IND vs NZ T20 WC Final: ಭಾರತದ ಪರ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಟಾಪ್ 5 ಬ್ಯಾಟರ್ಸ್
ಅಹಮದಾಬಾದ್: ಟಿ20 ವಿಶ್ವಕಪ್‌ನ ಚಾಂಪಿಯನ್ ಯಾರು ಎಂಬ ಪ್ರಶ್ನೆಗೆ ಭಾನುವಾರ ರಾತ್ರಿಯ ವೇಳೆಗೆ ಉತ್ತರ ಸಿಗಲಿದೆ. ಈ ಬಾರಿ ಪ್ರಶಸ್ತಿಗಾಗಿ ಹಾಲಿ ಚಾಂಪಿಯನ್ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಜಿದ್ದಾಜಿದ್ದಿನ ಫೈಟ್ ನಡೆಸಲಿವೆ. ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರು ಇದ್ದು ಪಂದ್ಯ ರೋಚಕತೆಯಿಂದ ಕೂಡಿದೆ. ತವರಿನಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಈ ವರೆಗೆ ಯಾವುದೇ ತಂಡ ಪ್ರಶಸ್ತಿ ಗೆದ್ದಿಲ್ಲ. ಈ ದಾಖಲೆಯನ್ನು ಬರೆಯುವ ಕನಸಿನಲ್ಲಿ ಭಾರತ ತಂಡವಿದೆ. ಇನ್ನು ನ್ಯೂಜಿಲೆಂಡ್ ಚೊಚ್ಚಲ ಪ್ರಶಸ್ತಿ ಗೆಲುವಿನ ಕನಸಿನಲ್ಲಿದೆ.
ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಬೌಲರ್ ಜಸ್ಪ್ರೀತ್ ಬುಮ್ರಾ. ಈ ರೀತಿಯ ಬೌಲರ್‌ಗಳು ನ್ಯೂಜಿಲೆಂಡ್ ತಂಡದಲ್ಲಿ ಇಲ್ಲ. ಆದರೆ ಬಿಗುವಿನ ದಾಳಿ ನಡೆಸಿ ತಂಡಕ್ಕೆ ಕಾಟ ನೀಡಬಲ್ಲ ಬೌಲರ್‌ಗಳು ಇದ್ದಾರೆ. ಈ ತಂಡ ಟೂರ್ನಿಯಲ್ಲಿ ನೀಡಿದ ಪ್ರದರ್ಶನ ನಿಜಕ್ಕೂ ಭಯ ಹುಟ್ಟಿಸಿದೆ.

ಪಿಚ್ ವರದಿ ಏನು ಹೇಳುತ್ತದೆ?
2024ರಿಂದ ಕೆಂಪು ಮತ್ತು ಕಪ್ಪು ಮಣ್ಣಿನ ಮಿಶ್ರಣವಿರುವ ಈ ಮೇಲ್ಮೈಯಲ್ಲಿ, ಎರಡನೇ ಬಾರಿಗೆ ಬ್ಯಾಟಿಂಗ್ ಮಾಡಿದ ತಂಡಕ್ಕೆ ಹೆಚ್ಚು ಲಾಭವಾಗುತ್ತದೆ. ಈ ಪಂದ್ಯದಲ್ಲೂ ಟಾಸ್ ನಿರ್ಣಾಯಕ ಪಾತ್ರವನ್ನು ವಹಿಸಲಿದೆ. ಅಲ್ಲದೆ ಮೊದಲು ಬ್ಯಾಟ್ ಮಾಡಿದ ತಂಡವು ದೊಡ್ಡ ಮೊತ್ತವನ್ನು ಕಲೆ ಹಾಕಬೇಕು. ಈ ಮೈದಾನದಲ್ಲಿ ಎರಡನೇ ಬಾರಿಗೆ ಬ್ಯಾಟ್ ಮಾಡಿದ ತಂಡ ಹೆಚ್ಚು ಬಾರಿ ಗೆದ್ದಿವೆ.
ಅಂಕಿ ಅಂಶ
- 2019 ರಿಂದೀಚೆಗೆ, ಐಸಿಸಿ ಟೂರ್ನಿಗಳ ನಾಕೌಟ್ ಪಂದ್ಯಗಳಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ 2-2 ಸಮಬಲ ಸಾಧಿಸಿದೆ. ನ್ಯೂಜಿಲೆಂಡ್ 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಮತ್ತು 2021ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಗೆದ್ದು ಬೀಗಿದೆ. ಇನ್ನು ಟೀಮ್ ಇಂಡಿಯಾ 2023ರ ಏಕದಿನ ವಿಶ್ವಕಪ್ ಸೆಮಿಫೈನಲ್ ಮತ್ತು 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಜಯ ಸಾಧಿಸಿದೆ.
ನ್ಯೂಜಿಲೆಂಡ್ ತಂಡ ಚೊಚ್ಚಲ ಪ್ರಶಸ್ತಿಯ ಗೆಲುವಿನ ಕನಸಿನಲ್ಲಿದೆ. ತಂಡ ಏಕದಿನ ಹಾಗೂ ಟಿ20 ವಿಶ್ವಕಪ್‌ನಲ್ಲಿ ಯಾವುದೇ ಟ್ರೋಫಿ ಗೆದ್ದಿಲ್ಲ.
ಫೈನಲ್ ಪಂದ್ಯದಲ್ಲಿ ರಚಿನ್ ರವೀಂದ್ರ ಮೂರು ವಿಕೆಟ್ ಪಡೆದಲ್ಲಿ ಟ್ರೆಂಟ್ ಬೌಲ್ಟ್ ದಾಖಲೆ ಅಳಿಸಿ ಹಾಕಬಹುದು. ರಚಿನ್ ರವೀಂದ್ರ ಈ ಟೂರ್ನಿಯಲ್ಲಿ 11 ವಿಕೆಟ್ ಕಬಳಿಸಿದ್ದಾರೆ.
ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಹೆಚ್ಚು ರನ್ ಬಾರಿಸಿದ ಆಟಗಾರರು
ಇಶಾನ್ ಕಿಶನ್, 8 ಪಂದ್ಯ, 263 ರನ್
ಸೂರ್ಯಕುಮಾರ್ ಯಾದವ್, 8 ಪಂದ್ಯ, 242 ರನ್
ಸಂಜು ಸ್ಯಾಮ್ಸನ್, 4 ಪಂದ್ಯ, 232 ರನ್
ಶಿವಂ ದುಬೆ, 8 ಪಂದ್ಯ, 209 ರನ್
ಹಾರ್ದಿಕ್ ಪಾಂಡ್ಯ, 8 ಪಂದ್ಯ, 199 ರನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications