IND vs NZ : ಸೂರ್ಯಕುಮಾರ್ ಭರ್ಜರಿ ಶತಕ, ಟಿಮ್ ಸೌಥಿ ಹ್ಯಾಟ್ರಿಕ್, ನ್ಯೂಜಿಲೆಂಡ್‌ಗೆ 192 ರನ್‌ಗಳ ಗುರಿ

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಸೂರ್ಯಕುಮಾರ್ ಯಾದವ್ ಅಮೋಘ ಶತಕದ ನೆರವಿನಿಂದ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 191 ರನ್ ಕಲೆಹಾಕಿದೆ.
ಮೌಂಟ್ ಮೌಂಗನುಯಿಯ ಬೇ ಓವಲ್‌ನಲ್ಲಿ ನಡೆಯುತ್ತಿರುವ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಭಾರತದ ಪರವಾಗಿ ರಿಷಬ್ ಪಂತ್ ಮತ್ತು ಇಶಾನ್ ಕಿಶಾನ್ ಇನ್ನಿಂಗ್ಸ್ ಆರಂಭಿಸಿದರು.
ರಿಷಬ್ ಪಂತ್ ಮತ್ತೊಮ್ಮೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು. 13 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿ ಪಂತ್ ಔಟಾದರೆ, ಇಶಾನ್ ಕಿಶನ್ 31 ಎಸೆತಗಳಲ್ಲಿ 36 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ನಂತರ ಬಂದ ಸೂರ್ಯಕುಮಾರ್ ಯಾದವ್ ತಮ್ಮ ಅದ್ಭುತ ಫಾರ್ಮ್ ಮುಂದುವರೆಸಿದರು. ಶ್ರೇಯಸ್ ಅಯ್ಯರ್ ವೇಗವಾಗಿ ರನ್ ಗಳಿಸುವ ಉದ್ದೇಶ ತೋರಿಸಿದರು ಆದರೆ, 13 ರನ್ ಗಳಿಸಿದ್ದಾಗ ಲಾಕಿ ಫರ್ಗುಸನ್ ಬೌಲಿಂಗ್‌ನಲ್ಲಿ ಹಿಟ್ ವಿಕೆಟ್ ಆಗುವ ಮೂಲಕ ನಿರಾಸೆ ಅನುಭವಿಸಿದರು. ನಾಯಕ ಹಾರ್ದಿಕ್ ಪಾಂಡ್ಯ 13 ಎಸೆತಗಳಲ್ಲಿ 13 ರನ್ ಗಳಿಸಿ ಔಟಾದರು.

ಅಮೋಘ ಶತಕ ದಾಖಲಿಸಿ ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಮಾತ್ರ ನ್ಯೂಜಿಲೆಂಡ್ ಬೌಲರ್ ಗಳ ಬೆವರಿಳಿಸಿದರು. ಕೇವಲ 49 ಎಸೆತಗಳಲ್ಲಿ ತಮ್ಮ ಎರಡನೇ ಅಂತಾರಾಷ್ಟ್ರೀಯ ಟಿ20 ಶತಕ ಸಿಡಿಸಿದರು.
51 ಎಸೆತಗಳಲ್ಲಿ 11 ಬೌಂಡರಿ ಮತ್ತು 7 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 111 ರನ್ ಗಳಿಸಿದರು. ರೋಹಿತ್ ಶರ್ಮಾ ನಂತರ ಒಂದೇ ವರ್ಷದಲ್ಲಿ ಎರಡು ಟಿ20 ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎನ್ನುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಇನ್ನಿಂಗ್ಸ್‌ನ ಅಂತಿಮ ಓವರ್ ನಲ್ಲಿ ಟಿಮ್ ಸೌಥೀ ಹ್ಯಾಟ್ರಿಕ್ ಸಾಧನೆ ಮಾಡಿದರು. 20ನೇ ಒವರ್ ನ 3, 4 ಮತ್ತು ಐದನೇ ಎಸೆತದಲ್ಲಿ ಕ್ರಮವಾಗಿ ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ ಮತ್ತು ವಾಷಿಂಗ್ಟನ್ ಸುಂದರ್ ರನ್ನು ಔಟ್ ಮಾಡಿದರು. ಕೊನೆಯ ಓವರ್ ನಲ್ಲಿ ಸೂರ್ಯಕುಮಾರ್ ಯಾದವ್‌ಗೆ ಒಂದು ಬಾಲ್ ಆಡಲು ಕೂಡ ಅವಕಾಶ ಸಿಗಲಿಲ್ಲ.
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ಇಶಾನ್ ಕಿಶನ್, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ(ನಾಯಕ), ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್(ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ, ಲಾಕಿ ಫರ್ಗುಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications