ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ: ಕಿವೀಸ್ ವಿರುದ್ಧದ ಮೊದಲ ಪಂದ್ಯಕ್ಕೆ ಆಡುವ 11ರ ಬಳಗ ಆಯ್ಕೆ ಮಾಡಿದ ವಾಸಿಂ ಜಾಫರ್

IND vs NZ: Wasim Jaffer Picks His Indian Team Playing 11 For 1st ODI Match Against New Zealand

ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್‌ಗೆ ತಯಾರಿಗಾಗಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲು ಸಜ್ಜಾಗಿದೆ.

ಕಳೆದ ಏಕದಿನ ವಿಶ್ವಕಪ್‌ನ ರನ್ನರ್-ಅಪ್ ತಂಡದ ವಿರುದ್ಧ ಹೈದರಾಬಾದ್‌ನಲ್ಲಿ ಭಾರತದ ತನ್ನ ಮೊದಲ ಏಕದಿನ ಪಂದ್ಯಕ್ಕೂ ಮುನ್ನ, ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಅವರು ಭಾರತ ತಂಡದ ಆಡುವ 11ರ ಬಳಗವನ್ನು ಆಯ್ಕೆ ಮಾಡಿದ್ದಾರೆ.

IND vs NZ: ನ್ಯೂಜಿಲೆಂಡ್ ವಿರುದ್ಧ ವಿರಾಟ್ ಕೊಹ್ಲಿಯ ಟಾಪ್ 3 ಅತ್ಯುತ್ತಮ ಪ್ರದರ್ಶನಗಳುIND vs NZ: ನ್ಯೂಜಿಲೆಂಡ್ ವಿರುದ್ಧ ವಿರಾಟ್ ಕೊಹ್ಲಿಯ ಟಾಪ್ 3 ಅತ್ಯುತ್ತಮ ಪ್ರದರ್ಶನಗಳು

ಬೌಲಿಂಗ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಮತ್ತು ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರನ್ನು ವಾಸಿಂ ಜಾಫರ್ ತಮ್ಮ ಆಡುವ ಹನ್ನೊಂದರ ಬಳಗದಿಂದ ಹೊರಗಿಟ್ಟಿದ್ದಾರೆ. ಆದರೆ, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್‌ಗೆ ಅವಕಾಶ ನೀಡಿದ್ದಾರೆ.

ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್‌ಗೆ ಸ್ಥಾನ

ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್‌ಗೆ ಸ್ಥಾನ

ಇನ್ನು ವಿಕೆಟ್ ಕೀಪರ್- ಬ್ಯಾಟರ್ ಇಶಾನ್ ಕಿಶನ್ ಮತ್ತು ಸ್ಫೋಟಕ ಸೂರ್ಯಕುಮಾರ್ ಯಾದವ್ ಅವರಿಗೆ ಆಡುವ ಭಾರತದ ತಂಡದಲ್ಲಿ ವಾಸಿಂ ಜಾಫರ್ ಸ್ಥಾನ ನೀಡಿದ್ದಾರೆ.

ಪಂದ್ಯದ ಮುನ್ನಾ ದಿನದಂದು ಬೆನ್ನಿನ ಗಾಯದಿಂದಾಗಿ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಮೂರು ಪಂದ್ಯಗಳ ಸರಣಿಯಿಂದ ಹೊರಗುಳಿದ ನಂತರ, ಆತಿಥೇಯ ಭಾರತ ತಂಡವು ಅಂತಿಮ ಕ್ಷಣದಲ್ಲಿ ಬದಲಿ ಆಟಗಾರ ರಜತ್ ಪಾಟಿದಾರ್‌ನನ್ನು ಆಯ್ಕೆ ಮಾಡಿತು.

ಯುಜ್ವೇಂದ್ರ ಚಹಾಲ್ ಬದಲಿಗೆ ಕುಲದೀಪ್ ಯಾದವ್‌ಗೆ ಆದ್ಯತೆ

ಯುಜ್ವೇಂದ್ರ ಚಹಾಲ್ ಬದಲಿಗೆ ಕುಲದೀಪ್ ಯಾದವ್‌ಗೆ ಆದ್ಯತೆ

ಇನ್ನು ವಾಸಿಂ ಜಾಫರ್ ಅವರು ಆಯ್ಕೆ ಮಾಡಿದ ತಂಡವು ಹಾರ್ದಿಕ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್‌ ಅವರಲ್ಲಿ ಆಲ್‌ರೌಂಡರ್ ರೂಪದಲ್ಲಿ ಆರು ಬೌಲಿಂಗ್ ಆಯ್ಕೆಗಳನ್ನು ಹೊಂದಿದೆ. ಭಾರತ ತಂಡದ ಹಿರಿಯ ಸ್ಪಿನ್ನರ್ ಆಗಿರುವ ಯುಜ್ವೇಂದ್ರ ಚಹಾಲ್ ಬದಲಿಗೆ ಶ್ರೀಲಂಕಾ ವಿರುದ್ಧ ಮಿಂಚಿದ ಕುಲದೀಪ್ ಯಾದವ್‌ಗೆ ಆದ್ಯತೆ ನೀಡಿದ್ದಾರೆ.

ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದ ನಂತರ, ಭಾರತ ತಂಡವು ತವರಿನಲ್ಲಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಲು ಎದುರು ನೋಡುತ್ತಿದೆ. ಭಾರತ 2013ರಿಂದ ಯಾವುದೇ ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ. ಹೀಗಾಗಿ ತವರಿನಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿ ಗೆಲ್ಲಲು ಪ್ರಯತ್ನಿಸಲಿದೆ.

ವಾಸಿಂ ಜಾಫರ್ ಆಯ್ಕೆಯ ಭಾರತದ ಆಡುವ ಬಳಗ

ವಾಸಿಂ ಜಾಫರ್ ಆಯ್ಕೆಯ ಭಾರತದ ಆಡುವ ಬಳಗ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮನ್ ಮಲಿಕ್, ಮೊಹಮ್ಮದ್ ಸಿರಾಜ್

ನ್ಯೂಜಿಲೆಂಡ್ ವಿರುದ್ಧ ಭಾರತದ ಪೂರ್ಣ ತಂಡ

ನ್ಯೂಜಿಲೆಂಡ್ ವಿರುದ್ಧ ಭಾರತದ ಪೂರ್ಣ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

Story first published: Wednesday, January 18, 2023, 11:44 [IST]
Other articles published on Jan 18, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X