ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್‌ ವಿರುದ್ಧದ ದ್ವಿತೀಯ ಟೆಸ್ಟ್‌ಗೆ ಕೊಹ್ಲಿ ಆಗಮನ; ಈ ಮೂವರಲ್ಲಿ ಯಾರು ತಂಡದಿಂದ ಹೊರಕ್ಕೆ?

India vs New Zealand: Rahane or Pujara likely to lose their spot in the team as Virat Kohli is back for second test

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಇತ್ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಈಗಾಗಲೇ ಮುಗಿದಿದ್ದು, ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಎಲ್ಲಾ 3 ಪಂದ್ಯಗಳಲ್ಲಿಯೂ ಜಯ ಸಾಧಿಸುವುದರ ಮೂಲಕ ವೈಟ್ ವಾಷ್ ಸಾಧನೆ ಮಾಡಿದೆ. ಅತ್ತ ಟೀಮ್ ಇಂಡಿಯಾ ವಿರುದ್ಧ ಟಿ ಟ್ವೆಂಟಿ ಸರಣಿಯಲ್ಲಿ ವೈಟ್ ವಾಷ್ ಮುಖಭಂಗ ಅನುಭವಿಸಿದ್ದ ನ್ಯೂಜಿಲೆಂಡ್ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಳ್ಳುವ ತವಕದಲ್ಲಿತ್ತು.

ದೊಡ್ಡ ಮೊತ್ತ ಪಡೆಯುತ್ತಿದ್ದ ಧೋನಿಗೆ ಈ ಸಲ ಕಡಿಮೆ ಮೊತ್ತ ಸಿಕ್ಕಿದ್ದಕ್ಕೆ ಕಾರಣ ಆ ಒಬ್ಬ ಆಟಗಾರ!ದೊಡ್ಡ ಮೊತ್ತ ಪಡೆಯುತ್ತಿದ್ದ ಧೋನಿಗೆ ಈ ಸಲ ಕಡಿಮೆ ಮೊತ್ತ ಸಿಕ್ಕಿದ್ದಕ್ಕೆ ಕಾರಣ ಆ ಒಬ್ಬ ಆಟಗಾರ!

ಆದರೆ ಇತ್ತಂಡಗಳ ನಡುವೆ ಕಾನ್ಪುರದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಗೆಲ್ಲುವ ಹಂತದಲ್ಲಿದ್ದ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡದ ಅಂತಿಮ ವಿಕೆಟ್ ಪಡೆಯುವಲ್ಲಿ ವಿಫಲವಾದ ಕಾರಣ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಹಾಗೂ ಈ ಪಂದ್ಯದಿಂದ ವಿಶ್ರಾಂತಿಗೆಂದು ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೊರಗುಳಿದಿದ್ದ ಕಾರಣದಿಂದಾಗಿ ಉಪನಾಯಕ ಅಜಿಂಕ್ಯ ರಹಾನೆ ಅವರೇ ನಾಯಕ ಸ್ಥಾನದಲ್ಲಿ ತಂಡವನ್ನು ಮುನ್ನಡೆಸಿದ್ದರು. ಇನ್ನು ವಿರಾಟ್ ಕೊಹ್ಲಿ ಮುಂಬೈನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಸಿದ್ಧರಾಗಿದ್ದು ನಾಯಕನಾಗಿ ಮರಳಿ ತಂಡ ಸೇರಿಕೊಳ್ಳಲಿದ್ದಾರೆ.

ಐಪಿಎಲ್: ರಿಟೈನ್ ನಂತರ ಆರ್‌ಸಿಬಿ ಅಭಿಮಾನಿಗಳಿಗೆ ಸಿರಾಜ್ ಸಂದೇಶ, ಮ್ಯಾಕ್ಸ್‌ವೆಲ್ ಭರವಸೆಐಪಿಎಲ್: ರಿಟೈನ್ ನಂತರ ಆರ್‌ಸಿಬಿ ಅಭಿಮಾನಿಗಳಿಗೆ ಸಿರಾಜ್ ಸಂದೇಶ, ಮ್ಯಾಕ್ಸ್‌ವೆಲ್ ಭರವಸೆ

ಇನ್ನು ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಕಾರಣ ಶ್ರೇಯಸ್ ಅಯ್ಯರ್ ಅವರಿಗೆ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಲಭಿಸಿತ್ತು. ಆದರೆ ಈಗ ವಿರಾಟ್ ಕೊಹ್ಲಿ ತಂಡಕ್ಕೆ ಮರಳುತ್ತಿರುವುದರಿಂದ ಯಾವ ಆಟಗಾರ ತಂಡದಿಂದ ಹೊರಗುಳಿಯಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ವಿರಾಟ್ ಕೊಹ್ಲಿ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವುದರಿಂದ ಈ ಕೆಳಕಂಡ ಮೂವರಲ್ಲಿ ಒಬ್ಬರು ಟೀಮ್ ಇಂಡಿಯಾದಿಂದ ಹೊರ ಬೀಳುವುದು ಖಚಿತ.

ಅಜಿಂಕ್ಯ ರಹಾನೆ

ಅಜಿಂಕ್ಯ ರಹಾನೆ

ಅಜಿಂಕ್ಯ ರಹಾನೆ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿಯೂ ಕೂಡ ತಮ್ಮ ಕಳಪೆ ಫಾರ್ಮ್ ಮುಂದುವರಿಸಿದ್ದಾರೆ. ಸುಮಾರು ಒಂದೂವರೆ ವರ್ಷಗಳಿಂದ ಬ್ಯಾಟಿಂಗ್ ಲಯ ಕಂಡುಕೊಳ್ಳಲಾಗದೆ ಪರಿತಪಿಸುತ್ತಿರುವ ಅಜಿಂಕ್ಯ ರಹಾನೆ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಸ್ಥಾನ ಬಿಟ್ಟುಕೊಟ್ಟು ತಂಡದಿಂದ ಹೊರ ನಡೆಯುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ. ಆದರೆ ಅಜಿಂಕ್ಯ ರಹಾನೆ ಭಾರತ ಟೆಸ್ಟ್ ತಂಡದ ಉಪನಾಯಕನಾಗಿರುವ ಕಾರಣ ತಂಡದಿಂದ ಹೊರಗುಳಿದಿರುವುದು ಒಂದೆಡೆ ಅನುಮಾನ ಮೂಡಿಸಿದೆ.

ಚೇತೇಶ್ವರ್ ಪೂಜಾರ

ಚೇತೇಶ್ವರ್ ಪೂಜಾರ

ಅಜಿಂಕ್ಯ ರಹಾನೆ ರೀತಿ ಚೇತೇಶ್ವರ್ ಪೂಜಾರ ಕೂಡ ಕಳೆದೆರಡು ವರ್ಷಗಳಿಂದ ಫಾರ್ಮ್ ಕಳೆದುಕೊಂಡಿದ್ದಾರೆ. ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತಿಯನ್ನು ಪಡೆದಿದ್ದ ಚೇತೇಶ್ವರ್ ಪೂಜಾರ ಇತ್ತೀಚೆಗೆ ತಾವು ಭಾಗವಹಿಸಿದ ಟೆಸ್ಟ್ ಪಂದ್ಯಗಳಲ್ಲಿ ದೊಡ್ಡ ಇನ್ನಿಂಗ್ಸ್ ನಿರ್ಮಿಸುವಲ್ಲಿ ಎಡವಿದ್ದಾರೆ. ಹಾಗೂ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿಯೂ ಕೂಡಾ ಚೇತೇಶ್ವರ್ ಪೂಜಾರ ತಂಡಕ್ಕೆ ಆಸರೆಯಾಗುವಂಥ ಪ್ರದರ್ಶನವನ್ನೇನೂ ನೀಡಲಿಲ್ಲ. ಹೀಗಾಗಿ ವಿರಾಟ್ ಕೊಹ್ಲಿ ಆಗಮಿಸುವುದರಿಂದ ಚೇತೇಶ್ವರ್ ಪೂಜಾರ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಿವೆ.

ಶ್ರೇಯಸ್ ಅಯ್ಯರ್ ಹೊರಗಿಡುವುದು ದೂರದ ಮಾತು

ಶ್ರೇಯಸ್ ಅಯ್ಯರ್ ಹೊರಗಿಡುವುದು ದೂರದ ಮಾತು

ವಿರಾಟ್ ಕೊಹ್ಲಿ ಅನುಪಸ್ಥಿತಿ ಇದ್ದ ಕಾರಣ ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಯುವ ಆಟಗಾರ ಶ್ರೇಯಸ್ ಅಯ್ಯರ್ ಸಿಕ್ಕ ಅವಕಾಶವನ್ನು ತುಂಬ ದೊಡ್ಡ ಮಟ್ಟದಲ್ಲಿ ಬಳಸಿಕೊಂಡರು. ನ್ಯೂಜಿಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ ಶ್ರೇಯಸ್ ಅಯ್ಯರ್ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅರ್ಧ ಶತಕ ಬಾರಿಸಿ ದಾಖಲೆ ನಿರ್ಮಿಸುವುದರ ಜೊತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಕೂಡ ಬಾಚಿಕೊಂಡರು. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಿಂದ ಶ್ರೇಯಸ್ ಅಯ್ಯರ್ ಅವರನ್ನು ಹೊರಗಿಡುವ ಸಾಹಸಕ್ಕೆ ಕೈ ಹಾಕುವುದು ದೂರದ ಮಾತು ಎಂದೇ ಹೇಳಬಹುದು.

ಕೆಲವೇ ದಿನಗಳಲ್ಲಿ Virat Kohli ಬಗ್ಗೆ BCCI ನಿಂದ ಶಾಕಿಂಗ್ ನ್ಯೂಸ್!! | Oneindia Kannada

Story first published: Thursday, December 2, 2021, 17:57 [IST]
Other articles published on Dec 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X