Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs NZ: ನ್ಯೂಜಿಲೆಂಡ್ ವಿರುದ್ಧದ ಟಿ20, ಏಕದಿನ ಸರಣಿಗೆ ಭಾರತದ ಪ್ರತ್ಯೇಕ ತಂಡ ಪ್ರಕಟ

IND vs NZ: Team India Squads For ODI And T20 Series Against New Zealand Announced

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು(ಬಿಸಿಸಿಐ) ನ್ಯೂಜಿಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್‌ ಪಂದ್ಯಗಳಿಗೆ ಪ್ರತ್ಯೇಕ ತಂಡಗಳನ್ನು ಪ್ರಕಟಿಸಿದೆ.

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡದ ನಾಯಕತ್ವವನ್ನು ಮತ್ತೆ ಹಾರ್ದಿಕ್ ಪಾಂಡ್ಯಗೆ ವಹಿಸಲಾಗಿದ್ದು, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ಅದಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೂಡ ಏಕದಿನ ಸರಣಿಗಾಗಿ ತಂಡಕ್ಕೆ ಹಿಂದಿರುಗಲಿದ್ದಾರೆ.

ಪ್ರಮುಖವಾಗಿ ಯುವ ಬ್ಯಾಟರ್ ಪೃಥ್ವಿ ಶಾ ಅವರನ್ನು ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿದೆ. 2022-23ರ ರಣಜಿ ಟ್ರೋಫಿಯಲ್ಲಿ ಅಸ್ಸಾಂ ವಿರುದ್ಧ ಅತ್ಯುತ್ತಮ ತ್ರಿಶತಕ ಬಾರಿಸಿದ ನಂತರ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಆಯ್ಕೆಗಾರರ ಗಮನ ಸೆಳೆದಿದ್ದರು.

ಇದೇ ವೇಳೆ ಪಂಜಾಬ್ ಕಿಂಗ್ಸ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ ಅವರನ್ನು ಸಹ ಭಾರತ ಟಿ20 ತಂಡದಲ್ಲಿ ಎರಡನೇ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ. ಇನ್ನು ವೈಯಕ್ತಿಕ ಕಾರಣಗಳಿಂದಾಗಿ ನ್ಯೂಜಿಲೆಂಡ್ ವಿರುದ್ಧದ ತವರಿನ ಸರಣಿಗೆ ಕೆಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ ಅಲಭ್ಯರಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಕೆಎಸ್ ಭರತ್ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಗಾಯಗೊಂಡ ನಂತರ ಸಂಜು ಸ್ಯಾಮ್ಸನ್‌ರನ್ನು ಆಯ್ಕೆ ಮಾಡಲಾಗಿಲ್ಲ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್.

Story first published: Friday, January 13, 2023, 23:12 [IST]
Other articles published on Jan 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+