For Quick Alerts
ALLOW NOTIFICATIONS  
For Daily Alerts
 

India vs Pakistan: ಕೊಹ್ಲಿ, ರಾಹುಲ್, ಕುಲದೀಪ್ ಮಿಂಚು; ಪಾಕಿಸ್ತಾನ ವಿರುದ್ಧ ಭಾರತಕ್ಕೆ ದಾಖಲೆಯ ಗೆಲುವು

ಸೋಮವಾರ, ಸೆಪ್ಟೆಂಬರ್ 11ರಂದು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ 2023ರ ಏಷ್ಯಾ ಕಪ್ ಪಂದ್ಯಾವಳಿಯ ಸೂಪರ್ 4 ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಭಾರತ ತಂಡ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ದಾಖಲೆಯ ಗೆಲುವು ದಾಖಲಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರ ಭರ್ಜರಿ ಶತಕದ ಸಹಾಯದಿಂದ ನಿಗದಿತ 50 ಓವರ್‌ಗಳಲ್ಲಿ 2 ವಿಕೆಟ್‌ಗೆ 356 ರನ್‌ಗಳನ್ನು ಕಲೆಹಾಕಿತ್ತು.

ind-vs-pak-asia-cup-match-result

357 ರನ್‌ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ 32 ಓವರ್‌ಗಳಲ್ಲಿ 128 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ 228 ರನ್‌ಗಳ ದಾಖಲೆಯ ಗೆಲುವು ಸಾಧಿಸಿತು.

ಎರಡು ದಿನಗಳ ಕಾಲ ನಡೆದ ಈ ಪಂದ್ಯದಲ್ಲಿ ಮಳೆಯೂ ಕೂಡ ಪಾಕಿಸ್ತಾನ ತಂಡವನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಭಾರತದ ವೇಗ ಮತ್ತು ಸ್ಪಿನ್ ಬೌಲಿಂಗ್ ವಿರುದ್ಧ ಯಾವುದೇ ಪ್ರತಿರೋಧ ತೋರದೆ ಶರಣಾಯಿತು. ಹೈ-ವೋಲ್ಟೇಜ್ ಎನಿಸಿಕೊಂಡಿದ್ದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಹೀನಾಯವಾಗಿ ಸೋಲು ಅನುಭವಿಸಿತು.

357 ರನ್‌ಗಳ ಚೇಸಿಂಗ್‌ನಲ್ಲಿ ಪಾಕಿಸ್ತಾನ ತಂಡದ ಪರ ಫಖರ್ ಜಮಾನ್ 27 ರನ್, ಇಮಾಮ್-ಉಲ್-ಹಕ್ 9 ರನ್, ನಾಯಕ ಬಾಬರ್ ಅಜಂ 10 ರನ್, ಮೊಹಮ್ಮದ್ ರಿಜ್ವಾನ್ 2 ರನ್, ಅಘಾ ಸಲ್ಮಾನ್ 23 ರನ್, ಇಫ್ತಿಕರ್ ಅಹ್ಮದ್ 23 ರನ್, ಶದಾಬ್ ಖಾನ್ 6 ರನ್, ಫಹೀಮ್ ಅಶ್ರಫ್ 4 ರನ್, ಶಾಹೀನ್ ಅಫ್ರಿದಿ 7 ರನ್ ಗಳಿಸಿದರು.

ಭಾರತದ ಪರ ಬೌಲಿಂಗ್‌ನಲ್ಲಿ ಲೆಗ್ ಸ್ಪಿನ್ನರ್ ಕುಲದೀಪ್ ಯಾದವ್ 8 ಓವರ್‌ಗಳಲ್ಲಿ 25 ರನ್ ನೀಡಿ 5 ವಿಕೆಟ್‌ಗಳ ಗೊಂಚಲು ಪಡೆದು ಮಿಂಚಿದರೆ, ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದರು.

Ind vs Pak Asia Cup Match Result: India Beats Pakistan By a Dominating 228 Runs

ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ರನ್‌ಗಳಿಂದ ಅತಿ ದೊಡ್ಡ ಗೆಲುವು
228 ರನ್ - ಕೊಲಂಬೊದಲ್ಲಿ, 2023
140 ರನ್ - ಢಾಕಾದಲ್ಲಿ, 2008
124 ರನ್ - ಬರ್ಮಿಂಗ್ಹ್ಯಾಮ್, 2017

ಇದಕ್ಕೂ ಮುನ್ನ ಭಾನುವಾರ ಬ್ಯಾಟಿಂಗ್ ಆರಂಭಿಸಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ 49 ಎಸೆತಗಳಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್ ನೆರವಿನಿಂದ 56 ರನ್ ಗಳಿಸಿದರೆ, ಶುಭ್ಮನ್ ಗಿಲ್ 52 ಎಸೆತಗಳಲ್ಲಿ 10 ಬೌಂಡರಿ ಮೂಲಕ 58 ರನ್ ಬಾರಿಸಿ ಮೊದಲ ವಿಕೆಟ್‌ಗೆ 16.4 ಓವರ್‌ಗಳಲ್ಲಿ 121 ರನ್‌ಗಳ ಜೊತೆಯಾಟ ನೀಡುವ ಮೂಲಕ ಭದ್ರ ಬುನಾದಿ ಹಾಕಿದ್ದರು.

ಇವರು ಔಟಾದ ಬಳಿಕ ಜೊತೆಗೂಡಿದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಮುರಿಯದ ಮೂರನೇ ವಿಕೆಟ್‌ಗೆ 194 ಎಸೆತಗಳಲ್ಲಿ ದಾಖಲೆಯ ಬರೋಬ್ಬರಿ 233 ರನ್‌ಗಳ ಜೊತೆಯಾಟ ನಿರ್ಮಿಸಿದರು.

ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 47ನೇ ಶತಕ ಬಾರಿಸಿದರು ಮತ್ತು ಇದೇ ವೇಳೆ 13000 ರನ್‌ಗಳ ಮೈಲುಗಲ್ಲು ತಲುಪಿದರು. ಇನ್ನು ಕೆಎಲ್ ರಾಹುಲ್ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ 6ನೇ ಶತಕ ಬಾರಿಸಿ ಅದ್ಭುತವಾಗಿ ಪುನರಾಗಮನ ಮಾಡಿದರು.

Ind vs Pak Asia Cup Match Result: India Beats Pakistan By a Dominating 228 Runs

ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 94 ಎಸೆತಗಳನ್ನು ಎದುರಿಸಿ 9 ಬೌಂಡರಿ ಮತ್ತು 3 ಸಿಕ್ಸರ್ ಮೂಲಕ ಅಜೇಯ 122 ರನ್ ಬಾರಿಸಿದರೆ, ಕನ್ನಡಿಗ ಕೆಎಲ್ ರಾಹುಲ್ 106 ಎಸೆತಗಳಲ್ಲಿ 12 ಬೌಂಡರಿ ಮತ್ತು 2 ಸಮೇತ ಔಟಾಗದೇ 111 ರನ್ ಸಿಡಿಸಿದರು.

ಪಾಕಿಸ್ತಾನ ತಂಡದ ಪರ ಬೌಲಿಂಗ್‌ನಲ್ಲಿ ಶಾದಾಬ್ ಖಾನ್ ಮತ್ತು ಶಾಹೀನ್ ಶಾ ಅಫ್ರಿದಿ ತಲಾ ಒಂದೊಂದು ವಿಕೆಟ್ ಪಡೆದರು. ಉಳಿದೆಲ್ಲ ಬೌಲರ್‌ಗಳು ದುಬಾರಿಯಾದರು.

Story first published: Monday, September 11, 2023, 23:14 [IST]
Other articles published on Sep 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+