Virat Kohli: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದ ವಿರಾಟ್ ಕೊಹ್ಲಿ; 9 ಸಾವಿರ ರನ್ ಕಂಪ್ಲೀಟ್
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಲವು ದಿನಗಳಿಂದ ಟೆಸ್ಟ್ ಕ್ರಿಕೆಟ್‌ನಲ್ಲಿ ದೊಡ್ಡ ಇನ್ನಿಂಗ್ಸ್ ಆಡಲು ಪರದಾಡುತ್ತಿದ್ದರು. ಆದರೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಕೊಹ್ಲಿ ತಮ್ಮ ಲಯ ಕಂಡುಕೊಂಡಿದ್ದಾರೆ. ಈ ಮೂಲಕ ಅವರು ತಾವು ರನ್ ಮಷಿನ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಬೆಂಗಳೂರು ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 8 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು. ಆದರೆ ಕೊಹ್ಲಿಗೆ ಯಶಸ್ಸು ಸಿಕ್ಕಿರಲಿಲ್ಲ. ಮೂರನೇ ಕ್ರಮಾಂಕದಲ್ಲಿ ಆಡಿದ ಕೊಹ್ಲಿ ಖಾತೆ ತೆರೆಯದೆ ಶೂನ್ಯಕ್ಕೆ ಔಟಾಗಿದ್ದರು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ತಮ್ಮ ವಿರಾಟ ರೂಪ ತೋರಿದ ಅವರು ವಿಶ್ವ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ.

ಹೊಸ ಮೈಲಿಗಲ್ಲು
ನ್ಯೂಜಿಲೆಂಡ್ ವಿರುದ್ದ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ 9 ಸಾವಿರ ರನ್‌ಗಳನ್ನು ಪೂರೈಸಿದರು. 53 ರನ್ ಕಲೆ ಹಾಕುವ ಮೂಲಕ ವಿರಾಟ್ ಕೊಹ್ಲಿ ಈ ಸಾಧನೆಯ ಶಿಖರವನ್ನು ಏರಿದ್ದಾರೆ. ಇದಲ್ಲದೆ, ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿದ ಭಾರತದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ತಮ್ಮ ವೃತ್ತಿಜೀವನದ 116ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದು, ತಮ್ಮ 197ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಿದ ಕೊಹ್ಲಿ 102 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 70 ರನ್ ಹೊಡೆದರು ಔಟಾದರು. ಮೂರನೇ ದಿನದಾಟ ಅಂತ್ಯದ ಕೊನೆಯ ಎಸೆತದಲ್ಲಿ ಗ್ಲೆನ್ ಫಿಲಿಪ್ಸ್ ಬೌಲಿಂಗ್‌ನಲ್ಲಿ ವಿಕೆಟ್ ಕಳೆದುಕೊಂಡರು.
ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿಗಿಂತ ಮೊದಲು ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಮತ್ತು ಸುನಿಲ್ ಗವಾಸ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಕೊಹ್ಲಿಯ ಮುಂದಿನ ಗುರಿ ಗವಾಸ್ಕರ್. ಅವರ ಹೆಸರಿನಲ್ಲಿರುವ 10122 ಸಾವಿರ ರನ್‌ಗಳಿವೆ. ದ್ರಾವಿಡ್ 13265 ರನ್ ಮತ್ತು ಸಚಿನ್ 15921 ರನ್ ಗಳಿಸಿದ್ದಾರೆ. ವಿಶ್ವ ಟೆಸ್ಟ್ ಕ್ರಿಕೆಟ್‌ನಲ್ಲಿ ಸಚಿನ್ ಅತಿಹೆಚ್ಚು ರನ್ ಹೊಂದಿರುವ ಏಕೈಕ ಬ್ಯಾಟರ್ ಆಗಿ ಉಳಿದಿದ್ದಾರೆ. ಪ್ರಸ್ತುತ ಟೆಸ್ಟ್ ಕ್ರಿಕೆಟ್‌ನಲ್ಲಿ ಆಡುತ್ತಿರುವ ಬ್ಯಾಟರ್‌ಗಳ ಪೈಕಿ ಇಂಗ್ಲೆಂಡ್‌ನ ಜೋ ರೂಟ್ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮಾತ್ರ 9000 ಟೆಸ್ಟ್ ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೋ ರೂಟ್ 12664 ರನ್ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 9685 ರನ್ ಬಾರಿಸಿದ್ದಾರೆ.
ಧೋನಿ ರೆಕಾರ್ಡ್ ಬ್ರೇಕ್
ವಿರಾಟ್ ಕೊಹ್ಲಿ ಬೆಂಗಳೂರು ಟೆಸ್ಟ್‌ನಲ್ಲಿ ಮತ್ತೊಂದು ದಾಖಲೆಯನ್ನು ಮಾಡಿದ್ದಾರೆ. ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿ ಭಾರತದ ಪರ ಎರಡನೇ ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಆಟಗಾರ ಎಂಬ ದಾಖಲೆಗೆ ಕೊಹ್ಲಿ ತನ್ನ ಹೆಸರು ನೊಂದಾಯಿಸಿದ್ದಾರೆ. ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಇದುವರೆಗೆ ಎಲ್ಲಾ ಸ್ವರೂಪಗಳಲ್ಲಿ 536 ಪಂದ್ಯಗಳನ್ನು ಆಡಿದ್ದಾರೆ. ಟೀಮ್ ಇಂಡಿಯಾ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ದಾಖಲೆಯನ್ನು ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಹೊಂದಿದ್ದಾರೆ. ಸಚಿನ್ ಅವರು 664 ಪಂದ್ಯಗಳನ್ನು ಆಡಿದ್ದಾರೆ. ಎಂಎಸ್ ಧೋನಿ 535 ಪಂದ್ಯಗಳೊಂದಿಗೆ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications