
ನಂಬರ್ 1 ಆಗಲು ಸುವರ್ಣಾವಕಾಶ
ಟೀಂ ಇಂಡಿಯಾ ಸದ್ಯ 100 ಅಂಕಗಳೊಂದಿಗೆ, ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, 117 ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿದೆ. ಭಾರತ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯನ್ನು ವೈಟ್‌ವಾಶ್ ಮಾಡುವಲ್ಲಿ ಯಶಸ್ವಿಯಾದರೆ, ಭಾರತ ಅಗ್ರಸ್ಥಾನಕ್ಕೇರುವುದು ಖಚಿತವಾಗಿದೆ.
ಮೂರು ಪಂದ್ಯಗಳನ್ನು ಗೆದ್ದರೆ ಭಾರತ 114 ಅಂಕಗಳನ್ನು ಹೊಂದಲಿದ್ದು ಮೊದಲ ಸ್ಥಾನಕ್ಕೆ ಏರಲಿದೆ. ಅಂಕಗಳನ್ನು ಕಳೆದುಕೊಳ್ಳುವ ನ್ಯೂಜಿಲೆಂಡ್ ನಾಲ್ಕನೇ ಸ್ಥಾನಕ್ಕೆ ಕುಸಿಯಲಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿ ಮುಂದುವರೆಯಲಿವೆ.
ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ; ಶ್ರೀಲಂಕಾದ ಮಾಜಿ ಕ್ರಿಕೆಟಿಗನ ಪ್ರಶಂಸೆ

ಪ್ರಮುಖ ಆಟಗಾರರು ಸರಣಿಯಿಂದ ಹೊರಕ್ಕೆ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯಿಂದ ಪ್ರಮುಖ ಆಟಗಾರರು ಹೊರಗುಳಿಯಲಿದ್ದಾರೆ. ಭಾರತ ತಂಡದ ಕೆಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ ವೈಯಕ್ತಿಕ ಕಾರಣದಿಂದ ಸರಣಿಯಿಂದ ಹೊರಗುಳಿಯಲಿದ್ದಾರೆ. ಕೆಎಲ್ ರಾಹುಲ್ ತಮ್ಮ ಮದುವೆಗಾಗಿ ರಜೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೆಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ ಬದಲಿಗೆ ಏಕದಿನ ತಂಡದಲ್ಲಿ ಕೆಎಸ್ ಭರತ್, ಶಾರ್ದೂಲ್ ಠಾಕೂರ್ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಕೂಡ ಸರಣಿಯಿಂದ ಹೊರಗುಳಿಯಲಿದ್ದಾರೆ. ಟಿಮ್ ಸೌಥಿ ಕೂಡ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದು, ಟಾಮ್ ಲಥಮ್ ತಂಡದ ನಾಯಕತ್ವದ ಹೊಣೆಯನ್ನು ಹೊತ್ತಿದ್ದಾರೆ.

ಏಕದಿನ ಸರಣಿಗಾಗಿ ಭಾರತ, ನ್ಯೂಜಿಲೆಂಡ್ ತಂಡ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಆಡಮ್ ಮಿಲ್ನೆ, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಸೋ ಶಿಪ್ಲಿ.