ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: ಚಾಹಲ್ ಬದಲಿಗೆ ಕುಲ್‌ದೀಪ್ ಆಡಲಿ ಎಂದ ವಾಸಿಮ್ ಜಾಫರ್

IND vs NZ: Wasim Jaffer said May Kuldeep Yadav replace Yuzvendra Chahal in 2nd ODI against New Zealand

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಭಾನುವಾರ ನಡೆಯಲಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದ ಕಾರಣ ಈ ಪಂದ್ಯದಲ್ಲಿ ತಂಡ ಯಾವುದಾದರೂ ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯಬಹುದಾ ಎಂಬುದು ಈಗ ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್ ಟೀಮ್ ಇಂಡಿಯಾ ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯುವುದು ಉತ್ತಮ ಎಂದಿದ್ದಾರೆ.

ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ನೀಡಿತ್ತು. ಆರಂಭದಲ್ಲಿ ಸಾಧಿಸಿದ ಯಶಸ್ಸನ್ನು ಮುಂದುವರಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದಲ್ಲಿ ಸ್ಪಿನ್ನರ್ ಆಗಿ ಯುಜುವೇಂದ್ರ ಚಾಹಲ್ ಬದಲಿಗೆ ಕುಲ್‌ದೀಪ್ ಯಾದವ್ ಕಣಕ್ಕಿಳಿಯುವುದು ಉತ್ತಮ ಎಂದಿದ್ದಾರೆ ವಾಸಿಮ್ ಜಾಫರ್.

IND vs NZ: ಎರಡನೇ ಪಂದ್ಯದಲ್ಲಿ ಗೆದ್ದರಷ್ಟೇ ಸರಣಿ ಜೀವಂತ, ಸಂಭಾವ್ಯ ಆಡುವ ಬಳಗ, ಪಿಚ್ ಮತ್ತು ಹವಾಮಾನ ವರದಿIND vs NZ: ಎರಡನೇ ಪಂದ್ಯದಲ್ಲಿ ಗೆದ್ದರಷ್ಟೇ ಸರಣಿ ಜೀವಂತ, ಸಂಭಾವ್ಯ ಆಡುವ ಬಳಗ, ಪಿಚ್ ಮತ್ತು ಹವಾಮಾನ ವರದಿ

ಇಎಸ್‌ಪಿಎನ್ ಕ್ರಿಕ್‌ ಇನ್ಫೋಗೆ ಪ್ರತಿಕ್ರಿಯೆ ನೀಡಿರುವ ಜಾಫರ್ ಟೀಮ್ ಇಂಡಿಯಾದ ತಮ್ಮ ಆಡುವ ಬಳಗದಲ್ಲಿ ದೀಪಕ್ ಚಾಹರ್ ಅವರನ್ನು ಸೇರ್ಪಡೆಗೊಳಿಸಿದರೆ ಬ್ಯಾಟಿಂಗ್ ವಿಭಾಗಕ್ಕೆ ಬೆಂಬಲ ದೊರೆತದಂತಾಗುತ್ತದೆ ಎಂದಿದ್ದಾರೆ. ಆಗ ಅಗ್ರ ಕ್ರಮಾಂಕದ ಆಟಗಾರರ ಹೆಚ್ಚು ನಿರಾಳವಾಗಿ ಬ್ಯಾಟಿಂಗ್ ನಡೆಸಬಹುದು ಎಂದಿದ್ದಾರೆ. ಜೊತೆಗೆ ಸ್ಪಿನ್ನರ್ ಸ್ಥಾನಕ್ಕೆ ಯುಜುವೇಂದ್ರ ಚಾಹಲ್ ಬದಲಿಗೆ ಕುಲ್‌ದೀಪ್ ಯಾದವ ಕಣಕ್ಕಿಳಿದರೆ ನೆರವಾಗಬಹುದು ಎಂದಿದ್ದಾರೆ.

"ನಾವು ಭಾನುವಾರದ ಪಂದ್ಯದಲ್ಲಿ ಯುಜುವೇಂದ್ರ ಚಾಹಲ್ ಬದಲಿಗೆ ಕುಲ್‌ದೀಪ್ ಯಾದಬವ್ ಅವರನ್ನು ನಿರೀಕ್ಷಿಸಬಹುದು. ಚೈನಾಮನ್ ಬೌಲರ್ ಮತ್ತಚ್ಟು ಮಿಸ್ಟ್ರಿಯನ್ನು ನೀಡುವ ಅವಕಾಶವಿದೆ. ಇನ್ನು ಅರ್ಶದೀಪ್ ಬದಲಿಗೆ ದೀಪಕ್ ಚಾಹರ್ ಬಂದರೆ ಬ್ಯಾಟಿಂಗ್‌ನಲ್ಲಿ ಮತ್ತಷ್ಟು ಬಲ ದೊರೆಯಲಿದೆ. ಚಾಹರ್ ಕೂಡ ಚೆಂಡನ್ನು ಸ್ವಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ ಜೊತೆಗೆ ಅವರು ಬ್ಯಾಟಿಂಗ್‌ನಲ್ಲಿಯೂ ಕೊಡುಗೆ ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದಿದ್ದಾರೆ.

IND vs NZ: ಹ್ಯಾಮಿಲ್ಟನ್‌ ಸವಾಲಿನಲ್ಲಿ ಗೆಲ್ಲುತ್ತಾ ಭಾರತ? ಇಲ್ಲಿ ಭಾರತ ಗೆದ್ದಿರುವ ಪಂದ್ಯಗಳೆಷ್ಟು ಗೊತ್ತಾ?IND vs NZ: ಹ್ಯಾಮಿಲ್ಟನ್‌ ಸವಾಲಿನಲ್ಲಿ ಗೆಲ್ಲುತ್ತಾ ಭಾರತ? ಇಲ್ಲಿ ಭಾರತ ಗೆದ್ದಿರುವ ಪಂದ್ಯಗಳೆಷ್ಟು ಗೊತ್ತಾ?

ಭಾರತ: ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪ ನಾಯಕ & ವಿಕೆಟ್ ಕೀಪರ್), ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಮ್ಯಾಟ್ ಹೆನ್ರಿ.

Story first published: Saturday, November 26, 2022, 23:50 [IST]
Other articles published on Nov 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X