IND vs PAK ಚಾಂಪಿಯನ್ಸ್ ಟ್ರೋಫಿ: ಹೇಗಿರಲಿದೆ ಭಾರತದ ಪ್ಲೇಯಿಂಗ್ ಇಲೆವೆನ್? ಯಾರಿಗೆ ಸಿಗುತ್ತೆ ಚಾನ್ಸ್
ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಯ "ಎ" ಗುಂಪಿನ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿರಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಮುಂದಿನ ಹಂತವನ್ನು ಸಲೀಸಾಗಿ ತಲುಪುವ ಯೋಜನೆಯನ್ನು ಟೀಮ್ ಇಂಡಿಯಾ ಹಾಕಿಕೊಂಡಿದೆ. ಪಾಕಿಸ್ತಾನಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಈಗಾಗಲೇ ಪಾಕ್ ಒಂದು ಪಂದ್ಯ ಸೋತಿದ್ದು, ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಅನಿವಾರ್ಯತೆ ಇದೆ.
ಉಭಯ ತಂಡಗಳಲ್ಲೂ ಸ್ಟಾರ್ ಆಟಗಾರರು ಇದ್ದು ಅಭಿಮಾನಿಗಳ ಚಿತ್ತ ಕದ್ದಿದೆ. ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ. ಟೀಮ್ ಇಂಡಿಯಾದ ಅನುಭವಿ ಆಟಗಾರರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಹಳೆಯ ಫಾರ್ಮ್‌ಗೆ ಮರಳವು ಸಾಧ್ಯತೆ ಹೆಚ್ಚಿದೆ. ಭಾರತ ಹಾಗೂ ಪಾಕ್ ನಡುವಣ ಪಂದ್ಯದಲ್ಲಿ ಟಾಸ್ ಮಹತ್ವದ ಪಾತ್ರವನ್ನು ವಹಿಸುತ್ತದೆ.

ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಇಲ್ಲ
ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕ ಬಲಿಷ್ಠವಾಗಿದೆ. ಆರಂಭಿಕರಾದ ರೋಹಿತ್ ಶರ್ಮಾ, ಶುಭಮನ್ ಗಿಲ್ ಉತ್ತಮ ಲಯದಲ್ಲಿದ್ದಾರೆ. ರೋಹಿತ್ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಚಿಕ್ಕ ಇನಿಂಗ್ಸ್ ಕಟ್ಟಿದರೂ ಸಹ ತಮ್ಮ ನೈಜ್ಯ ಆಟವನ್ನು ಆಡಿದ್ದಾರೆ. ಇನ್ನು ಶುಭಮನ್ ಗಿಲ್ ಶತಕ ಬಾರಿಸಿ ಭರವಸೆ ಮೂಡಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ತಂಡಕ್ಕೆ ನೆರವಾಗಬಲ್ಲ ಪ್ಲೇಯರ್ಸ್. ಇವರು ಕಳೆದ ಪಂದ್ಯದಲ್ಲಿ ಮಾಡಿದ ತಪ್ಪನ್ನು ತಿದ್ದಿಕೊಂಡು ಬ್ಯಾಟ್ ಮಾಡಬೇಕಿದೆ. ಈ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ಕೆಲವು ಹೊತ್ತು ಕಳೆದರೆ, ದೊಡ್ಡ ಇನಿಂಗ್ಸ್ ಕಟ್ಟಬಹುದು.
ಟೀಮ್ ಇಂಡಿಯಾದ ಶಕ್ತಿ ಎಂದೇ ಬಿಂಬಿತವಾಗಿರುವ ಸ್ಟಾರ್ ಆಲ್‌ರೌಂಡರ್‌ಗಳಾದ ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಅವರು ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಆಡಬೇಕಿದೆ. ಅಂದಾಗ ಗೆಲುವು ಸಾಧ್ಯ.

ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಸಾಧ್ಯತೆ
ಟೀಮ್ ಇಂಡಿಯಾ ತನ್ನ ಬೌಲಿಂಗ್‌ನಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಹರ್ಷಿತ್ ರಾಣಾ ಅವರಿಗೆ ವಿಶ್ರಾಂತಿ ನೀಡಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರಿಗೆ ಅವಕಾಶ ನೀಡುವ ಸಂಭವವಿದೆ. ಇನ್ನು ಮೊದಲ ಪಂದ್ಯದಲ್ಲಿ ಆಡಿದ್ದ ಕುಲ್‌ದೀಪ್ ಯಾದವ್ ಅವರಿಗೆ ಕೈ ಬಿಟ್ಟು ಮಿಸ್ಟರಿ ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ ತಂಡ ಸೇರುವ ಸಂಭವವಿದೆ. ಉಳಿದಂತೆ ಮೊಹಮ್ಮದ್ ಶಮಿ ತಂಡದಲ್ಲಿ ಸ್ಥಾನ ಪಡೆಯುವುದು ಫಿಕ್ಸ್. ಇವರು ಬಾಂಗ್ಲಾ ವಿರುದ್ದದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಐದು ವಿಕೆಟ್ ಪಡೆದು ಭರವಸೆ ಮೂಡಿಸಿದ್ದಾರೆ. ಹೀಗಾಗಿ ಶಮಿ ಅವರ ಮೇಲೆ ನಿರೀಕ್ಷೆಗಳು ಹೆಚ್ಚಿವೆ.
ಪಂದ್ಯದ ಸಮಯ: ಮಧ್ಯಾಹ್ನ 2.30ಕ್ಕೆ
ನೇರ ಪ್ರಸಾರ: ಸ್ಟಾರ್ ನೆಟ್‌ವರ್ಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications