ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ: ತನ್ನ ದಾಖಲೆ ಮುರಿದ ಶುಭ್ಮನ್ ಗಿಲ್ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು?

IND vs NZ: Virat Kohli Reaction About Shubman Gill Record Breaking Century Against New Zealand

ಬುಧವಾರ, ಫೆಬ್ರವರಿ 1ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ಪ್ರವಾಸಿ ನ್ಯೂಜಿಲೆಂಡ್ ತಂಡವನ್ನು 168 ರನ್‌ಗಳ ದಾಖಲೆ ಅಂತರದಿಂದ ಮಣಿಸಿ, 3 ಪಂದ್ಯಗಳ ಟಿ20 ಸರಣಿಯನ್ನು ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ 2-1 ಅಂತರದಲ್ಲಿ ಜಯಿಸಿತು.

ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 168 ರನ್‌ಗಳಿಂದ ಸೋಲಿಸುತ್ತಿದ್ದಂತೆಯೇ, ರನ್‌ಗಳ ಅಂತರದ ವಿಷಯದಲ್ಲಿ ಭಾರತ ಟಿ20 ಪಂದ್ಯದಲ್ಲಿ ಅತಿದೊಡ್ಡ ಗೆಲುವು ದಾಖಲಿಸಿತು. 2018ರಲ್ಲಿ ಡಬ್ಲಿನ್‌ನಲ್ಲಿ ಐರ್ಲೆಂಡ್ ವಿರುದ್ಧ 143 ರನ್‌ಗಳ ಗೆಲುವು ಭಾರತದ ಎರಡನೇ ಅತಿ ಹೆಚ್ಚು ಅಂತರದ ಗೆಲುವಾಗಿದೆ.

IND vs NZ 3rd T20: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್IND vs NZ 3rd T20: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್

ಇದೇ ವೇಳೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ ಆಕರ್ಷಕ ಶತಕ ಬಾರಿಸಿ ಏಕದಿನ ಅತ್ಯುತ್ತಮ ಬ್ಯಾಟಿಂಗ್ ಫಾರ್ಮ್ ಅನ್ನು ಟಿ20 ಕ್ರಿಕೆಟ್‌ನಲ್ಲಿಯೂ ಮುಂದುವರೆಸಿದರು. ಇದಕ್ಕೂ ಮುನ್ನ ಎರಡು ಪಂದ್ಯಗಳಲ್ಲಿ ವಿಫಲವಾಗಿದ್ದರಿಂದ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವರು ಭಾರತದ ಟಿ20 ಪಂದ್ಯಗಳಲ್ಲಿ ಶುಭ್ಮನ್ ಗಿಲ್ ಸ್ಥಾನವನ್ನು ಪ್ರಶ್ನಿಸಿದ್ದರು.

ಶುಭ್ಮನ್ ಗಿಲ್ ಅಜೇಯ 126 ರನ್

ಶುಭ್ಮನ್ ಗಿಲ್ ಅಜೇಯ 126 ರನ್

ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಶುಭ್ಮನ್ ಗಿಲ್ ಅಜೇಯ 126 ರನ್ ಗಳಿಸುವ ಮೂಲಕ ತಮ್ಮ ಟೀಕಾಕಾರರ ಬಾಯಿ ಮುಚ್ಚಿಸಿದರು.

ಭಾರತದ ಪರ ಕ್ರಿಕೆಟ್‌ನ ಮೂರು ಸ್ವರೂಪಗಳಲ್ಲಿ ಶತಕ ಬಾರಿಸಿದ ಐದನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭ್ಮನ್ ಗಿಲ್ ಅವರು ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮುರಿದು ಟಿ20 ಪಂದ್ಯಗಳಲ್ಲಿ ಭಾರತದ ಪರ ಗರಿಷ್ಠ ವೈಯಕ್ತಿಕ ಸ್ಕೋರರ್ ಎನಿಸಿಕೊಂಡರು.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ವಿಶ್ರಾಂತಿ ಪಡೆದಿರುವ ವಿರಾಟ್ ಕೊಹ್ಲಿ ಅವರು ಕಿವೀಸ್ ವಿರುದ್ಧದ ಪಂದ್ಯದಲ್ಲಿ ಶುಭ್ಮನ್ ಗಿಲ್ ಅವರ ದಾಖಲೆಯ ಶತಕದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಶುಭ್ಮನ್ ಗಿಲ್ ಜೊತೆಗಿನ ಚಿತ್ರವನ್ನು ಪೋಸ್ಟ್ ಮಾಡಿದ ಕೊಹ್ಲಿ

ಶುಭ್ಮನ್ ಗಿಲ್ ಜೊತೆಗಿನ ಚಿತ್ರವನ್ನು ಪೋಸ್ಟ್ ಮಾಡಿದ ಕೊಹ್ಲಿ

ವಿರಾಟ್ ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಶುಭ್ಮನ್ ಗಿಲ್ ಜೊತೆಗಿನ ಚಿತ್ರವನ್ನು ಪೋಸ್ಟ್ ಮಾಡಿ, "ಭವಿಷ್ಯದ ಸ್ಟಾರ್' ಎಂದು ಬರೆದಿದ್ದಾರೆ.

63 ಎಸೆತಗಳಲ್ಲಿ 12 ಬೌಂಡರಿಗಳು ಮತ್ತು 7 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಅಜೇಯ 126 ರನ್ ಗಳಿಸುವ ಮೂಲಕ ಶುಭ್ಮನ್ ಗಿಲ್ ತನ್ನನ್ನು ತಾನು ಎಲ್ಲ ಮಾದರಿಯ ಬ್ಯಾಟ್ಸ್‌ಮನ್ ಎಂದು ಸಮರ್ಥಿಸಿಕೊಂಡರು.

ಇನ್ನು ಪಂದ್ಯದ ಕುರಿತು ಹೇಳುವುದಾದರೆ, ಅಹಮದಾಬಾದ್‌ನ ವಿಶ್ವದ ಅತಿದೊಡ್ಡ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಶುಭ್ಮನ್ ಗಿಲ್ ಅವರ ಚೊಚ್ಚಲ ಟಿ20 ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿತು.

ನ್ಯೂಜಿಲೆಂಡ್ 12.1 ಓವರ್‌ಗಳಲ್ಲಿ 66 ರನ್‌ಗಳಿಗೆ ಆಲೌಟ್

ನ್ಯೂಜಿಲೆಂಡ್ 12.1 ಓವರ್‌ಗಳಲ್ಲಿ 66 ರನ್‌ಗಳಿಗೆ ಆಲೌಟ್

ನಂತರ, ಬೃಹತ್ ಮೊತ್ತ ಬೆನ್ನತ್ತಿದ ಪ್ರವಾಸಿ ನ್ಯೂಜಿಲೆಂಡ್ ತಂಡವನ್ನು ಭಾರತದ ಬೌಲರ್‌ಗಳು 12.1 ಓವರ್‌ಗಳಲ್ಲಿ 66 ರನ್‌ಗಳಿಗೆ ಆಲೌಟ್ ಮಾಡಿದರು. ಹೀಗಾಗಿ ಭಾರತ 2-1 ಅಂತರದಿಂದ ಗೆದ್ದು ಸರಣಿಯನ್ನು ಗೆದ್ದರು ಮತ್ತು ಇದಕ್ಕೂ ಮುನ್ನ ಮೂರು ಏಕದಿನ ಪಂದ್ಯಗಳಲ್ಲಿ ಕಿವೀಸ್ ಪಡೆಯನ್ನು ವೈಟ್ ವಾಶ್ ಮಾಡಿತ್ತು.

ಕಳೆದ ಶ್ರೀಲಂಕಾ ವಿರುದ್ಧದ ಸರಣಿಯ ಮೂಲಕ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಶುಭಮನ್ ಗಿಲ್, ತನ್ನ ಹಿಂದಿನ ಐದು ಟಿ20 ಪಂದ್ಯಗಳಲ್ಲಿ ಕೇವಲ 76 ರನ್ ಗಳಿಸಿದ್ದರು.

ಫೆಬ್ರವರಿ 9ರಿಂದ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶುಭ್ಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Story first published: Thursday, February 2, 2023, 15:11 [IST]
Other articles published on Feb 2, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X