ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್‌ ಸರಣಿ: ಮತ್ತೆ ನಂಬರ್ 1 ಪಟ್ಟದ ಮೇಲೆ ಭಾರತ ಕಣ್ಣು: ಕಿವೀಸ್ ವಿರುದ್ಧ ಸರಣಿ ಗೆದ್ದರೆ ಚಿನ್ನದಂತಾ ಅವಕಾಶ

Ind vs NZ test series: Team India eye on No 1 spot in ICC Test Rankings

ಇಂಗ್ಲೆಂಡ್ ವಿರುದ್ಧದ ಅಪೂರ್ಣ ಟೆಸ್ಟ್ ಸರಣಿಯ ಬಳಿಕ ಭಾರತ ಈಗ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲು ಸಜ್ಜಾಗಿದೆ. ಈ ಸರಣಿಯಲ್ಲಿ ಸದ್ಯ ಐಸಿಸಿ ಟೆಸ್ಟ್ ಶ್ರೇಯಾಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾ ಈ ಸರಣಿಯಲ್ಲಿ ಮತ್ತೆ ಟೆಸ್ಟ್‌ನ ನಂಬರ್ 1 ತಂಡವಾಗುವತ್ತ ಚಿತ್ತ ನೆಡಲಿದೆ. ಆದರೆ ಕಿವೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಗೆಲುವು ಸಾಧಿಸಿದರೆ ಮರಳಿ ನಂಬರ್ 1 ಪಟ್ಟ ಪಡೆಯುವ ಸಾಧ್ಯತೆಯಿದೆಯಾ?

ಖಂಡಿತಾ ಇದೆ. ನ್ಯೂಜಿಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಥವಾ 2-0 ಅಂತರದಿಂದ ಗೆಲುವು ಸಾಧಿಸಲು ಸಾಧ್ಯವಾದರೆ ಭಾರತ ಮರಳಿ ಟೆಸ್ಟ್ ನಂಬರ್ 1 ಪಟ್ಟವನ್ನು ತನ್ನದಾಗಿಸಿಕೊಳ್ಳಲಿದೆ. ಮುಂದಿನ ಗುರುವಾರದಿಂದ ಆರಂಭವಾಗಲಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡಕ್ಕೆ ಈ ಚಿನ್ನದಂತಾ ಅವಕಾಶ ದೊರೆತಿದೆ.

ಭಾರತ vs ನ್ಯೂಜಿಲೆಂಡ್‌: ಟಿ20 ಸರಣಿ ವೈಟ್‌ವಾಷ್ ಮಾಡಿ ಸೇಡು ತೀರಿಸಿಕೊಂಡ ಟೀಮ್ ಇಂಡಿಯಾಭಾರತ vs ನ್ಯೂಜಿಲೆಂಡ್‌: ಟಿ20 ಸರಣಿ ವೈಟ್‌ವಾಷ್ ಮಾಡಿ ಸೇಡು ತೀರಿಸಿಕೊಂಡ ಟೀಮ್ ಇಂಡಿಯಾ

119 ಅಂಕಗಳನ್ನು ಪಡೆದಿರುವ ಭಾರತ ತಂಡ ಈಗ ಶ್ರೇಯಾಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ಸ್ ಆಗಿರುವ ನ್ಯೂಜಿಲೆಂಡ್ ನಂಬರ್ 1 ತಂಡವಾಗಿದ್ದು 126 ಅಂಕಗಳ ಮೂಲಕ ಭಾರತಕ್ಕಿಂತ ಮುಂದಿದೆ. ಕಾನ್ಪುರದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ಮೂಲಕ ಭಾರತಕ್ಕೆ ಮುನ್ನಡೆಯಲು ಅವಕಾಶವಿದೆ.

ಅಜಿಂಕ್ಯಾ ರಹಾನೆ ನೇತೃತ್ವದ ಟೀಮ್ ಇಂಡಿಯಾ: ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಈ ಸರಣಿಯ ಮೊದಲ ಪಂದ್ಯದಲ್ಲಿ ಅಜಿಂಕ್ಯಾ ರಹಾನೆ ನೇತೃತ್ವದಲ್ಲಿ ಸ್ಪರ್ಧೆಗೆ ಇಳಿಯಲಿದೆ. ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಮೊದಲ ಪಂದ್ಯದಲ್ಲಿ ವಿಶ್ರಾಂತಿಯನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಅಜಿಂಕ್ಯಾ ರಹಾನೆಗೆ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ದೊರೆತಿದೆ. ಕಳಪೆ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ಟೆಸ್ಟ್ ತಂಡದಿಂದಲೂ ರಹಾನೆಯನ್ನು ಕೈಬಿಡಬೇಕು ಎಂಬ ಅಭಿಪ್ರಾಯಗಳು ಸಾಕಷ್ಟು ಜೋರಾಗಿ ವ್ಯಕ್ತವಾಗಿತ್ತು. ಆದರೆ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಯನ್ನು ಮುನ್ನಡೆಸುವ ಅವಕಾಶ ಪಡೆಯುವ ಮೂಲಕ ರಹಾನೆಗೆ ಮತ್ತೊಂದು ಅವಕಾಶ ದೊರೆತಿದೆ.

Video: ದೀಪಕ್ ಚಹಾರ್‌ ಸಿಡಿಸಿದ ಸಿಕ್ಸರ್‌ಗೆ, ಸೆಲ್ಯೂಟ್ ಹೊಡೆದ ರೋಹಿತ್ ಶರ್ಮಾ!Video: ದೀಪಕ್ ಚಹಾರ್‌ ಸಿಡಿಸಿದ ಸಿಕ್ಸರ್‌ಗೆ, ಸೆಲ್ಯೂಟ್ ಹೊಡೆದ ರೋಹಿತ್ ಶರ್ಮಾ!

ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ: ಇನ್ನು ಈ ಸರಣಿಯಲ್ಲಿ ಟೀಮ್ ಇಂಡಿಯಾದ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿಯನ್ನು ನೀಡಲಾಗಿದೆ. ರೋಹಿತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ ಈ ಸರಣಿಯಿಂದ ಹೊರಗುಳಿಯಲಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಕೂಡ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದು ಎರಡನೇ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

ಅತೀ ವೇಗದ ಬೌಲರ್ ಪರಿಸ್ಥಿತಿ ನೋಡಿ? | Oneindia Kannada

ಟೀಮ್ ಇಂಡಿಯಾ ಸ್ಕ್ವಾಡ್: ಅಜಿಂಕ್ಯ ರಹಾನೆ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ (ಉಪನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್-ಕೀಪರ್), ಕೆಎಸ್ ಭರತ್ (ವಿಕೆಟ್-ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಸರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಎಂಡಿ ಸಿರಾಜ್, ಪ್ರಸಿದ್ಧ್ ಕೃಷ್ಣ.

Story first published: Tuesday, November 23, 2021, 10:20 [IST]
Other articles published on Nov 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X