ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND Vs NZ: 3ನೇ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ಅಚ್ಚರಿಯ ನಿರ್ಧಾರ, ಸಂಭಾವ್ಯ ಪ್ಲೇಯಿಂಗ್ ಇಲೆವೆನ್

IND Vs NZ: Team India Looking To Play With Same Playing XI In 3rd ODI

ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2ನೇ ಪಂದ್ಯ ಮಳೆಯಿಂದಾಗಿ ರದ್ದಾದ ನಂತರ ಭಾರತ 3ನೇ ಪಂದ್ಯದಲ್ಲಿ ಗೆಲ್ಲುವ ಒತ್ತಡಕ್ಕೆ ಸಿಲುಕಿದೆ. ಸರಣಿಯಲ್ಲಿ 0-1 ಅಂತರದಲ್ಲಿ ಹಿನ್ನಡೆಯಲ್ಲಿರುವ ಭಾರತ 3ನೇ ಪಂದ್ಯದಲ್ಲಿ ಗೆದ್ದರೆ ಸರಣಿ ಸಮಬಲವಾಗಲಿದ್ದು, ಸೋತರೆ ಸರಣಿಯಲ್ಲಿ ಸೋಲನುಭವಿಸಲಿದೆ.

ಭಾರತ ನ್ಯೂಜಿಲೆಂಡ್ ಏಕದಿನ ಸರಣಿಯ ಕೊನೆಯ ಪಂದ್ಯ ನವೆಂಬರ್ 30 ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿದೆ. 3ನೇ ಪಂದ್ಯದಲ್ಲಿ ಭಾರತ ಪ್ಲೇಯಿಂಗ್‌ XIನಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ನಾಯಕ ಶಿಖರ್ ಧವನ್ ಮತ್ತು ಕೋಚ್ ವಿವಿಎಸ್ ಲಕ್ಷ್ಮಣ್ 2ನೇ ಪಂದ್ಯದಲ್ಲಿ ಇದ್ದ ತಂಡವನ್ನೇ 3ನೇ ಪಂದ್ಯದಲ್ಲಿ ಕಣಕ್ಕಿಳಿಸಲಿದ್ದಾರೆ.

ನಾಯಕ ಮತ್ತು ಕೋಚ್ ನಿರ್ಧಾರದಿಂದ ಸಂಜು ಸ್ಯಾಮ್ಸನ್ ಮತ್ತೊಂದು ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ. ಸರಣಿಯ ಮೊದಲನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಅವರು ಎರಡನೇ ಪಂದ್ಯದಿಂದ ಹೊರಗುಳಿದಿದ್ದರು. ಸಂಜು ಸ್ಯಾಮ್ಸನ್ ಬದಲಾಗಿ ದೀಪಕ್‌ ಹೂಡಾರನ್ನು ಆಯ್ಕೆ ಮಾಡಲಾಗಿತ್ತು.

2ನೇ ಪಂದ್ಯದಲ್ಲಿ ಶಾರ್ದೂಲ್ ಠಾಕುರ್ ಕೂಡ ಹೊರಗುಳಿದಿದ್ದರು, ಅವರು 3ನೇ ಪಂದ್ಯದಲ್ಲಿ ಕೂಡ ಬೆಂಚ್ ಕಾಯಲಿದ್ದು, ದೀಪಕ್ ಚಹರ್ 3ನೇ ಪಂದ್ಯವನ್ನಾಡಲು ಸಿದ್ಧತೆ ನಡೆಸುತ್ತಿದ್ದಾರೆ.

ಸರಣಿಯಲ್ಲಿ ಒಂದೇ ಪಂದ್ಯವನ್ನಾಡಿರುವ ಸ್ಯಾಮ್ಸನ್

ಸರಣಿಯಲ್ಲಿ ಒಂದೇ ಪಂದ್ಯವನ್ನಾಡಿರುವ ಸ್ಯಾಮ್ಸನ್

ಈ ಹಿಂದೆ ಕರ್ನಾಟಕದ ಮನಿಶ್ ಪಾಂಡೆ ಕೂಡ ಇದೇ ರೀತಿ ತಂಡದಲ್ಲಿ ಹೆಚ್ಚಿನ ಅವಧಿಯವರೆಗೆ ಬೆಂಚ್ ಕಾದಿದ್ದರು. ಅಪರೂಪಕ್ಕೆ ಒಮ್ಮೆ ಅವರು ತಂಡದಲ್ಲಿ ಅವಕಾಶ ಪಡೆದರು. ಸಂಜು ಸ್ಯಾಮ್ಸನ್ ಕೂಡ ಈಗ ಅದೇ ಪರಿಸ್ಥಿತಿಯಲ್ಲಿದ್ದಾರೆ.

ಟಿ20 ಸರಣಿಯಲ್ಲಿ ಒಂದು ಪಂದ್ಯವನ್ನು ಕೂಡ ಸ್ಯಾಮ್ಸನ್ ಆಡಲಿಲ್ಲ. ಮೊದಲನೇ ಏಕದಿನ ಪಂದ್ಯದಲ್ಲಿ ಸ್ಥಾನ ಪಡೆದ ಸ್ಯಾಮ್ಸನ್ 33 ರನ್ ಗಳಿಸಿದ್ದರು. ಆದರೆ, 2ನೇ ಪಂದ್ಯಕ್ಕಾಗಿ ಅವರು ದೀಪಕ್ ಹೂಡಾಗೆ ತಮ್ಮ ಸ್ಥಾನ ಬಿಟ್ಟುಕೊಟ್ಟರು. ಸಂಜು ಸ್ಯಾಮ್ಸನ್‌ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಆಡುವ ಅವಕಾಶ ಪಡೆದಿದ್ದಾರೆ, ಬಾಂಗ್ಲಾದೇಶದ ವಿರುದ್ಧದ ಸರಣಿಗೆ ಕೂಡ ಅವರನ್ನು ಆಯ್ಕೆ ಮಾಡಿಲ್ಲ.

ವಿಫಲವಾದರೂ ಪಂತ್‌ಗೆ ಹೆಚ್ಚಿನ ಅವಕಾಶ

ವಿಫಲವಾದರೂ ಪಂತ್‌ಗೆ ಹೆಚ್ಚಿನ ಅವಕಾಶ

ಟಿ20 ಸರಣಿಯಲ್ಲಿ ಸಂಪೂರ್ಣವಾಗಿ ವಿಫಲವಾದ ರಿಷಬ್ ಪಂತ್ ಏಕದಿನ ಪಂದ್ಯದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು. ಮೊದಲನೇ ಏಕದಿನ ಪಂದ್ಯದಲ್ಲಿ ಅವರು ಕಳಪೆ ಪ್ರದರ್ಶನ ನೀಡಿದರೂ, ತಂಡದ ಮ್ಯಾನೇಜ್‌ಮೆಂಟ್‌ ಪಂತ್‌ಗೆ ಹೆಚ್ಚಿನ ಅವಕಾಶ ನೀಡಲು ನಿರ್ಧರಿಸಿದೆ.

ಸಂಜು ಸ್ಯಾಮ್ಸನ್ ಕೂಡ ವಿಕೆಟ್ ಕೀಪರ್ ಬ್ಯಾಟರ್ ಆಗಿದ್ದಾರೆ, ಆದರೆ ಪಂತ್‌ ಹೆಚ್ಚಿನ ಅವಕಾಶ ಪಡೆಯುತ್ತಿರುವುದರಿಂದ ಸ್ಯಾಮ್ಸನ್ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಪಂತ್‌ಗೆ ಹೆಚ್ಚಿನ ಅವಕಾಶ ನೀಡುತ್ತಿರುವ ಬಗ್ಗೆ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡದಿರುವ ಬಗ್ಗೆ ಮಾಜಿ ಕ್ರಿಕೆಟಿಗರು ಸೇರಿದಂತೆ, ಅಭಿಮಾನಿಗಳು ಕೂಡ ಅಸಮಾಧಾನಗೊಂಡಿದ್ದಾರೆ. ಆದರೂ ಕೂಡ, ಪಂತ್ ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಆಡಲಿದ್ದಾರೆ.

ಪಂತ್‌ಗೆ ಕ್ರಿಕೆಟ್‌ನಿಂದ ಬ್ರೇಕ್ ನೀಡಿ ಎಂದು ಮಾಜಿ ಕ್ರಿಕೆಟರ್ ಕೃಷ್ಣಮಾಚಾರಿ ಶ್ರೀಕಾಂತ್ ಕೂಡ ಸಲಹೆ ನೀಡಿದ್ದಾರೆ. ರಿಷಬ್ ಪಂತ್ ತಮಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುತ್ತಿಲ್ಲ ಎಂದು ಶ್ರೀಕಾಂತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉಭಯ ತಂಡಗಳ ಸಂಭಾವ್ಯ XI

ಉಭಯ ತಂಡಗಳ ಸಂಭಾವ್ಯ XI

ಭಾರತ: ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಉಮ್ರಾನ್ ಮಲಿಕ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್

Story first published: Monday, November 28, 2022, 16:36 [IST]
Other articles published on Nov 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X