Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

India vs Pakistan: 2ನೇ ಎಸೆತದಲ್ಲಿಯೇ ರೋಹಿತ್ ಶರ್ಮಾಗೆ ಜೀವದಾನ; ಆದರೆ ನಂತರ ಆಘಾತ!

ಏಷ್ಯಾಕಪ್ ಟೂರ್ನಿಯಲ್ಲಿ ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಸೆಣೆಸಾಟ ಆರಂಭವಾಗಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಪಂದ್ಯ ಆರಂಭವಾದ ಎರಡನೇ ಎಸೆತದಲ್ಲಿಯೇ ಜೀವದಾನ ದೊರೆತಿದೆ. ಪಾಕಿಸ್ತಾನದ ಫಕರ್ ಜಮಾನ್ ಅವರತ್ತ ಬಂದಿದ್ದ ಕ್ಯಾಚನ್ನು ಕೈಚೆಲ್ಲಿದ ಪರಿಣಾಮ ಚೆಂಡು ಬೌಂಡರಿ ಗೆರೆ ದಾಟಿತು.

ಶಾಹೀನ್ ಶಾ ಅಫ್ರಿದಿ ಎಸೆತವನ್ನು ರೋಹಿತ್ ಶರ್ಮಾ ಫ್ಲಿಕ್ ಮಾಡಿದ್ದರು. ಈ ಚೆಂಡು ಗಾಳಿಯಲ್ಲಿ ಹಾರುತ್ತಾ ಶಾರ್ಟ್ ಸ್ಕ್ವೇರ್ ಲೆಗ್‌ನಲ್ಲಿ ಫೀಲ್ಡಿಂಗ್‌ ಮಾಡುತ್ತಿದ್ದ ಫಕರ್ ಜಮಾನ್ ಅವರತ್ತ ನುಗ್ಗಿತ್ತು. ಆದರೆ ಈ ಅವಕಾಶವನ್ನು ಬಳಸಿಕೊಳ್ಳಲು ಫಕರ್ ಜಮಾನ್ ವಿಫಲವಾಗಿ ಕ್ಯಾಚ್ ಕೈಚೆಲ್ಲಿದ್ದರು.

Ind vs Pak: Fakhar Zaman dropped Rohit Sharmas catch, but Hitman fails to take advantage

ಆದರೆ ಈ ಜೀವದಾನದ ಲಾಭವನ್ನು ಪಡೆಯಲು ರೋಹಿತ್ ಶರ್ಮಾ ವಿಫಲವಾಗಿದ್ದಾರೆ. ಮಳೆಯಿಂದಾಗಿ ಪಂದ್ಯ ಕೆಲ ಕಾಳ ಸ್ಥಗಿತಗೊಂಡ ಬಳಿಕ ಪುನಾರಂಭವಾದಾಗ ರೋಹಿತ್ ಶರ್ಮಾ ತಮ್ಮ ವಿಕೆಟ್ ಒಪ್ಪಿಸಿದ್ದಾರೆ. ಶಾಹಿನ್ ಶಾ ಅಫ್ರಿದಿ ಎಸೆತದಲ್ಲಿ ರೋಹಿತರ್ ಶರ್ಮಾ ಬೌಲ್ಡ್ ಆಗಿ ವಿಕೆಟ್ ಕಳೆದುಕೊಂಡಿದ್ದಾರೆ. ಈ ಮೂಲಕ ಭಾರಿ ತಂಡ ತನ್ನ ಮೊದಲ ವಿಕೆಟನ್ನು 15 ರನ್‌ಗಳಿಗೆ ಕಳೆದುಕೊಂಡಿತು.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಪಾಕಿಸ್ತಾನದ ವೇಗಿ ಶಾಹೀನ್ ಶಾ ಅಫ್ರಿದಿ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾದರು. ಮೊದಲಿಗೆ ರೋಹಿತ್ ಶರ್ಮಾ ವಿಕೆಟ್ ಪಡೆದ ಶಾಹೀನ್ ಶಾ ಬಳಿಕ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯನ್ನು ಕೂಡ ಬಲಿಪಡೆದುಕೊಂಡಿದ್ದಾರೆ. ಶಾಹೀನ್ ಅಫ್ರಿದಿಯ ಇನ್‌ಸ್ವಿಂಗ್ ಎಸೆತ ವಿರಾಟ್ ಕೊಹ್ಲಿ ಬ್ಯಾಟ್‌ಗೆ ಎಡ್ಜ್ ಆಗಿ ವಿಕೆಟ್‌ಗೆ ಬಡಿಯುವ ಮೂಲಕ ವಟ್ ಆಗಿದ್ದಾರೆ. ಈ ಮೂಲಕ ಭಾರತ ಮೊದಲ ಎರಡು ವಿಕೆಟ್‌ಗಳನ್ನು ಅಗ್ಗಕ್ಕೆ ಕಳೆದುಕೊಂಡಂತಾಗಿದೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಶ್ರೇಯಸ್ ಐಯ್ಯರ್ ಹಾಗೂ ಜಸ್ಪ್ರೀತ್ ಬೂಮ್ರಾ ಸುದೀರ್ಘ ಕಾಲದ ಬಳಿಕ ಏಕದಿನ ಮಾದರಿಗೆ ಕಮ್‌ಬ್ಯಾಕ್ ಮಾಡಿದ್ದಾರೆ.

ಪಾಕಿಸ್ತಾನ ಆಡುವ ಬಳಗ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್
ಬೆಂಚ್: ಫಹೀಮ್ ಅಶ್ರಫ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ವಾಸಿಂ ಜೂನಿಯರ್, ಅಬ್ದುಲ್ಲಾ ಶಫೀಕ್, ಸೌದ್ ಶಕೀಲ್, ಉಸಾಮಾ ಮಿರ್

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮ

Story first published: Saturday, September 2, 2023, 16:32 [IST]
Other articles published on Sep 2, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+