ಭಾರತ ಹಾಗೂ ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಎರಡು ತಂಡಗಳು ಕೂಡ ಪೈಪೋಟಿಯ ಪ್ರದರ್ಶನ ನೀಡುತ್ತಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಒಂದು ಲಕ್ಷಕ್ಕೂ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಬಹು ನಿರೀಕ್ಷಿತ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಾಡಿದ ಎಡವಟ್ಟೊಂಡು ಈಗ ಗಮನಸೆಳೆದಿದೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಈ ಪಂದ್ಯದ ಆರಂಭದಲ್ಲಿ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ತಪ್ಪಾದ ಜರ್ಸಿಯನ್ನು ತೊಟ್ಟು ಬಂದಿದ್ದರು. ಈ ವಿಶ್ವಕಪ್‌ನಲ್ಲಿ ಭಾರತ ಭುಜದಲ್ಲಿ ಭಾರತದ ಧ್ವಜದ ಮೂರು ಬಣ್ಣಗಳನ್ನು ಹೊಂದಿದೆ. ಆದರೆ ಈ ಜರ್ಸಿಯ ಬದಲಾಗಿ ವಿಶ್ವಕಪ್‌ಗೂ ಹಿಂದಿನ ಮಾದರಿಯ ಜರ್ಸಿಯನ್ನು ತೊಟ್ಟು ವಿರಾಟ್ ಕೊಹ್ಲಿ ಕಣಕ್ಕಿಳಿದಿದ್ದರು.

ವಿರಾಟ್ ಕೊಹ್ಲಿ ಮಾಡಿಕೊಂಡಿದ್ದ ಈ ಎಡವಟ್ಟು ಅವರಿಗೆ ತಕ್ಷಣವೇ ಅರಿವಿಗೆ ಬಂದಿದೆ. ಹೀಗಾಗಿ ಪಂದ್ಯ ಆರಂಭವಾಗುತ್ತಿದ್ದಂತೆಯೇ ವಿರಾಟ್ ಕೊಹ್ಲಿ ಮತ್ತೆ ಡ್ರೆಸ್ಸಿಂಗ್‌ರೂಮ್‌ಗೆ ಮರಳಿ ಜರ್ಸಿಯನ್ನು ಬದಲಾಯಿಸಿಕೊಂಡು ಕಣಕ್ಕಿಳಿದಿದ್ದಾರೆ. ಆದರೆ ಈ ಎಡವಟ್ಟನ್ನು ಅಭಿಮಾನಿಗಳು ಕೂಡ ತಕ್ಷಣವೇ ಪತ್ತೆ ಹಚ್ಚಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಮಾಡಿದ ಈ ಎಡವಟ್ಟನ್ನು ಪತ್ತೆ ಹಚ್ಚಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಪಾಕಿಸ್ತಾನ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದ್ದು ಉತ್ತಮ ಹೋರಾಟದ ಪ್ರದರ್ಶನ ನೀಡುತ್ತಿದೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್
ಪಾಕಿಸ್ತಾನ ಆಡುವ ಬಳಗ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶದಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್
ಬೆಂಚ್: ಆಘಾ ಸಲ್ಮಾನ್, ಫಖರ್ ಜಮಾನ್, ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್