ಟಿ20 ವಿಶ್ವಕಪ್ 2022: ಎಂಎಸ್ ಧೋನಿ ದಾಖಲೆ ಮುರಿದ ನಾಯಕ ರೋಹಿತ್ ಶರ್ಮಾ

ಭಾರತ ಹಾಗೂ ಪಾಕಿಸ್ತಾನ ತಂಡಗಳು ಟಿ20 ವಿಶ್ವಕಪ್‌ನ ಸೂಪರ್ 12 ಹಂತದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ವಿಶೇಷ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈವರೆಗೂ ಎಂಎಸ್ ಧೋನಿ ಹೆಸರಿನಲ್ಲಿದ್ದ ಈ ದಾಖಲೆಯೀಗ ರೋಹಿತ್ ಶರ್ಮಾ ಹೆಸರಿಗೆ ಬಂದಿದೆ.
ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಟಾಸ್ ಪ್ರಕ್ರಿಯೆಗಾಗಿ ರೋಹಿತ್ ಶರ್ಮಾ ಕಣಕ್ಕಿಲಿಯುತ್ತಿದ್ದಂತೆಯೇ ಟಿ20 ವಿಶ್ವಕಪ್‌ನಲ್ಲಿ ಭಾರತದ ಪರವಾಗಿ ಅತೀ ಹೆಚ್ಚು ಪಂದ್ಯಗಳಲ್ಲಿ ಕಣಕ್ಕಿಳಿದ ಸಾಧನೆ ಮಾಡಿದಂತಾಗಿದೆ. ಈವರೆಗೂ ಈ ದಾಖಲೆ ಮಾಜಿ ನಾಯಕ ಎಂಎಸ್ ಧೋನಿ ಹೆಸರಿನಲ್ಲಿತ್ತು. ಧೋನಿ ಟಿ20 ವಿಶ್ವಕಪ್‌ನಲ್ಲಿ 33 ಪಂದ್ಯಗಳಲ್ಲಿ ಆಡಿದ್ದರೆ ರೋಹಿತ್ ಶರ್ಮಾ ಈ ಪಂದ್ಯದ ಮೂಲಕ 34ನೇ ಪಂದ್ಯವನ್ನು ಆಡುತ್ತಿದ್ದಾರೆ.
ಇನ್ನು ಭಾರತದ ಪರವಾಗಿ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ ಉಳಿದ ಆಟಗಾರರ ಪಟ್ಟಿ ಹೀಗಿದೆ. ಯುವರಾಜ್ (31), ಸುರೇಶ್ ರೈನಾ (26) ಮತ್ತು ರವೀಂದ್ರ ಜಡೇಜಾ (22) ಭಾರತದ ಪರ ಅತಿ ಹೆಚ್ಚು ಬಾರಿ ಟಿ20 ವಿಶ್ವಕಪ್‌ನಲ್ಲಿ ಕಣಕ್ಕಿಳಿದ ಅಗ್ರ ಐವರು ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನು ಭಾರತ ಹಾಗೂ ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪಾಕಿಸ್ತಾನ ತಂಡ ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಬೆಂಚ್: ಹರ್ಷಲ್ ಪಟೇಲ್, ರಿಷಭ್ ಪಂತ್, ಯುಜ್ವೇಂದ್ರ ಚಾಹಲ್, ದೀಪಕ್ ಹೂಡಾ
ಪಾಕಿಸ್ತಾನ ಆಡುವ ಬಳಗ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಶಾನ್ ಮಸೂದ್, ಶಾದಾಬ್ ಖಾನ್, ಹೈದರ್ ಅಲಿ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಆಸಿಫ್ ಅಲಿ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹಾರಿಸ್ ರೌಫ್
ಬೆಂಚ್: ಖುಶ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ವಾಸಿಂ ಜೂನಿಯರ್, ಫಖರ್ ಜಮಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications