್ನು ಆಡಿಸುತ್ತಿದೆ.
ಭಾರತ vs ನ್ಯೂಜಿಲೆಂಡ್ ಆಡುವ 11ರ ಬಳಗ
ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್‌ವೆಲ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲ್ಯೂಕಿ ಫರ್ಗುಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications