Ravindra Jadeja: ವಾಂಖೆಂಡೆ ಟೆಸ್ಟ್‌ನಲ್ಲಿ ವಿಶೇಷ ಸಾಧನೆ ಮಾಡಲಿರುವ ಜಡೇಜಾ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ನವೆಂಬರ್ 1 ರಿಂದ ಆರಂಭವಾಗಲಿದೆ. ಈಗಾಗಲೇ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಸರಣಿ ಸೋತಿದೆ.
ಈ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಹಲವು ದಾಖಲೆಗಳನ್ನು ಮಾಡಿವೆ. ಬೆಂಗಳೂರು ಮತ್ತು ಪುಣೆಯಲ್ಲಿ ನಡೆದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ತವರಿನಲ್ಲಿ ಭಾರತವನ್ನು ಸೋಲಿಸಿ ಕಿವೀಸ್ ಪಡೆ ಐತಿಹಾಸಿಕ ದಾಖಲೆ ಮಾಡಿದೆ. ಇದೀಗ ವಾಂಖೆಂಡೆಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಸ್ಟಾರ್ ಸ್ಪಿನ್ನರ್ ರವೀಂದ್ರ ಜಡೇಜಾ ವಿಶೇಷ ಸಾಧನೆ ಮಾಡುವ ಹೊಸ್ತಿಲಲ್ಲಿದ್ದಾರೆ.

ರವೀಂದ್ರ ಜಡೇಜಾ ವಾಂಖೆಂಡ್ ಟೆಸ್ಟ್ ಪಂದ್ಯದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಲಿದ್ದಾರೆ. ಆಸ್ಟ್ರೇಲಿಯಾದ ಬ್ರೆಟ್ ಲೀ, ಟೀಮ್ ಇಂಡಿಯಾದ ಜಹೀರ್ ಖಾನ್ ಮತ್ತು ಇಶಾಂತ್ ಶರ್ಮಾ ಅವರ ಟೆಸ್ಟ್ ಕ್ರಿಕೆಟ್ ದಾಖಲೆಗಳನ್ನು ಜಡೇಜಾ ಹಿಂದಿಕ್ಕಲಿದ್ದಾರೆ. ಈ ಹೊಸ ದಾಖಲೆ ಮಾಡಲು ಜಡೇಜಾಗೆ 3 ವಿಕೆಟ್‌ಗಳ ಅಗತ್ಯವಿದೆ.
ರವೀಂದ್ರ ಜಡೇಜಾ ಇದುವರೆಗೆ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 309 ವಿಕೆಟ್ ಪಡೆದಿದ್ದಾರೆ. ವಾಂಖೆಂಡೆ ಟೆಸ್ಟ್ ಪಂದ್ಯದಲ್ಲಿ ಮೂರು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೆ, ಬ್ರೆಟ್ ಲೀ, ಜಹೀರ್ ಖಾನ್ ಮತ್ತು ಇಶಾಂತ್ ಶರ್ಮಾ ಅವರನ್ನು ಹಿಂದಿಕ್ಕಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಬ್ರೆಟ್ ಲೀ 310 ವಿಕೆಟ್, ಜಹೀರ್ ಖಾನ್ ಮತ್ತು ಇಶಾಂತ್ ಶರ್ಮಾ ಕ್ರಮವಾಗಿ 311 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
ಹೆಡ್ಲಿ ದಾಖಲೆ ಮೇಲೆ ಕಣ್ಣು
ನ್ಯೂಜಿಲೆಂಡ್‌ನ ದಿಗ್ಗಜ ಬೌಲರ್ ಸರ್ ರಿಚರ್ಡ್ ಹ್ಯಾಡ್ಲಿ ಅವರನ್ನು ಹಿಂದಿಕ್ಕುವ ಅವಕಾಶವನ್ನು ಜಡೇಜಾ ಹೊಂದಿದ್ದಾರೆ. ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದಿರುವ ದಾಖಲೆ ಪಟ್ಟಿಯಲ್ಲಿ ಜಡೇಜಾ ಮುನ್ನುಗಲಿದ್ದಾರೆ. ಇದಕ್ಕಾಗಿ ಜಡೇಜಾ ವಾಂಖೆಂಡ್ ಟೆಸ್ಟ್‌ನಲ್ಲಿ 7 ವಿಕೆಟ್ ಪಡೆಯಬೇಕು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೆಡ್ಲಿ 589 ವಿಕೆಟ್‌ಗಳನ್ನು ಪಡೆದಿದ್ದಾರೆ. ಜಡೇಜಾ ಪ್ರಸ್ತುತ 583 ವಿಕೆಟ್‌ಗಳನ್ನು ಪಡೆದಿದ್ದಾರೆ.
ಜಡೇಜಾ ಪ್ರದರ್ಶನ
ನ್ಯೂಜಿಲೆಂಡ್ ಟೆಸ್ಟ್ ಸರಣಿಯಲ್ಲಿ ಜಡೇಜಾ ಅವರಿಂದ ಹೇಳಿಕೊಳ್ಳುವಂತ ಪ್ರದರ್ಶನ ಮೂಡಿ ಬಂದಿಲ್ಲ. ಬೆಂಗಳೂರು ಟೆಸ್ಟ್‌ನಲ್ಲಿ ಅವರು ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ತಂಡಕ್ಕೆ ಆಸರೆಯಾಗಲಿಲ್ಲ. ಜಡೇಜಾ ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ 5 ರನ್ ಗಳಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯದೆ ಔಟಾಗಿ ನಿರಾಸೆ ಮೂಡಿಸಿದರು. ಬೌಲಿಂಗ್‌ನಲ್ಲಿ ಮೂರು ವಿಕೆಟ್ ಪಡೆದರು.
ಪುಣೆ ಟೆಸ್ಟ್ ಪಂದ್ಯದಲ್ಲಿ ಅವರು ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಎರಡೂ ಇನ್ನಿಂಗ್ಸ್‌ಗಳಲ್ಲಿ ಜಡೇಜಾ ಕ್ರಮವಾಗಿ 38 ಮತ್ತು 42 ರನ್ ಗಳಿಸಿದರು. ಈ ಪಂದ್ಯದಲ್ಲೂ ಅವರು ಮೂರು ವಿಕೆಟ್ ಪಡೆದರು. ಮೂರನೇ ಪಂದ್ಯದಲ್ಲಿ ಅವರಿಂದ ಉತ್ತಮ ಪ್ರದರ್ಶನವನ್ನು ತಂಡ ನಿರೀಕ್ಷಿಸಲಿದೆ. ಜೊತೆಗೆ ಅವರು ದಾಖಲೆ ಮಾಡುವ ತವಕದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications