IND vs NZ: ಎಂಟು ವರ್ಷಗಳ ನಂತರ 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಕೊಹ್ಲಿ; ಸೊನ್ನೆ ಸುತ್ತಿದ ರನ್ ಮಷಿನ್
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಮಳೆಯಿಂದಾಗಿ ಪಂದ್ಯದ ಮೊದಲ ದಿನದಾಟ ರದ್ದಾಗಿತ್ತು. ಆದರೆ ಎರಡನೆ ದಿನ ನಿಗದಿತ ಸಮಯಕ್ಕೆ ಪಂದ್ಯ ಆರಂಭಗೊಂಡಿದ್ದು, ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿದೆ.
ಟೀಮ್ ಇಂಡಿಯಾಗೆ ಉತ್ತಮ ಅಡಿಪಾಯ ಹಾಕುವಲ್ಲಿ ಎಡುವಿದ ನಾಯಕ ರೋಹಿತ್ ಶರ್ಮಾ (2) ವಿಕೆಟ್ ಕಳೆದುಕೊಂಡರು. ಇದಾದ ಬಳಿಕ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಲು ಬಂದರು. ಏಕೆಂದರೆ ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿಗೆ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಜವಾಬ್ದಾರಿ ನೀಡಲಾಗಿತ್ತು.

ಭಾರತದ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರ ನಿವೃತ್ತಿಯ ನಂತರ 4ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದ ವಿರಾಟ್ ಕೊಹ್ಲಿ ಎಂಟು ವರ್ಷಗಳ ನಂತರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರು. ಆದರೆ ಎಂಟು ವರ್ಷಗಳ ನಂತರ ಬ್ಯಾಟಿಂಗ್‌ಗೆ ಬಂದರು ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳಿದರು. ತಮ್ಮ ನೆಚ್ಚಿನ ಮಾಜಿ ನಾಯಕ ಶತಕ ಸಿಡಿಸುವುದನ್ನು ಕಣ್ತುಂಬಿಕೊಳ್ಳಲು ಎಂ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿರುವ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಕೊಹ್ಲಿ ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ ನಿಯಮಿತವಾಗಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾರೆ. ಆದರೆ ಟೆಸ್ಟ್ ಕ್ರಿಕೆಟ್‌ಗೆ ಬಂದಾಗ, ಅವರು ಸಾಮಾನ್ಯವಾಗಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾರೆ. ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಿಂದ ಶುಭಮನ್ ಗಿಲ್ ಹೊರಗುಳಿದಿರುವ ಕಾರಣ ಸ್ಪೋಟಕ ಬ್ಯಾಟರ್ ಸರ್ಫರಾಜ್ ಖಾನ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಸೇರಿಸಲಾಗಿತ್ತು. ಹೀಗಾಗಿ ಕೊಹ್ಲಿಯನ್ನು ಗಿಲ್ ಅವರ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಕಳುಹಿಸಲಾಗಿತ್ತು. ಕುತ್ತಿಗೆ ನೋವಿನಿಂದ ಬಳಲುತ್ತಿರುವ ಗಿಲ್ ಅವರನ್ನು ಮೊದಲ ಟೆಸ್ಟ್ ಪಂದ್ಯದಿಂದ ಕೈಬಿಡಲಾಗಿದೆ.
ಮಂಕಾದ ಕೊಹ್ಲಿ
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಂತರ ವಿರಾಟ್ ಕೊಹ್ಲಿ ಬ್ಯಾಟ್ ಸೈಲೆಂಟ್ ಆಗಿದೆ. ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ಗೆದ್ದ ಟೆಸ್ಟ್ ಸರಣಿಯಲ್ಲೂ ವಿರಾಟ್ ಕೊಹ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಇದಕ್ಕೂ ಮೊದಲು ಭಾರತ ತಂಡ ಶ್ರೀಲಂಕಾ ಪ್ರವಾಸಗೊಂಡಿತ್ತು. ಈ ವೇಳೆ ಶ್ರೀಲಂಕಾ ವಿರುದ್ಧವೂ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ರನ್ ಗಳಿಸಲು ಪರದಾಡಿದ್ದರು. ಇದೀಗ ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಾಗಲೆಲ್ಲಾ ಹಿನ್ನಡೆ ಅನುಭವಿಸಿದ್ದಾರೆ. 2011 ರಿಂದ ಭಾರತ ಪರ 116 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು ಕೇವಲ ನಾಲ್ಕು ಟೆಸ್ಟ್‌ಗಳಲ್ಲಿ ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.2016ರಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿತ್ತು. ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಕೊನೆಯ ಬಾರಿಗೆ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದಿದ್ದರು.
ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕನಿಷ್ಠ ಆರು ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿದ್ದು, 19.40ರ ಕಳಪೆ ಸರಾಸರಿಯನ್ನು ಹೊಂದಿದ್ದಾರೆ. ಆರು ಇನ್ನಿಂಗ್ಸ್‌ಗಳಲ್ಲಿ ಕೇವಲ 97 ರನ್ ಕಲೆ ಹಾಕಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಕೊಹ್ಲಿ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಅವರು, 91 ಟೆಸ್ಟ್ ಪಂದ್ಯಗಳ 148 ಇನ್ನಿಂಗ್ಸ್‌ಗಳಲ್ಲಿ 25 ಶತಕ ಮತ್ತು 21 ಅರ್ಧ ಶತಕಗಳ ನೆರವಿನಿಂದ 52.53 ಸರಾಸರಿಯಲ್ಲಿ 7355 ರನ್ ಹೊಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications