For Quick Alerts
ALLOW NOTIFICATIONS  
For Daily Alerts
 

Ind vs Pak: ಪಾಕಿಸ್ತಾನಕ್ಕೆ ಇದು ಕೆಟ್ಟ ಸುದ್ದಿ: ಪಲ್ಲೆಕೆಲೆಯಲ್ಲಿ ಅಬ್ಬರಿಸಿದ್ದಾರೆ ಈ ಇಬ್ಬರು ಭಾರತೀಯರು

ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಸೆಣೆಸಾಟಕ್ಕೆ ಕಲವೇ ಗಂಟೆಗಳು ಮಾತ್ರವೇ ಬಾಕಿಯಿದೆ. ಎರಡು ತಂಡಗಳು ಕೂಡ ಈ ಪಂದ್ಯಕ್ಕೆ ಸಿದ್ಧತೆಗಳನ್ನು ನಡೆಸುತ್ತಿದೆ. ಈ ಪಂದ್ಯದಲ್ಲಿ ಯಾವ ತಂಡಕ್ಕೆ ಗೆಲುವು ದೊರೆಯಬಹುದು ಎನ್ನುವ ನಿಟ್ಟಿನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ತಂಡದ ಬಲಾಬಲಗಳ ಬಗ್ಗೆಯೂ ಹೋಲಿಕೆಗಳು ನಡೆಯುತ್ತಿದೆ.

ಇನ್ನು ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಪಂದ್ಯ ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಕಾರಣದಿಂದಾಗಿ ಅಲ್ಲಿ ಭಾರತೀಯ ಆಟಗಾರರ ಪ್ರದರ್ಶನ ಕೂಡ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. ಈ ಅಂಕಿಅಂಶಗಳನ್ನು ನೋಡಿದಾಗ ಭಾತ ತಂಡದ ಇಬ್ಬರು ಆಟಗಾರರ ದಾಖಲೆ ಶ್ರೀಲಂಕಾ ನೆಲದಲ್ಲಿ ಅತ್ಯದ್ಭುತವಾಗಿದೆ. ಇದು ಎದುರಾಳಿ ಪಾಕಿಸ್ತಾನ ತಂಡಕ್ಕೆ ನಿದ್ದೆಗೆಡಿಸುವುದರಲ್ಲಿ ಅನುಮಾನವಿಲ್ಲ.

IND vs PAK: Rohit Sharma and Jasprit Bumrah records at Pallekele shines: it may trouble for Pakistan

ಪಾಕಿಸ್ತಾನ ತಂಡ ಭಾರತದ ವಿರುದ್ಧ ಸೆಣೆಸಾಡುವುದಕ್ಕೂ ಮುನ್ನ ಏಷ್ಯಾಕಪ್‌ನ ಉದ್ಘಾಟನಾ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಿತ್ತು. ಆ ಪಂದ್ಯದಲ್ಲಿ ಸಾರ್ವಾಂಗೀಣ ಪ್ರದರ್ಶನ ತೋರಿದ ಪಾಕ್ ಪಡೆ ಭರ್ಜರಿ ೨೩೮ ರನ್‌ಗಳ ಅಂತರದ ಗೆಲುವು ಸಾಧಿಸಿದೆ. ಹೀಗಾಗಿ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿದಿದೆ. ಇತ್ತ ಭಾರತ ಈ ಟೂರ್ನಿಯಲ್ಲಿ ತನ್ನ ಮೊದಲ ಸೆಣೆಸಾಟವನ್ನು ಪಾಕಿಸ್ತಾನದ ವಿರುದ್ಧ ಆಡಲಿದ್ದು ಕುತೂಹಲ ಮೂಡಿಸಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಯಾವಾಗಲೂ ಅಬ್ಬರಿಸುವ ವಿರಾಟ್ ಕೊಹ್ಲಿ ಜೊತೆಗೆ ಮತ್ತಬ್ಬರು ಪ್ರಮುಖ ಆಟಗಾರರಾದ ನಾಯಕ ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬೂಮ್ರಾ ಅವರ ಮೇಲೆ ಕೂಡ ವಿಶೇಷ ನಿಗಾವಹಿಸಬೇಕಿದೆ.

ಪಲ್ಲೆಕೆಲೆಯಲಲ್ಇ ಭಾರತ ಈವರೆಗೆ ಕೇವಲ ಮೂರು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದೆ. ಇದರಲ್ಲಿ ಎರಡು ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದ್ದು ಒಂದು ಸೋಲು ಕಂಡಿದೆ. ಭಾರತ ಇಲ್ಲಿ ಕೊನೆಯ ಬಾರಿಗೆ 2017ರಲ್ಲಿ ಎರಡು ಏಕದಿನ ಪಂದ್ಯಗಳನ್ನು ಆಡಿದ್ದು. ಆ ಎರಡು ಪಂದ್ಯದಲ್ಲಿಯೂ ಭಾರತ ಸುಲಭ ಗೆಲುವು ಸಾಧಿಸಿತ್ತು. ಆ ಎರಡು ಪಂದ್ಯಗಳಲ್ಲಿ ಬೌಲಿಂಗ್‌ನಲ್ಲಿ ಮಿಂಚಿದ್ದು ಜಸ್ಪ್ರೀತ್ ಬೂಮ್ರಾ. ಕೇವಲ ಎರಡು ಪಂದ್ಯಗಳಲ್ಲಿ ಬೂಮ್ರಾ ಒಟ್ಟು 9 ವಿಕೆಟ್‌ಗಳನ್ನು ಕಬಳಿಸಿದ್ದರು. ಮೊದಲ ಪಂದ್ಯದಲ್ಲಿ 4/43 ಅಂಕಿಅಂಶವನ್ನು ಹೊಂದಿದ್ದರೆ ಎರಡನೇ ಪಂದ್ಯದಲ್ಲಿ 5/27 ಅಂಕಿಅಂಶವ ನ್ನು ಹೊಂದಿದ್ದಾರೆ. ಹೀಗಾಗಿ ಶ್ರೀಲಂಕಾ ತಂಡವನ್ನು ಕನಿಷ್ಠ ಮೊತ್ತಕ್ಕೆ ಆಲೌಟ್ ಮಾಡಲು ಸಾಧ್ಯವಾಗಿತ್ತು.

ಇನ್ನು ಈ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್‌ನ್ಲಲಿ ಅಬ್ಬರಿಸಿದ್ದಾರೆ. ಪಲ್ಲೆಕೆಲೆಯಲ್ಲಿ ಆಡಿರುವ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಒಂದು ಶತಕ ಹಾಗೂ ಒಂದು ಅರ್ಧ ಶತಕವನ್ನು ಗಳಿಸಿದ್ದಾರೆ. ಎರಡು ಪಂದ್ಯಗಳಲ್ಲಿ ರೋಹಿತ್ ಒಟ್ಟು ಸಿಡಿಸಿದ್ದು 178 ರನ್‌ಗಳನ್ನು. ಹೀಗಾಗಿ ಪಾಕಿಸ್ತಾನ ತಂಡ ರೋಹಿತ್ ಶರ್ಮಾ ಅವರ ಈ ದಾಖಲೆಗಳಿಂದಾಗಿ ಆತಂಕಗೊಂಡಿರುವುದರಲ್ಲಿ ಅನುಮಾನವಿಲ್ಲ!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅಕ್ಸರ್ ಪಟೇಲ್, ಸೂರ್ಯಕುಮಾರ್ ಯಾದವ್ , ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮ

ಪಾಕಿಸ್ತಾನ ತಂಡ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಫಹೀಮ್ ಅಶ್ರಫ್, ಮೊಹಮ್ಮದ್ ಹ್ಯಾರಿಸ್ , ಮೊಹಮ್ಮದ್ ವಾಸಿಂ ಜೂನಿಯರ್, ಅಬ್ದುಲ್ಲಾ ಶಫೀಕ್, ಸೌದ್ ಶಕೀಲ್, ಉಸಾಮಾ ಮಿರ್

Story first published: Friday, September 1, 2023, 19:07 [IST]
Other articles published on Sep 1, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+