India vs Pakistan: ಭಾರತ ತಂಡದ ಆ ಒಂದು ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗನಿಂದ ಪ್ರಶಂಸೆ

ಪಾಕಿಸ್ತಾನದ ವಿರುದ್ಧದ ಏಷ್ಯಾ ಕಪ್‌ನ ಪಂದ್ಯದಲ್ಲಿ ಭಾರತ ತಂಡ ರೋಚಕ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಭಾರತ ತಂಡದ ಒಂದು ನಿರ್ಧಾರದ ಬಗ್ಗೆ ಮಾಜಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಅನುಭವಿ ಆಟಗಾರ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿದ ಮ್ಯಾನೇಜ್‌ಮೆಂಟ್‌ನ ನಿರ್ಧಾರವನ್ನು ಪ್ರಶಂಸಿಸಲೇಬೇಕು ಎಂದಿದ್ದಾರೆ.
ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ರವೀಂದ್ರ ಜಡೇಜಾ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು. ನಿರ್ಣಾಯಕ 35 ರನ್‌ಗಳ ಕೊಡುಗೆ ನೀಡಿದ ಅವರು ಹಾರ್ದಿಕ್ ಪಾಂಡ್ಯ ಜೊತೆಗೆ ಸೇರಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು. ಈ ಇಬ್ಬರ ಜೊತೆಯಾಟ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದೆ.

ಜಡೇಜಾ ಪ್ರದರ್ಶನಕ್ಕೆ ಪಾರ್ಥಿವ್ ಮೆಚ್ಚುಗೆ
ಇನ್ನು ಈ ಸಂದರ್ಭದಲ್ಲಿ ರವೀಂದ್ರ ಜಡೇಜಾ ಅವರ ಪ್ರದರ್ಶನಕ್ಕೆ ಕೂಡ ಪಾರ್ಥಿವ್ ಪಟೇಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಾ ಆಟಗಾರರು ವಿಕೆಟ್ ಕಳೆದುಕೊಂಡ ಬಳಿಕವೂ ರವೀಂದ್ರ ಜಡೇಜಾ ನೀಡಿದ ಜವಾಬ್ಧಾರಿಯುತ ಪ್ರದರ್ಶನ ಮೆಚ್ಚುವಂತದ್ದು ಎಂದಿದ್ದಾರೆ. ಇದೊಂದು ರಣತಂತ್ರದ ವಿಚಾರವಾಗಿ ಅದ್ಭುತವಾದ ನಿರ್ಧಾರ ಎಂದಿದ್ದಾರೆ ಪಾರ್ಥಿವ್ ಪಟೇಲ್.

"ಅದ್ಭುತವಾದ ರಣತಂತ್ರ"
ಭಾರತ ತಂಡದಿಂದ ಇದು ನಿಜಕ್ಕೂ ಅದ್ಭುತವಾದ ರಣತಂತ್ರವಾಗಿದೆ. ತಮ್ಮ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿರುವ ಏಕೈಗ ಎಡಗೈ ಆಟಗಾರ ಎಂಬುದನ್ನು ಅರಿತು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡ ರವೀಂದ್ರ ಜಡೇಜಾ ಕೂಡ ಉತ್ತಮವಾಗಿ ಆಡಿದ್ದಾರೆ" ಎಂದು ಜಡೇಜಾ ಅವರ ಬ್ಯಾಟಿಂಗ್ ಬಗ್ಗೆಯೂ ಪ್ರಶಂಸಿಸಿದ್ದಾರೆ ಪಾರ್ಥಿವ್ ಪಟೇಲ್.

ಭರ್ಜರಿ ಹೋರಾಟ ನೀಡಿ ಗೆದ್ದ ಭಾರತ
ಪಾಕಿಸ್ತಾನ ನೀಡಿದ 148 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭದಲ್ಲಿಯೇ ಆಘಾತ ನಿಡುವ ಮೂಲಕ ಪಾಕಿಸ್ತಾನ ತಂಡ ಕಠಿಣ ಹೋರಾಟ ನೀಡುವ ಸೂಚನೆಯನ್ನು ಆರಂಭದಲ್ಲಿಯೇ ನೀಡಿತ್ತು. ಕೆಎಲ್ ರಾಹುಲ್ ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲಿಯೇ ಚೊಚ್ಚಲ ಟಿ20 ಪಂದ್ಯವನ್ನು ಆಡುತ್ತಿರುವ ನಸೀಮ್ ಶಾಗೆ ವಿಕೆಟ್ ಒಪ್ಪಿಸಿದರು. ನಂತರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರಿಂದ 49 ರನ್‌ಗಳ ಜೊತೆಯಾಟ ಬಂತು. ಈ ಜೋಡಿಯನ್ನು ನವಾಜ್ ಬೇರ್ಪಡಿಸಿದರು. ಇಬ್ಬರು ದಾಂಡಿಗರು ಕೂಡ ನವಾಜ್‌ಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿಕೊಂಡರು. ನಂತರ ಬಂದ ಸೂರ್ಯಕುಮಾರ್ ಯಾದವ್ 18 ರನ್‌ಗಳಿಗೆ ಔಟಾದರು. ಇನ್ನು 89 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿದ್ದಾಗ ಜೊತೆಯಾಗಿದ್ದು ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ.ಈ ಜೋಡಿ ಅರ್ಧ ಶತಕದ ಜೊತೆಯಾಡಿದ್ದಲ್ಲದೆ ತಂಡವನ್ನು ಗೆಲುವಿನ ಸನಿಹಕ್ಕೆ ತಲುಪಿಸಿದರು.

ಆಡುವ ಬಳಗ ಹೀಗಿತ್ತು
ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್ (ವಿಕೆ), ಹಾರ್ದಿಕ್ ಪಾಂಡ್ಯ,
ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ಬೆಂಚ್: ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್, ದೀಪಕ್ ಹೂಡಾ, ರವಿ ಬಿಷ್ಣೋಯ್
ಪಾಕಿಸ್ತಾನ ಆಡುವ ಬಳಗ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಹನವಾಜ್ ದಹಾನಿ
ಬೆಂಚ್: ಮೊಹಮ್ಮದ್ ಹಸನೈನ್, ಉಸ್ಮಾನ್ ಖಾದಿರ್, ಹಸನ್ ಅಲಿ, ಹೈದರ್ ಅಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications