
ಯುವ ಕ್ರಿಕೆಟಿಗರಿಗೆ ಅವಕಾಶ
2024ರ ಟಿ20 ವಿಶ್ವಕಪ್‌ಗಾಗಿ ಈಗಿನಿಂದಲೇ ಭಾರತ ತಂಡವನ್ನು ಅಣಿಗೊಳಿಸಲು ಬಿಸಿಸಿಐ ನಿರ್ಧರಿಸಿದೆ. ಅದಕ್ಕಾಗಿಯೇ, ನ್ಯೂಜಿಲೆಂಡ್ ವಿರುದ್ಧದ ಪ್ರವಾಸಕ್ಕೆ ಯುವ ಆಟಗಾರರಿಗೆ ಮಣೆ ಹಾಕಿದೆ. ಭಾರತ ತಂಡದ ಯುವ ಪಡೆಯನ್ನು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ, ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ವಿರಾಟ್ ಕೊಹ್ಲಿ ಸೇರಿದಂತೆ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಇಶಾನ್ ಕಿಶನ್, ಸಂಜು ಸ್ಯಾಮ್ಸನ್ ಮತ್ತು ಶುಭ್‌ಮನ್ ಗಿಲ್ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದರು. ಭವಿಷ್ಯದಲ್ಲಿ ಭಾರತದ ಬ್ಯಾಟಿಂಗ್ ವಿಭಾಗವನ್ನು ಇವರು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಮುಂದಿನ ಟಿ20 ವಿಶ್ವಕಪ್ ಅನ್ನು 2024 ರಲ್ಲಿ ಕೆರಿಬಿಯನ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಆಯೋಜಿಸಲಾಗುತ್ತಿದೆ.
IND vs NZ: ನ್ಯೂಜಿಲೆಂಡ್ ಪ್ರವಾಸಕ್ಕೆ ಭಾರತದ ಫೀಲ್ಡಿಂಗ್ ಕೋಚ್ ಆಗಿ ಮುನಿಶ್ ಬಾಲಿ ನೇಮಕ

ನ್ಯೂಜಿಲೆಂಡ್‌ನಲ್ಲಿ ಟಿ20 ಮತ್ತು ಏಕದಿನ ಸರಣಿ
ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆಡಲಿದೆ. ನವೆಂಬರ್ 18ರಿಂದ ನವೆಂಬರ್ 30ರವೆರೆಗೆ ಈ ಪಂದ್ಯಗಳು ನಡೆಯಲಿವೆ. ಭಾರತ vs ನ್ಯೂಜಿಲೆಂಡ್ ಮೊದಲನೇ ಟಿ20 ಪಂದ್ಯ ನವೆಂಬರ್ 18 ಶುಕ್ರವಾರ ವೆಲ್ಲಿಂಗ್ಟನ್‌ನ ಸ್ಕೈ ಸ್ಟೇಡಿಯಂನಲ್ಲಿ ನಡೆಯಲಿದೆ. ನವೆಂಬರ್ 20 ರಂದು ಬೇ ಓವಲ್‌ನಲ್ಲಿ ಎರಡನೇ ಪಂದ್ಯ ಮತ್ತು ನೇಪಿಯರ್‌ನ ಮೆಕ್ಲೀನ್ ಪಾರ್ಕ್‌ನಲ್ಲಿ ನವೆಂಬರ್ 22ರಂದು ಮೂರನೇ ಟಿ20 ಪಂದ್ಯ ನಡೆಯಲಿದೆ.
ನವೆಂಬರ್ 25ರಂದು ಏಕದಿನ ಸರಣಿಯ ಮೊದಲನೇ ಪಂದ್ಯ ಈಡನ್ ಪಾರ್ಕ್‌ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ನವೆಂಬರ್ 27 ರಂದು ಸೆಡೆನ್ ಪಾರ್ಕ್‌ನಲ್ಲಿ ನಡೆಯಲಿದ್ದು, ಸರಣಿಯ ಅಂತಿಮ ಪಂದ್ಯ ನವೆಂಬರ್ 30 ರಂದು ಹ್ಯಾಗ್ಲಿ ಓವಲ್‌ನಲ್ಲಿ ನಡೆಯಲಿದೆ.

ಏಕದಿನ ಮತ್ತು ಟಿ20 ಸರಣಿಗೆ ಟೀಂ ಇಂಡಿಯಾ
ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್, ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್
ಏಕದಿನ ಸರಣಿಗೆ ಭಾರತ ತಂಡ: ಶಿಖರ್ ಧವನ್ (ನಾಯಕ), ರಿಷಬ್ ಪಂತ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷ್‌ದೀಪ್ ಸಿಂಗ್ , ದೀಪಕ್ ಚಾಹರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.


Click it and Unblock the Notifications
