IND Vs NZ ODI: ಏಕದಿನ ಸರಣಿಯಿಂದ ಸ್ಟಾರ್ ಬ್ಯಾಟರ್ ಔಟ್, ತಂಡದಲ್ಲಿ ಸ್ಥಾನ ಪಡೆದ ಆರ್‌ಸಿಬಿ ಬ್ಯಾಟರ್

ಟೀಂ ಇಂಡಿಯಾ ಆಟಗಾರರಿಗೆ ಅದ್ಯಾಕೋ ಗಾಯದ ಸಮಸ್ಯೆ ಬೆಂಬಿಡದಂತೆ ಕಾಡುತ್ತಿದೆ. ಏಷ್ಯಾಕಪ್, ಟಿ20 ವಿಶ್ವಕಪ್‌ನಲ್ಲಿ ಆಟಗಾರರ ಗಾಯದ ಸಮಸ್ಯೆ ಸಾಕಷ್ಟು ತೊಂದರೆ ಕೊಟ್ಟಿದೆ. ಎಲ್ಲಾ ಆಟಗಾರರು ಫಿಟ್ ಆಗಿ ತಂಡಕ್ಕೆ ವಾಪಸಾಗಲು ಸಿದ್ಧವಾಗುತ್ತಿರುವ ಸಂದರ್ಭದಲ್ಲೇ ಭಾರತ ತಂಡದ ಸ್ಟಾರ್ ಬ್ಯಾಟರ್ ಗಾಯಗೊಂಡಿದ್ದಾರೆ.
ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಮುಂಜಾಗ್ರತಾ ಕ್ರಮವಾಗಿ ಮುಂಬರುವ ಏಕದಿನ ಸರಣಿಯಿಂದ ಹೊರಗಿಡಲಾಗಿದೆ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿದ್ದ ಶ್ರೇಯಸ್ ಅಯ್ಯರ್ ದೊಡ್ಡ ಮೊತ್ತ ಗಳಿಸುವಲ್ಲಿ ವಿಫಲರಾದರೂ, ತೀರಾ ಕಳಪೆ ಎನ್ನುವಂತೆ ಆಡಿರಲಿಲ್ಲ. ಇದೇ ಕಾರಣಕ್ಕೆ ಅವರು ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು.
ಶ್ರೇಯಸ್ ಅಯ್ಯರ್ ಬದಲಾಗಿ ಆರ್ ಸಿಬಿ ಬ್ಯಾಟರ್ ರಜತ್ ಪಟಿದಾರ್ ಅವರನ್ನು ಆಯ್ಕೆ ಸಮಿತಿ ಏಕದಿನ ಸರಣಿಗೆ ಆಯ್ಕೆ ಮಾಡಿದ್ದಾರೆ. ಜನವರಿ 18ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲನೇ ಪಂದ್ಯ ನಡೆಯಲಿದೆ.
ಮೊದಲ ಪಂದ್ಯಕ್ಕಾಗಿ ಟೀಂ ಇಂಡಿಯಾ ಅಭ್ಯಾಸ ಮಾಡುವ ವೇಳೆಯೇ ಈ ಸುದ್ದಿ ಹೊರಬಿದ್ದಿದೆ. ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಕಂಡುಕೊಂಡಿದ್ದ ಅಯ್ಯರ್ ಗಾಯಗೊಂಡು ಹೊರಬಿದ್ದಿರುವುದು ಅಲ್ಪ ಹಿನ್ನಡೆಯಾಗಿದೆ. ಅವರು ಬೆಂಗಳೂರಿನ ಎನ್‌ಸಿಎಗೆ ಹಾಜರಾಗಲಿದ್ದು, ಫಿಟ್‌ನೆಸ್ ಮೇಲೆ ಕೆಲಸ ಮಾಡಲಿದ್ದಾರೆ.

ಆರ್‌ಸಿಬಿ ಬ್ಯಾಟರ್‌ಗೆ ಸ್ಥಾನ
ಆರ್‌ಸಿಬಿ ತಂಡದ ಬ್ಯಾಟರ್ ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಆಯ್ಕೆದಾರರ ಸಮಿತಿಯ ಗಮನ ಸೆಳೆದಿದ್ದರು. ಅವರ ಸ್ಥಿರ ಪ್ರದರ್ಶನವನ್ನು ಗಮನಿಸಿರುವ ಆಯ್ಕೆದಾರರು ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಿದ್ದಾರೆ.
ತಂಡಕ್ಕೆ ಆಯ್ಕೆಯಾದರೂ ಆಡುವ ಬಳಗದಲ್ಲಿ ಪಟಿದಾರ್ ಸ್ಥಾನ ಪಡೆಯುವುದು ಅನುಮಾನ. ನಾಯಕ ಮತ್ತು ಕೋಚ್ ಶ್ರೇಯಸ್ ಅಯ್ಯರ್ ಬದಲಿಗೆ ಸೂರ್ಯಕುಮಾರ್ ಯಾದವ್‌ಗೆ ಮೊದಲು ಅವಕಾಶ ನೀಡಲಿದ್ದಾರೆ.
ILT20: ಇಂಟರ್ನ್ಯಾಷನಲ್ ಲೀಗ್ ಟಿ20ಯಲ್ಲಿ ರಾಬಿನ್ ಉತ್ತಪ್ಪ ಭರ್ಜರಿ ಬ್ಯಾಟಿಂಗ್

ಆಡುವ ಬಳಗದಲ್ಲಿ ಸೂರ್ಯಕುಮಾರ್
ಶ್ರೇಯಸ್ ಅಯ್ಯರ್ ಹೊರಗುಳಿದ ಕಾರಣ ಸೂರ್ಯಕುಮಾರ್ ಯಾದವ್ ಆಡುವ ಬಳಗದಲ್ಲಿ ನೇರವಾಗಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೂರ್ಯ ಬದಲಿಗೆ ಶ್ರೇಯಸ್ ಅಯ್ಯರ್ ಗೆ ಮಣೆ ಹಾಕಿದ್ದರು ನಾಯಕ ರೋಹಿತ್ ಶರ್ಮಾ.
ಟಿ20 ಮಾದರಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸೂರ್ಯಕುಮಾರ್ ಯಾದವ್ ಅದನ್ನು ಏಕದಿನ ಮಾದರಿಯಲ್ಲಿ ಮುಂದುವರೆಸುವಲ್ಲಿ ವಿಫಲರಾಗಿದ್ದಾರೆ. 2023ರಲ್ಲಿ ಏಕದಿನ ವಿಶ್ವಕಪ್ ಇರುವುದರಿಂದ ಏಕದಿನ ಮಾದರಿಯಲ್ಲಿ ಬ್ಯಾಟಿಂಗ್ ಸುಧಾರಣೆ ಮಾಡಿಕೊಳ್ಳುವುದಾಗಿ ಸೂರ್ಯ ಹೇಳಿದ್ದರು. ಈಗ ಅವರಿಗೆ ಉತ್ತಮ ಅವಕಾಶ ಒದಗಿ ಬಂದಿದೆ.

ಟೀಂ ಇಂಡಿಯಾ ಅಭ್ಯಾಸ
ಮೊದಲ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ಹೈದರಾಬಾದ್‌ನಲ್ಲಿ ಕಠಿಣ ಅಭ್ಯಾಸ ನಡೆಸಿದೆ. ಜನವರಿ 18ರ ಬುಧವಾರ ಮಧ್ಯಾಹ್ನ 1.30ಕ್ಕೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಲಿದೆ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿರುವ ಭಾರತ ತಂಡ ಆತ್ಮವಿಶ್ವಾಸದಿಂದಲೇ ಕಿವೀಸ್ ಪಡೆಯನ್ನು ಎದುರಿಸಲಿದೆ. 2022ರ ನವೆಂಬರ್ ನಲ್ಲಿ ನ್ಯೂಜಿಲೆಂಡ್ ವಿರದ್ಧ ಏಕದಿನ ಸರಣಿಯನ್ನು ಸೋಲಿಗೆ ಸೇಡು ತೀರಿಸಿಕೊಳ್ಳಲು ಸಿದ್ಧವಾಗಿದೆ. 3 ಪಂದ್ಯಗಳಲ್ಲಿ ಭಾರತ ಗೆದ್ದರೆ, ಏಕದಿನ ಮಾದರಿಯಲ್ಲಿ ಐಸಿಸಿ ರ್‍ಯಾಂಕಿಂಗ್‌ನಲ್ಲಿ ನಂಬರ್ 1 ಪಟ್ಟಕ್ಕೇರುವ ಅವಕಾಶ ಭಾರತಕ್ಕಿದೆ.
ಏಕದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಜತ್ ಪಟಿದಾರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications