IND vs NZ: ಬ್ರಿಯಾನ್ ಲಾರಾ ದಾಖಲೆ ಮುರಿದಿರುವ ಕಿವೀಸ್ ಬೌಲರ್‌ಗೆ ಇತಿಹಾಸ ಸೃಷ್ಟಿಸುವ ಅವಕಾಶ
ವೆಸ್ಟ್ ಇಂಡೀಸ್ ದಿಗ್ಗಜ ಬ್ಯಾಟರ್ ಬ್ರಿಯಾನ್ ಲಾರಾ. ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನ ದಾಖಲೆ ಪುಸ್ತಕವನ್ನು ತೆರೆದರೆ ಮೊದಲು ಕಾಣಿಸಿಕೊಳ್ಳುವ ಹೆಸರು. ಪ್ರಸ್ತುತ ಕ್ರಿಕೆಟ್‌ನಲ್ಲಿ ಕೆಲವು ದಾಖಲೆಗಳಲ್ಲಿ ಲಾರಾ ಅವರನ್ನು ಹಿಂದಿಕ್ಕಿರುವ ಕೆಲವು ಸ್ಟಾರ್ ಬ್ಯಾಟರ್‌ಗಳಿದ್ದಾರೆ.
ಭಾರತದ ವಿರಾಟ್ ಕೊಹ್ಲಿ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರಂತಹ ಬ್ಯಾಟರ್‌ಗಳು ಟೆಸ್ಟ್ ಕ್ರಿಕೆಟ್‌ನಲ್ಲಿ ಲಾರಾ ಅವರ ಕೆಲವು ದಾಖಲೆಗಳನ್ನು ಮುರಿದಿದ್ದಾರೆ. ಆದರೆ ವೇಗದ ಬೌಲರ್ ಒಬ್ಬರು ಲಾರಾ ಅವರ ದಾಖಲೆಯನ್ನು ಬ್ರೇಕ್ ಮಾಡಿರುವುದು ಆಶ್ಚರ್ಯಕರವಾಗಿದೆ. ಹೌದು, ಅವರು ಬೇರೆ ಯಾರೂ ಅಲ್ಲ. ನ್ಯೂಜಿಲೆಂಡ್‌ನ ವೇಗದ ಬೌಲರ್ ಮತ್ತು ಮಾಜಿ ಟೆಸ್ಟ್ ತಂಡದ ನಾಯಕ ಟಿಮ್ ಸೌಥಿ.

ಯಾವ ರೆಕಾರ್ಡ್ ಬ್ರೇಕ್?
ವಿಂಡೀಸ್ ದಂತಕಥೆ ಬ್ರಿಯಾನ್ ಲಾರಾ ಅವರ ಹೆಸರಿನಲ್ಲಿ ಹಲವು ವರ್ಷಗಳಿಂದ ವಿಶ್ವದಾಖಲೆಗಳಿದ್ದು, ಇಲ್ಲಿಯವರೆಗೂ ಯಾರೂ ಅದನ್ನು ಸರಿಗಟ್ಟಲು ಸಾಧ್ಯವಾಗಿಲ್ಲ. ಆದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದಿರುವ ದಾಖಲೆಯಲ್ಲಿ ಲಾರಾ ಅಗ್ರಸ್ಥಾನದಲ್ಲಿದ್ದರು. ಆದರೆ ಇಂದು ಅವರು ತುಂಬಾ ಹಿಂದುಳಿದಿದ್ದಾರೆ. ಸಿಕ್ಸರ್ ಕಿಂಗ್ ರೋಹಿತ್ ಶರ್ಮಾ ಮತ್ತು ಅನುಭವಿ ವಿರಾಟ್ ಕೊಹ್ಲಿಯಂತಹ ಬ್ಯಾಟರ್‌ಗಳು ಲಾರಾ ಅವರ ಸಿಕ್ಸರ್‌ಗಳ ದಾಖಲೆಯನ್ನು ಮುರಿಯಲು ಸಾಧ್ಯವಾಗಲಿಲ್ಲ ಎಂಬುದು ಕುತೂಹಲಕಾರಿ ಸಂಗತಿ. ಆದರೆ ನ್ಯೂಜಿಲೆಂಡ್ ವೇಗದ ಬೌಲರ್ ಟಿಮ್ ಸೌಥಿ 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಲಾರಾ ಅವರನ್ನು ಹಿಂದಿಕ್ಕಿದ್ದಾರೆ.
ಬ್ರಿಯಾನ್ ಲಾರಾ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 131 ಪಂದ್ಯಗಳಲ್ಲಿ 88 ಸಿಕ್ಸರ್‌ಗಳನ್ನು ಬಾರಿಸಿದ್ದು, ಅತಿ ಹೆಚ್ಚು ಸಿಕ್ಸರ್ ಹೊಡೆದವರ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. ಆದರೆ ನ್ಯೂಜಿಲೆಂಡ್‌ನ ಟಿಮ್ ಸೌಥಿ ಇದುವರೆಗೆ ಕೇವಲ 102 ಪಂದ್ಯಗಳಲ್ಲಿ 89 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದೀಗ ಸೆಹ್ವಾಗ್ ಅವರ 91 ಸಿಕ್ಸರ್‌ಗಳ ದಾಖಲೆಯನ್ನು ಮುರಿಯುವ ಹೊಸ್ತಿಲಲ್ಲಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಲಾರಾ ಅವರನ್ನು ಹಿಂದಿಕ್ಕಬಹುದು. ರೋಹಿತ್ ಇದುವರೆಗೆ 61 ಪಂದ್ಯಗಳಲ್ಲಿ 87 ಸಿಕ್ಸರ್ ಬಾರಿಸಿದ್ದಾರೆ. ರೋಹಿತ್ ಕೂಡ ಸೆಹ್ವಾಗ್ ದಾಖಲೆಯನ್ನು ಮುರಿಯುವ ಅವಕಾಶವನ್ನು ಹೊಂದಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಅಗ್ರಸ್ಥಾನದಲ್ಲಿದ್ದಾರೆ. ಸ್ಟೋಕ್ಸ್ ಇದುವರೆಗೆ 106 ಪಂದ್ಯಗಳನ್ನು ಆಡಿದ್ದು, 131 ಸಿಕ್ಸರ್‌ಗಳನ್ನು ಚಚ್ಚಿದ್ದಾರೆ. ಸ್ಟೋಕ್ಸ್ ಹೊರತುಪಡಿಸಿ ಪ್ರಸ್ತುತ ಆಡುತ್ತಿರುವ ಯಾವುದೇ ಬ್ಯಾಟರ್ ಟಾಪ್-5ರಲ್ಲಿ ಕಾಣಿಸಿಕೊಂಡಿಲ್ಲ. ಈಗ ಟಿಮ್ ಸೌಥಿ ಎಷ್ಟರಮಟ್ಟಿಗೆ ಈ ದಾಖಲೆ ಪಟ್ಟಿಯನ್ನು ತಲುಪುವಲ್ಲಿ ಯಶಸ್ವಿಯಾಗುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications