
ಇಲ್ಲಿ 4 ಶತಕ ಸಿಡಿಸಿರುವ ಲ್ಯಾಥಮ್
ಹೇಗ್ಲೆ ಓವಲ್‌ನಲ್ಲಿ ಮಾತ್ರವಲ್ಲ ಟಾಮ್ ಲ್ಯಾಥಮ್ ಭಾರತ ತಂಡದ ವಿರುದ್ಧ ಏಕದಿನ ಪಂದ್ಯಗಳಲ್ಲಿ ಅತ್ಯುತ್ತಮ ದಾಖಲೆ ಹೊಂದಿದ್ದಾರೆ. ಭಾರತದ ವಿರುದ್ಧ ಇದುವರೆಗೂ 19 ಏಕದಿನ ಪಂದ್ಯಗಳನ್ನಾಡಿರುವ ಟಾಮ್ ಲ್ಯಾಥಮ್ 65.07 ಸರಾಸರಿಯಲ್ಲಿ 98.94 ಸ್ಟ್ರೈಕ್‌ರೇಟ್‌ನಲ್ಲಿ 846 ರನ್ ಗಳಿಸಿದ್ದಾರೆ.
ಸರಣಿಯ ಮೊದಲನೇ ಏಕದಿನ ಪಂದ್ಯದಲ್ಲಿ ಟಾಮ್ ಲ್ಯಾಥಮ್ 104 ಎಸೆತಗಳಲ್ಲಿ 145 ರನ್ ಗಳಿಸುವ ಮೂಲಕ ಆಕ್ಲೆಂಡ್‌ನಲ್ಲಿ ನ್ಯೂಜಿಲೆಂಡ್ 7 ವಿಕೆಟ್‌ಗಳಿಂದ ಸುಲಭವಾಗಿ ಜಯ ಗಳಿಸಲು ಕಾರಣವಾಗಿದ್ದರು. ಅವರ ಇನ್ನಿಂಗ್ಸ್‌ನಲ್ಲಿ 19 ಬೌಂಡರಿ ಮತ್ತು 5 ಸಿಕ್ಸರ್ ಸೇರಿದ್ದವು.
2022ರಲ್ಲಿ ಹೇಗ್ಲೆ ಓವಲ್‌ನಲ್ಲಿ ನಡೆದಿದ್ದ ಭಾರತದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಕೂಡ ಲ್ಯಾಥಮ್ ಎರಡೂ ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ನ್ಯೂಜಿಲೆಂಡ್ 7 ವಿಕೆಟ್‌ಗಳ ಜಯ ಸಾಧಿಸಲು ಕಾರಣವಾಗಿದ್ದರು.
IND Vs NZ: 3ನೇ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ಅಚ್ಚರಿಯ ನಿರ್ಧಾರ, ಸಂಭಾವ್ಯ ಪ್ಲೇಯಿಂಗ್ ಇಲೆವೆನ್

ಭಾರತ ತಂಡದ ಪ್ಲೇಯಿಂಗ್ XI ಬಗ್ಗೆ ಚಿಂತೆ
ಮೂರನೇ ಏಕದಿನ ಪಂದ್ಯಕ್ಕೆ ಭಾರತ ಯಾವ ಪ್ಲೇಯಿಂಗ್ XI ಆಯ್ಕೆ ಮಾಡಲಿದೆ ಎನ್ನುವುದನ್ನು ನೋಡಬೇಕಿದೆ. ಮೊದಲನೇ ಪಂದ್ಯದಲ್ಲಿ ಆಡಿದ್ದ ಸಂಜು ಸ್ಯಾಮ್ಸನ್ ಮತ್ತು ಶಾರ್ದುಲ್ ಠಾಕೂರ್ ಎರಡನೇ ಪಂದ್ಯದಲ್ಲಿ ಹೊರಗುಳಿದಿದ್ದರು. ಅವರ ಬದಲಿಗೆ ದೀಪಕ್ ಹೂಡಾ ಮತ್ತು ದೀಪಕ್ ಚಹರ್ ಗೆ ಅವಕಾಶ ನೀಡಲಾಗಿತ್ತು. ಆದರೆ ಮಳೆಯಿಂದಾಗಿ ಪಂದ್ಯ ರದ್ದಾಗಿದ್ದರಿಂದ ಬದಲಾವಣೆಯ ಪರಿಣಾಮ ತಿಳಿಯಲಾಗಿಲ್ಲ.
ಆದರೂ, ಹಲವು ಮಾಜಿ ಕ್ರಿಕೆಟಿಗರು ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡದ್ದರ ಬಗ್ಗೆ ಟೀಕೆ ಮಾಡಿದ್ದರು. ಮೂರನೇ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಮತ್ತು ವಿವಿಎಸ್ ಲಕ್ಷ್ಮಣ್ ಪ್ಲೇಯಿಂಗ್ XI ನಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ. ಸ್ಯಾಮ್ಸನ್ ಬದಲಿಗೆ ದೀಪಕ್ ಹೂಡಾ ಕ್ರೈಸ್ಟ್‌ಚರ್ಚ್‌ನಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು
ಭಾರತ : ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಚಹರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ