ಪುಟ್ಟ ಮಗುವಿನಂತೆ ಜಿಗಿದು ಜಿಗಿದು ಭಾರತದ ಗೆಲುವನ್ನು ಸಂಭ್ರಮಿಸಿದ ಸುನಿಲ್ ಗವಾಸ್ಕರ್: ವಿಡಿಯೋ

ಟಿ20 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ. ಆದರೆ ಈ ಗೆಲುವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಬಂದಿದ್ದು ಅತ್ಯಂತ ರೋಚಕ ರೀತಿಯಲ್ಲಿ ಭಾರತ ಗೆಲುವು ಸಾಧಿಸಿದೆ. ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್ ಪ್ರದರ್ಶನದ ಕಾರಣದಿಂದಾಗಿ ಭಾರತ ತಂಡ ಈ ಗೆಲುವು ಸಾಧಿಸಿದ್ದು ಅಭಿಮಾನಿಗಳು ಸುದೀರ್ಘ ಕಾಲ ನೆನಪಿಟ್ಟುಕೊಳ್ಳುವಂತಾ ಗೆಲುವು ಎಂಬುದರಲ್ಲಿ ಅನುಮಾನವಿಲ್ಲ.
ಈ ರಣರೋಚಕ ಪಂದ್ಯದಲ್ಲಿ ಭಾರತ ಗೆದ್ದ ಬಳಿಕ ಕ್ರಿಕೆಟ್ ಅಭಿಮಾನಿಗಳೆಲ್ಲರೂ ಹಿಚ್ಚೆದ್ದು ಸಂಭ್ರಮಿಸಿದ್ದಾರೆ. ಮೆಲ್ಬರ್ನ್ ಮೈದಾನದಲ್ಲಿ 90 ಸಾವಿರಕ್ಕೂ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ಭಾರತ ಸಾಧಿಸಿದ ಈ ಗೆಲುವು ಅತ್ಯಂತ ವಿಶೇಷ ಎಂಬುದರಲ್ಲಿ ಎರಡು ಮಾತಿಲ್ಲ.
ಪಾಕಿಸ್ತಾನ ನೀಡಿದ್ದ ಸವಾಲಿನ ಗುರಿ ಬೆನ್ನಟ್ಟಿದ ಭಾರತ ಆರಂಭದಲ್ಲಿಯೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ಅವರ ಸಮಯೋಚಿತ ಆಟದ ಕಾರಣದಿಂದಾಗಿ ಟೀಮ್ ಇಂಡಿಯಾ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು
ಈ ಪಂದ್ಯ ಅಂತಿಮ ಘಟ್ಟವನ್ನು ತಲುಪುತ್ತಿದ್ದಾಗ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಸುನಿಲ್ ಗವಾಸ್ಕರ್ ಬೌಂಡರಿ ಗೆರೆಯ ಸನಿಹದಲ್ಲಿದ್ದರು. ಸ್ಟಾರ್ ಸ್ಪೋರ್ಟ್ಸ್ ವಾಹಿನಿಗೆ ವೀಕ್ಷಕ ವಿವರಣೆಕಾರನಾಗಿರುವ ಕಾರಣ ಇತರ ಕಾಮೆಂಟೇಟರ್‌ಗಳಾದ ಇರ್ಫಾನ್ ಪಠಾಣ್, ಕ್ರಿಸ್ ಶ್ರೀಕಾಂತ್ ಜೊತೆಗೆ ನಿಂತಿದ್ದರು. ಈ ಸಂದರ್ಭದಲ್ಲಿ ಭಾರತ ತಂಡ ಗೆಲುವು ಸಾಧಿಸುತ್ತಿದ್ದಂತೆಯೇ ಸುನಿಲ್ ಗವಾಸ್ಕರ್ ಪುಟ್ಟ ಮಗುವಿನ ರೀತಿ ಕುಣಿದು ಕುಣಿದು ತಮ್ಮ ಸಂಭ್ರಮವನ್ನು ವ್ಯಕ್ತಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋ
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅತ್ಯಂತ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಿತ್ತು. 31 ರನ್‌ಗಳಿಗೆ 4 ವಿಕೆಟ್‌ಗಳನ್ನು ಟೀಮ್ ಇಂಡಿಯಾ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ತಂಡಕ್ಕೆ ಶತಕದ ಜೊತೆಯಾಟವನ್ನು ನೀಡಿದರು. ಪರಿಸ್ಥಿತಿಗೆ ತಕ್ಕನಾಗಿ ಆಡುತ್ತಾ ಸಾಗಿದ ಈ ಜೋಡಿ ಅಂತಿಮ ಓವರ್‌ನಲ್ಲಿ ಬೇರ್ಪಟ್ಟಿತ್ತು. ಹಾರ್ದಿಕ್ ಪಾಂಡ್ಯ 40 ರನ್‌ಗಳಿಸಿ ವಿರಾಟ್ ಕೊಹ್ಲಿಗೆ ಅದ್ಭುತವಾಗಿ ಸಾಥ್ ನೀಡಿದರು. ಮತ್ತೊಂದೆಡೆ ವಿರಾಟ್ ಕೊಹ್ಲಿ ಆರಂಭದಲ್ಲಿ ಎಚ್ಚರಿಕೆಯ ಪ್ರದರ್ಶನ ನೀಡಿದರಾದರೂ ಬಳಿಕ ಅದ್ಭುತವಾಗಿ ಬ್ಯಾಟಿಂಗ್ ವೇಗವನ್ನು ಹೆಚ್ಚಿಸಿಕೊಂಡರು. ಅದರಲ್ಲೂ ಮಹತ್ವದ ಘಟ್ಟದಲ್ಲಿ ಪಾಕಿಸ್ತಾನದ ಪ್ರಮುಖ ಬೌಲರ್‌ಗಳನ್ನು ದಂಡಿಸಿದ ಕೊಹ್ಲಿ ಅಸಾಧ್ಯ ಗೆಲುವು ಸಾಧ್ಯವಾಗಿಸಿದರು. 53 ಎಸೆತಗಳನ್ನು ಎದುರಿಸಿದ ವಿರಾಟ್ 82 ರನ್‌ಗಳಿಸಿ ಅಜೇಯವಾಗುಳಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications