For Quick Alerts
ALLOW NOTIFICATIONS  
For Daily Alerts
 

ICC World Cup 2023: ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ಸೋಲುಣಿಸಿದ ಭಾರತ; ಮರುಕಳಿಸಿದ ಇತಿಹಾಸ!

ಶನಿವಾರ, ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 12ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಹೀನಾಯವಾಗಿ ಸೋಲಿಸಿದ ಭಾರತ ತಂಡ ವಿಶ್ವಕಪ್‌ನಲ್ಲಿ ತನ್ನ ಅಜೇಯ ದಾಖಲೆಯನ್ನು ಮುಂದುವರೆಸಿದೆ.

ಏಕದಿನ ವಿಶ್ವಕಪ್ ಇತಿಹಾಸದಲ್ಲಿ 1992ರಿಂದ 2023ರವರೆಗೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಇದುವರೆಗೆ 8 ಬಾರಿ ಮುಖಾಮುಖಿಯಾಗಿದ್ದು, ಪ್ರತಿ ಬಾರಿಯೂ ಭಾರತ ಗೆಲುವು ಸಾಧಿಸಿದೆ. ಇದೀಗ 1.20 ಲಕ್ಷಕ್ಕೂ ಅಧಿಕ ಪ್ರೇಕ್ಷಕರ ಎದುರು ಮತ್ತೊಮ್ಮೆ ಗೆದ್ದುಬೀಗಿದೆ.

ಬಹು ನಿರೀಕ್ಷಿತ 2023ರ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಾಯಕ ಬಾಬರ್ ಅಜಂ ಅವರ ಏಕೈಕ ಅರ್ಧಶತಕದ ನೆರವಿನಿಂದ 42.5 ಓವರ್‌ಗಳಲ್ಲಿ 191 ರನ್‌ಗಳಿಗೆ ಆಲೌಟ್ ಆಯಿತು.

nd-vs-pak-match-highlights-key-moments

192 ರನ್‌ಗಳ ಸುಲಭ ಗುರಿ ಬೆನ್ನಟ್ಟಿದ ಆತಿಥೇಯ ಭಾರತ ತಂಡ ರೋಹಿತ್ ಶರ್ಮಾ ಅವರ ಸ್ಫೋಟಕ ಅರ್ಧಶತಕದ ಸಹಾಯದಿಂದ ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್‌ ಗಳಿಸುವ ಮೂಲಕ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಭಾರತ ತಂಡದ ಇನ್ನಿಂಗ್ಸ್ ಆರಂಭಿಸಿದ ಶುಭ್ಮನ್ ಗಿಲ್ ಮತ್ತು ರೋಹಿತ್ ಶರ್ಮಾ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕಿಳಿದರು. ಈ ಜೋಡಿ ಮೊದಲ ವಿಕೆಟ್‌ಗೆ 23 ರನ್ ಗಳಿಸಿತು. ಈ ವೇಳೆ 4 ಬೌಂಡರಿಗಳ ಸಹಿತ 16 ರನ್ ಗಳಿಸಿದ ಶುಭ್ಮನ್ ಗಿಲ್ ಶಾಹೀನ್ ಅಫ್ರಿದಿ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು.

ನಂತರ ಬಂದ ವಿರಾಟ್ ಕೊಹ್ಲಿ ಕೂಡ ಉತ್ತಮ ಲಯದಲ್ಲಿದ್ದರು. ಆದರೆ, 18 ರನ್ ಗಳಿಸಿದ್ದ ವೇಳೆ ದೊಡ್ಡ ಶಾಟ್ ಬಾರಿಸಲು ಹೋಗಿ ಹಸನ್ ಅಲಿ ಬೌಲಿಂಗ್‌ನಲ್ಲಿ ಕ್ಯಾಚ್ ನೀಡಿದರು. ಇನ್ನು ನಾಯಕ ರೋಹಿತ್ ಶರ್ಮಾ ಆರ್ಭಟಿಸಿ 63 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸಿಕ್ಸರ್ ಮೂಲಕ 86 ರನ್ ಬಾರಿಸಿದರು.

nd-vs-pak-match-highlights-key-moments

ಇನ್ನು ಶ್ರೇಯಸ್ ಅಯ್ಯರ್ ಕೂಡ ಬ್ಯಾಟಿಂಗ್ ಫಾರ್ಮ್‌ಗೆ ಮರಳಿದ್ದು, 61 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 53 ರನ್ ಗಳಿಸುವ ಮೂಲಕ ವಿಶ್ವಕಪ್‌ನಲ್ಲಿ ತಮ್ಮ ಮೊದಲ ಅರ್ಧಶತಕ ಗಳಿಸಿದರು.

ಇವರು ಕೆಎಲ್ ರಾಹುಲ್ ಜೊತೆಗೂಡಿ ಮುರಿಯದ 4ನೇ ವಿಕೆಟ್‌ಗೆ 46 ರನ್‌ಗಳ ಜೊತೆಯಾಟ ನೀಡಿದರು. ಇನ್ನು ಕೆಎಲ್ ರಾಹುಲ್ ಕೂಡ 29 ಎಸೆತಗಳಲ್ಲಿ ಅಜೇಯ 19 ರನ್ ಗಳಿಸಿದರು.

ಪಾಕಿಸ್ತಾನ ತಂಡದ ಪರ ಬೌಲಿಂಗ್‌ನಲ್ಲಿ ಶಾಹೀನ್ ಅಫ್ರಿದಿ 6 ಓವರ್‌ಗಳಲ್ಲಿ 36 ರನ್ ನೀಡಿ 2 ವಿಕೆಟ್ ಪಡೆದರೆ, ಹಸನ್ ಅಲಿ 6 ಓವರ್‌ಗಳಲ್ಲಿ 34 ರನ್ ನೀಡಿ 1 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಪಾಕಿಸ್ತಾನದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಇಮಾಮ್-ಉಲ್-ಹಕ್ 38 ಎಸೆತಗಳಲ್ಲಿ 6 ಬೌಂಡರಿ ಸಮೇತ 36 ರನ್ ಹಾಗೂ ಅಬ್ದುಲ್ಲಾ ಶಫೀಕ್ 20 ರನ್ ಗಳಿಸಿ ಔಟಾಗುವ ಮುನ್ನ ಮೊದಲ ವಿಕೆಟ್‌ಗೆ 41 ರನ್‌ಗಳ ಜೊತೆಯಾಟ ನೀಡಿ ಉತ್ತಮ ಅಡಿಪಾಯ ಹಾಕಿದರು.

Ind Vs Pak Match Highlights/Key Moments: ICC World Cup 2023 India defeats Pakistan by 7 Wickets

ನಂತರ ಬಂದ ನಾಯಕ ಬಾಬರ್ ಅಜಂ ಅವರು ಭಾರತ ವಿರುದ್ಧ ತಮ್ಮ ಮೊದಲ ಅರ್ಧಶತಕ ಬಾರಿಸಿದರು. 58 ಎಸೆತಗಳಲ್ಲಿ 7 ಬೌಂಡರಿ ಸಮೇತ 50 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ವಿಕೆಟ್ ಕೀಪರ್ ಮೊಹ್ಮಮದ್ ರಿಜ್ವಾನ್ 69 ಎಸೆತಗಳಲ್ಲಿ 7 ಬೌಂಡರಿ ನೆರವಿನಿಂದ 49 ರನ್ ಗಳಿಸಿ ಪೆವಿಲಿಯನ್ ಕಡೆ ಮುಖ ಮಾಡಿದರು.

ಬಳಿಕ ಬಂದ ಪಾಕಿಸ್ತಾನ ತಂಡದ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳಿಗೆ ಪ್ರತಿರೋಧ ಒಡ್ಡಲು ವಿಫಲರಾದರು. ಸೌದ್ ಶಕೀಲ್ 6 ರನ್, ಇಫ್ತಿಕರ್ ಅಹ್ಮದ್ 4 ರನ್, ಶಾದಾಬ್ ಖಾನ್ 2 ರನ್ ಗಳಿಸಿದರು. ಮೊಹಮ್ಮದ್ ನವಾಜ್ 4 ರನ್, ಹಸನ್ ಅಲಿ 12 ರನ್, ಶಾಹೀನ್ ಅಫ್ರಿದಿ 2 ರನ್ ಮತ್ತು ಹ್ಯಾರಿಸ್ ರೌಫ್ 2 ರನ್ ಮಾತ್ರ ಗಳಿಸಲು ಶಕ್ತರಾದರು.

ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಜಸ್ಪ್ರೀತ್ ಬುಮ್ರಾ 7 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರೆ, ಕುಲದೀಪ್ ಯಾದವ್ 10 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಕಬಳಿಸಿದರು.

ರವೀಂದ್ರ ಜಡೇಜಾ 9.5 ಓವರ್‌ಗಳಲ್ಲಿ 38 ರನ್ ನೀಡಿ 2 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ 6 ಓವರ್‌ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಇನ್ನು ಸ್ವಲ್ಪ ದುಬಾರಿಯಾದ ಮೊಹಮ್ಮದ್ ಸಿರಾಜ್ 8 ಓವರ್‌ಗಳಲ್ಲಿ 50 ರನ್ ನೀಡಿ 2 ವಿಕೆಟ್ ಪಡೆಯಲು ಯಶಸ್ವಿಯಾದರು.

Story first published: Saturday, October 14, 2023, 20:11 [IST]
Other articles published on Oct 14, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+