IND vs NZ 1st T20I : ಕಿವೀಸ್ ಎದುರಿಸಲು ಯುವಪಡೆ ಸಿದ್ಧ, ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಆತಂಕ, ಪಿಚ್ ರಿಪೋರ್ಟ್

ಸೆಮಿಫೈನಲ್‌ನಲ್ಲಿ ಸೋತು ಟಿ20 ವಿಶ್ವಕಪ್‌ನಿಂದ ನಿರ್ಗಮಿಸಿದ ಭಾರತ ಮತ್ತು ನ್ಯೂಜಿಲೆಂಡ್ ಶುಕ್ರವಾರ ವೆಲ್ಲಿಂಗ್ಟನ್‌ನಲ್ಲಿ ಮೊದಲನೇ ಟಿ20 ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ವಿಶ್ವಕಪ್ ಸೋಲಿನ ನಿರಾಸೆಯಿಂದ ಹೊರ ಬರಲು ಚಿಂತಿಸುತ್ತಿವೆ. ಆದರೆ, ಮೊದಲನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಆತಂಕ ಎದುರಾಗಿದೆ.
2024ರ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಬಿಸಿಸಿಐ ಭಾರತ ತಂಡದಲ್ಲಿ ಸಾಕಷ್ಟು ಬದಲಾವಣೆ ತರಲು ನೋಡುತ್ತಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಸೇರಿದಂತೆ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ್ದು, ವಿಶ್ವಕಪ್‌ನಲ್ಲಿ ಸ್ಥಾನ ಪಡೆಯದ ಪ್ರತಿಭಾವಂತ ಯುವ ಆಟಗಾರರಿಗೆ ಅವಕಾಶ ನೀಡಿದೆ. ನ್ಯೂಜಿಲೆಂಡ್‌ನಂತಹ ಬಲಿಷ್ಠ ತಂಡವನ್ನು ಅವರದೇ ನೆಲದಲ್ಲಿ ಸೋಲಿಸುವುದು ಸುಲಭವಲ್ಲ, ಇದೇ ಭಾರತದ ಯುವ ತಂಡಕ್ಕೆ ಸವಾಲಾಗಿದೆ.
ರೋಹಿತ್ ಅನುಪಸ್ಥಿತಿಯಲ್ಲಿ ಈ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ಆಡಿದ ಮೊದಲ ಐಪಿಎಲ್ ಆವೃತ್ತಿಯಲ್ಲೇ ಚಾಂಪಿಯನ್ ಎನಿಸಿಕೊಂಡಿದೆ. ಐಪಿಎಲ್‌ನಲ್ಲಿ ಯಶಸ್ವಿ ನಾಯಕನಾಗಿರುವ ಪಾಂಡ್ಯ ನ್ಯೂಜಿಲೆಂಡ್ ಸರಣಿಯಲ್ಲಿ ಕೂಡ ತಮ್ಮ ಸಾಮರ್ಥ್ಯ ತೋರಿಸಲು ಸಿದ್ಧವಾಗಿದ್ದಾರೆ.

ಲಕ್ಷ್ಮಣ್ ತರಬೇತಿ, ಭಾರತ ಹೊಸ ಆರಂಭಿಕ ಜೋಡಿ
ಟಿ20 ವಿಶ್ವಕಪ್ ನಂತರ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್‌ರಿಗೂ ಕೂಡ ವಿಶ್ರಾಂತಿ ನೀಡಲಾಗಿದ್ದು, ವಿವಿಎಸ್ ಲಕ್ಷ್ಮಣ್ ನ್ಯೂಜಿಲೆಂಡ್ ಸರಣಿಯಲ್ಲಿ ಭಾರತ ತಂಡಕ್ಕೆ ಕೋಚ್ ಆಗಿ ಕೆಲಸ ಮಾಡಲಿದ್ದಾರೆ.
ವಿವಿಎಸ್ ಲಕ್ಷ್ಮಣ್ ಮತ್ತು ನಾಯಕ ಹಾರ್ದಿಕ್ ಪಾಂಡ್ಯ ಈಗಾಗಲೇ ಕಿವೀಸ್ ಪಡೆಯನ್ನು ಮಣಿಸಲು ರಣತಂತ್ರ ರೂಪಿಸಿದ್ದಾರೆ. ಭಾರತ ತಂಡಕ್ಕೆ ಈಗ ಅತ್ಯುತ್ತಮ ಆರಂಭಿಕ ಜೋಡಿಯ ಅಗತ್ಯವಿದ್ದು, ಈ ಸರಣಿಯಲ್ಲಿ ಹೊಸ ಆರಂಭಿಕ ಜೋಡಿಯನ್ನು ನೋಡಬಹುದಾಗಿದೆ. ಇಶಾನ್ ಕಿಶನ್ ಜೊತೆ ಸಂಜು ಸ್ಯಾಮ್ಸನ್, ಶುಭಮನ್ ಗಿಲ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
ಆಸಿಸ್ ವಿರುದ್ಧದ ಸೋಲಿನಿಂದ ತಲೆಕೆಡಿಸಿಕೊಂಡಿಲ್ಲ: ಮೊದಲ ಏಕದಿನ ಪಂದ್ಯದ ಬಳಿಕ ಬಟ್ಲರ್ ಪ್ರತಿಕ್ರಿಯೆ

ಇಡೀ ದಿನ ಮಳೆಯಾಗುವ ಸಾಧ್ಯತೆ
ಮೊದಲನೇ ಟಿ20 ಪಂದ್ಯಕ್ಕೆ ಮುನ್ನ ಪಂದ್ಯಕ್ಕೆ ಮಳೆ ಆತಂಕ ಎದುರಾಗಿದೆ. ಶುಕ್ರವಾರ ವೆಲ್ಲಿಂಗ್ಟನ್‌ನಲ್ಲಿ 80-90 ಪ್ರತಿಶತ ಮಳೆಯಾಗುವ ಸಾಧ್ಯತೆ ಇದೆ ಎಂದು ನ್ಯೂಜಿಲೆಂಡ್ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವೆಲ್ಲಿಂಗ್ಟನ್‌ನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಮಳೆಯ ಕಾಟದಿಂದ ಭಾರತ-ನ್ಯೂಜಿಲೆಂಡ್ ಪಂದ್ಯ ತಡವಾಗಿ ಆರಂಭವಾಗುವ ಸಾಧ್ಯತೆ ಇದೆ.
ವೆಲ್ಲಿಂಗ್ಟನ್‌ನ ಸ್ಕೈ ಸ್ಟೇಡಿಯಂ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ವೇಗದ ಔಟ್ ಫೀಲ್ಡ್ ಇದ್ದು ಸುಲಭವಾಗಿ ಬೌಂಡರಿ ಗಳಿಸಬಹುದು. ಇದುವರೆಗೂ ಇಲ್ಲಿ 19 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿದ್ದು, 10 ಪಂದ್ಯಗಳಲ್ಲಿ ಚೇಸಿಂಗ್ ಮಾಡುವ ತಂಡ ಜಯ ಸಾಧಿಸಿದ್ದರೆ, 9 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ತಂಡ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ 170 ಕ್ಕೂ ಅಧಿಕ ರನ್ ಗಳಿಸಿದರೆ ಚೇಸಿಂಗ್ ಮಾಡುವ ತಂಡಕ್ಕೆ ಗೆಲುವಿನ ಸಾಧ್ಯತೆ ಹೆಚ್ಚಿದೆ.

ಸಂಭವನೀಯ ಪ್ಲೇಯಿಂಗ್ XI
ಭಾರತ: ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ (ನಾಯಕ), ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ) ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಆಡಮ್ ಮಿಲ್ನೆ, ಇಶ್ ಸೋಧಿ, ಲಾಕಿ ಫರ್ಗುಸನ್
ಭಾರತ-ನ್ಯೂಜಿಲೆಂಡ್ ಮೊದಲನೇ ಟಿ20 ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ಡಿಡಿ ಸ್ಪೋರ್ಟ್ಸ್‌ನಲ್ಲಿ ಪಂದ್ಯವನ್ನು ನೇರಪ್ರಸಾರ ಮಾಡಲಾಗುತ್ತದೆ. ಅಮೇಜಾನ್ ಪ್ರೈಮ್‌ನಲ್ಲಿ ಕೂಡ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications