ಟೆಸ್ಟ್ ಇತಿಹಾಸದಲ್ಲಿ ಭಾರತದ ಪರ ಹೊಸ ದಾಖಲೆ ಬರೆದ ಶ್ರೇಯಸ್ ಐಯ್ಯರ್

ಟೀಮ್ ಇಂಡಿಯಾ ಪರವಾಗಿ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಲು ಇಳಿದ ಶ್ರೇಯಸ್ ಐಯ್ಯರ್ ಅಮೋಘ ಪ್ರದರ್ಶನ ನಿಡಿ ಟೀಮ್ ಇಂಡಿಯಾಗೆ ಎರಡು ಇನ್ನಿಂಗ್ಸ್‌ನಲ್ಲಿಯೂ ಆಸರೆಯಾಗಿದ್ದಾರೆ. ಶ್ರೇಯಸ್ ಐಯ್ಯರ್ ಪ್ರದರ್ಶಿಸಿದ ಅಮೋಘ ಆಟದಿಂದಾಗಿ ಭಾರತ ಒಂದು ಹಂತಕ್ಕೆ ಸುಸ್ಥಿತಿಯಲ್ಲಿದೆ. ಈ ಪಂದ್ಯದಲ್ಲಿ ಎರಡು ಇನ್ನಿಂಗ್ಸ್‌ನಲ್ಲಿಯೂ ಶ್ರೇಯಸ್ ಐಯ್ಯರ್ ಭಾರತದ ಪರವಾಗಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನಾಗಿದ್ದಾರೆ. ಅಲ್ಲದೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಯಸ್ ಐಯ್ಯರ್ ಹೊಸ ದಾಖಲೆಯನ್ನು ಬರೆದಿದ್ದಾರೆ.

ಕಾನ್ಪುರದ ಗ್ರೀನ್‌ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಆಡುವ ಅವಕಾಶ ಪಡೆದುಕೊಂಡರು. ಇದರಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಶ್ರೇಯಸ್ ಐಯ್ಯರ್ ಭರ್ಜರಿ 105 ರನ್‌ಗಳಿಸಿದ್ದು ಟೀಮ್ ಇಂಡಿಯಾ 345 ರನ್‌ಗಳ ಉತ್ತಮ ಮೊತ್ತ ಪೇರಿಸಲು ಕಾರಣವಾದರು. ಎರಡನೇ ಇನ್ನಿಂಗ್ಸ್‌ನಲ್ಲಿ ಕಿವೀಸ್ ಪಡೆಯ ಬೌಲಿಂಗ್ ದಾಳಿಗೆ ಭಾರತದ ಅಗ್ರ ಕ್ರಮಾಂಕದ ಆಟಗಾರರು ವಿಕೆಟ್ ಕಳೆದುಕೊಳ್ಳುತ್ತಿದ್ದರೆ ಶ್ರೇಯಸ್ ಐಯ್ಯರ್ ಮತ್ತೊಮ್ಮೆ ತಂಡಕ್ಕೆ ಆಸರೆಯಾಗುವ ಮೂಲಕ ತಂಡವನ್ನು ಕುಸಿತದಿಂದ ಮೇಲಕ್ಕೆತ್ತಿದ್ದರು.

ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ ಹೊಸ ರೂಪಾಂತರದ ಭಯ: ಭಾರತ 'A' ಕ್ರಿಕೆಟ್ ಸರಣಿ ಮುಂದುವರಿಕೆಗೆ ಮುಂದಾದ ಬಿಸಿಸಿಐ!ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್ ಹೊಸ ರೂಪಾಂತರದ ಭಯ: ಭಾರತ 'A' ಕ್ರಿಕೆಟ್ ಸರಣಿ ಮುಂದುವರಿಕೆಗೆ ಮುಂದಾದ ಬಿಸಿಸಿಐ!

ಮೊದಲ ಪಂದ್ಯದಲ್ಲಿ ಶತಕ, ಅರ್ಧ ಶತಕದ ಸಾಧನೆ

ಮೊದಲ ಪಂದ್ಯದಲ್ಲಿ ಶತಕ, ಅರ್ಧ ಶತಕದ ಸಾಧನೆ

ಶ್ರೇಯಸ್ ಐಯ್ಯರ್ ತಮ್ಮ ಚೊಚ್ಚಲ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಶತಕ ಸಿಡಿಸಿದ್ದರು. 105 ರನ್‌ಗಳ ನಿರ್ಣಾಯಕ ಕೊಡುಗೆ ನಿಡಿದ್ದರು ಐಯ್ಯರ್. ಎರಡನೇ ಇನ್ನಿಂಗ್ಸ್‌ನಲ್ಲಿಯೂ ಐಯ್ಯರ್ ಅರ್ಧ ಶತಕದ ಸಾಧನೆ ಮಾಡಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ 125 ಎಸೆತ ಎದುರಿಸಿದ ಶ್ರೇಯಸ್ ಐಯ್ಯರ್ 65 ರನ್‌ಗಳ ಮಹತ್ವದ ಕೊಡುಗೆ ನೀಡಿದ್ದಾರೆ.

ಟೆಸ್ಟ್ ಇತಿಹಾಸದಲ್ಲಿ ಭಾರತದ ಪರ ಮೊದಲ ಸಾಧನೆ

ಟೆಸ್ಟ್ ಇತಿಹಾಸದಲ್ಲಿ ಭಾರತದ ಪರ ಮೊದಲ ಸಾಧನೆ

ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ಒಂದೇ ಪಮದ್ಯದಲ್ಲಿ ಶತಕ ಹಾಗೂ ಅರ್ಧ ಶತಕದ ಸಾಧನೆಯನ್ನು ಭಾರತದ ಪರವಾಗಿ ಯಾರೂ ಈವರೆಗೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಶ್ರೇಯಸ್ ಐಯ್ಯರ್ ಈ ಸಾಧನೆ ಮಾಡಿ ಭಾರತದ ಪರವಾಗಿ ಹೊಸ ದಾಖಲೆ ಬರೆದಿದ್ದಾರೆ. ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟಾರೆಯಾಗಿ ಈ ಸಾಧನೆ ಮಾಡಿದ 16ನೇ ಕ್ರಿಕೆಟಿಗ ಎನಿಸಿದ್ದಾರೆ ಶ್ರೇಯಸ್ ಐಯ್ಯರ್.

ಕುಸಿತದಿಂದ ಪಾರು ಮಾಡಿದ ಐಯ್ಯರ್-ಅಶ್ವಿನ್

ಕುಸಿತದಿಂದ ಪಾರು ಮಾಡಿದ ಐಯ್ಯರ್-ಅಶ್ವಿನ್

ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಆರಂದಲ್ಲಿಯೇವ ಭಾರೀ ಕುಸಿತಕ್ಕೆ ಒಳಗಾಯಿತು. ತಂಡದ ಮೊತ್ತ 51 ರನ್‌ಗಳಾಗುವಷ್ಟರಲ್ಲಿ ಪ್ರಮುಖ ಐದು ವಿಕೆಟ್ ಕಳೆದುಕೊಂಡಿತ್ತು ಟೀಮ್ ಇಂಡಿಯಾ. ನಂತರ ಶ್ರೇಯಸ್ ಐಯ್ಯರ್ ಹಾಗೂ ರವಿಚಂದ್ರನ್ ಅಶ್ವನ್ ಅರ್ಧ ಶತಕದ ಜೊತೆಯಾಟ ನೀಡುವ ಮೂಲಕ ಕುಸಿತದಿಂದ ಒಂದು ಮಟ್ಟಕ್ಕೆ ಪಾರು ಮಾಡುವಲ್ಲಿ ಯಶಸ್ವಿಯಾದರು. 62 ಎಸೆತಗಳಲ್ಲಿ 32 ರನ್‌ಗಳಸಿಇದ ಆರ್ ಅಶ್ವಿನ್ ಕೆಳ ಕ್ರಮಾಂಕದಲ್ಲಿ ಉತ್ತಮವಾಗಿ ಸಾಥ್ ನೀಡಿದರು. ನಂತರ ವೃದ್ಧಿಮಾನ್ ಸಾಹಾ ಜೊತೆಗೆ ಸೇರಿಕೊಂಡು ಐಯ್ಯರ್ ಮತ್ತುಂದು ಅರ್ಧ ಶತಕದ ಜೊತೆಯಾಟದಲ್ಲಿ ಭಾಗಿಯಾದರು. ತಮಡದ ಮೊತ್ತ 167 ರನ್‌ಗಳಾಗಿದ್ದಾಗ 7ನೇ ವಿಕೆಟ್ ರೂಪದಲ್ಲಿ ಶ್ರೇಯಸ್ ಐಯ್ಯರ್ ಫೆವಿಲಿಯನ್ ಸೇರಿಕೊಂಡಿದ್ದಾರೆ.

KS Bharath ಪಂದ್ಯಕ್ಕೆ ಸಿದ್ದವಾಗಿದ್ದು ಕೇವಲ 12 ನಿಮಿಷದಲ್ಲಿ | Oneindia Kannada
ಉತ್ತಮ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಉತ್ತಮ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್‌ನಲ್ಲಿ ಆರಂಭಿಕ ಕುಸಿತ ಕಂಡಿದ್ದರು ಸದ್ಯಕ್ಕೆ ಉತ್ತಮ ಸ್ಥಿತಿಯಲ್ಲಿದೆ. ಮಧ್ಯಮ ಹಾಗೂ ಕೆಳ ಕ್ರಮಾಂಕದಲ್ಲಿ ಆಟಗಾರರು ನಿರ್ಣಾಯಕ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಎರಡನೇ ಇನ್ನಿಂಗ್ಸ್‌ನಲ್ಲಿ ಕಿವೀಸ್ ಪಡೆಗೆ ಸವಾಲಿನ ಗುರಿ ನೀಡುವುದು ಸ್ಪಷ್ಟವಾಗಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, November 28, 2021, 15:39 [IST]
Other articles published on Nov 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X