ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್‌: ಈ ಇಬ್ಬರಿಗೆ ಅವಕಾಶ ನೀಡದೇ ಇರುವುದು ಸರಿಯಲ್ಲ ಎಂದು ಗರಂ ಆದ ಗವಾಸ್ಕರ್

IND vs NZ: Sunil Gavaskar raised the question about omission of Rahul Chahar and Varun Chakravarthy

ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಪ್ರಸ್ತುತ ಯುಎಇಯಲ್ಲಿ ಜರಗುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿನ ತನ್ನ ಪಯಣವನ್ನು ಮುಗಿಸಿದೆ. ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಟೂರ್ನಿಯಲ್ಲಿ ಸೆಮಿಫೈನಲ್ ಹಂತವನ್ನು ಪ್ರವೇಶಿಸುವಲ್ಲಿ ಎಡವಿರುವ ಟೀಮ್ ಇಂಡಿಯಾ ಲೀಗ್ ಹಂತದಲ್ಲಿಯೇ ಹೊರಬೀಳುವ ಮೂಲಕ ಮುಖಭಂಗಕ್ಕೊಳಗಾಗಿದೆ.

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ತನ್ನ ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋಲನ್ನು ಅನುಭವಿಸಿದ್ದ ಟೀಂ ಇಂಡಿಯಾ ನಂತರ ನಡೆದ ಆಫ್ಘಾನಿಸ್ತಾನ ಸ್ಕಾಟ್ಲೆಂಡ್ ಮತ್ತು ನಮೀಬಿಯಾ ತಂಡಗಳ ವಿರುದ್ಧ ನಡೆದ ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿತು. ಆದರೆ ಸೆಮಿ ಫೈನಲ್ ಸುತ್ತನ್ನು ಪ್ರವೇಶಿಸಲು ಬೇಕಾಗಿದ್ದ ಅಂಕಗಳನ್ನು ಗಳಿಸುವಲ್ಲಿ ಎಡವಿದ ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ.

ಟಿ20 ವಿಶ್ವಕಪ್: 5 ವರ್ಷಗಳಿಂದ ಮುರಿಯಲಾಗದಿದ್ದ ಅತಿಹೆಚ್ಚು ವೀಕ್ಷಣೆಯ ದಾಖಲೆ ಮುರಿದಿದೆ ಈ ಒಂದು ಪಂದ್ಯಟಿ20 ವಿಶ್ವಕಪ್: 5 ವರ್ಷಗಳಿಂದ ಮುರಿಯಲಾಗದಿದ್ದ ಅತಿಹೆಚ್ಚು ವೀಕ್ಷಣೆಯ ದಾಖಲೆ ಮುರಿದಿದೆ ಈ ಒಂದು ಪಂದ್ಯ

ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿರುವ ಟೀಮ್ ಇಂಡಿಯಾ ನವೆಂಬರ್‌ 17ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಸದ್ಯ ತಯಾರಿಯನ್ನು ನಡೆಸಿಕೊಳ್ಳುತ್ತಿದ್ದು, ಇತ್ತೀಚೆಗಷ್ಟೇ ಈ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಟೀಮ್ ಇಂಡಿಯಾದ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ. ಈ ತಂಡದಿಂದ ವಿರಾಟ್ ಕೊಹ್ಲಿ ವಿಶ್ರಾಂತಿಯ ಕಾರಣದಿಂದಾಗಿ ಹೊರಗುಳಿದಿದ್ದು ಭಾರತ ಟಿ ಟ್ವೆಂಟಿ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ರೋಹಿತ್ ಶರ್ಮಾ ಅವರೇ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.

ಕೆಲವರಿಗೆ ಅವಕಾಶ ನೀಡದೇ ಇರುವುದರ ಕುರಿತು ಕೇಳಿಬಂತು ಕೂಗು

ಕೆಲವರಿಗೆ ಅವಕಾಶ ನೀಡದೇ ಇರುವುದರ ಕುರಿತು ಕೇಳಿಬಂತು ಕೂಗು

ಇನ್ನು ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ಕೆಲ ಆಟಗಾರರಿಗೆ ಸ್ಥಾನ ನೀಡದೆ ಇರುವುದರ ಕುರಿತು ಈಗಾಗಲೇ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ ಮತ್ತು ಪ್ರಶ್ನೆಗಳು ಎದುರಾಗುತ್ತಿವೆ. ಅದರಂತೆ ಇದೀಗ ಭಾರತದ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಕೂಡ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ವರುಣ್ ಚಕ್ರವರ್ತಿ ಮತ್ತು ರಾಹುಲ್ ಅವರಿಗೆ ಯಾಕೆ ಸ್ಥಾನ ನೀಡಿಲ್ಲ ಎಂಬ ಪ್ರಶ್ನೆಯನ್ನು ಹಾಕಿದ್ದಾರೆ.

ರಾಹುಲ್‌ ಚಹರ್

ರಾಹುಲ್‌ ಚಹರ್

"ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಪ್ರಕಟಿಸಲಾಗಿರುವ ತಂಡದಲ್ಲಿ ರಾಹುಲ್ ಚಹರ್ ಅವರಿಗೆ ಯಾಕೆ ಸ್ಥಾನ ನೀಡಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಂತಹ ಮಹತ್ವದ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ರಾಹುಲ್ ಚಾಹರ್ ಪ್ರತಿ ಓವರ್‌ಗೆ 7.5 ರನ್ ನೀಡಿ ಉತ್ತಮ ಪ್ರದರ್ಶನವನ್ನು ನೀಡಿದರು. ಆದರೂ ಸಹ ಇಂತಹ ಆಟಗಾರನಿಗೆ ತಂಡದಲ್ಲಿ ಸ್ಥಾನ ಯಾಕೆ ನೀಡಿಲ್ಲ ಎಂಬುದು ಮಾತ್ರ ತಿಳಿಯುತ್ತಿಲ್ಲ, ಅಷ್ಟಕ್ಕೂ ರಾಹುಲ್ ಚಹರ್ ತಾನು ಮಾಡಿದ ತಪ್ಪಾದರೂ ಏನು ಎಂದು ಆಶ್ಚರ್ಯ ಪಡುವುದಂತೂ ನಿಜ" ಎಂದು ಸುನಿಲ್ ಗವಾಸ್ಕರ್ ರಾಹುಲ್ ಚಹರ್ ಅವರನ್ನು ಆಯ್ಕೆ ಮಾಡದೇ ಇರುವುದರ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವರುಣ್ ಚಕ್ರವರ್ತಿ

ವರುಣ್ ಚಕ್ರವರ್ತಿ

"ವರುಣ್ ಚಕ್ರವರ್ತಿಗೆ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಪ್ರಕಟವಾಗಿರುವ ಟೀಮ್ ಇಂಡಿಯಾದಲ್ಲಿ ಸ್ಥಾನ ಯಾಕೆ ನೀಡಿಲ್ಲ ಎಂಬುದಕ್ಕೆ ನಿಖರವಾದ ಕಾರಣವನ್ನು ಯಾರೂ ನೀಡಿಲ್ಲ. ಆತ ಗಾಯಕ್ಕೊಳಗಾಗಿದ್ದಾನೆ ಎನ್ನಲಾಗುತ್ತಿದೆ ಆದರೆ ಅದರ ಕುರಿತಾಗಿ ನಮಗೆ ತಿಳಿದಿಲ್ಲ. ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗಿದ್ದ ಆತನ ನ್ಯೂನ್ಯತೆಗಳೇನು ಎಂಬುದನ್ನು ಆತನಿಗೆ ತಿಳಿಸಿದರೆ, ಆತ ಆ ತಪ್ಪುಗಳನ್ನು ತಿದ್ದಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಬಲ್ಲ" ಎಂದು ಸುನಿಲ್ ಗವಾಸ್ಕರ್ ವರುಣ್ ಚಕ್ರವರ್ತಿಯನ್ನು ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪರಿಗಣಿಸದೇ ಹೊರಹಾಕಿರುವುದರ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Story first published: Sunday, November 14, 2021, 8:10 [IST]
Other articles published on Nov 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X