ಭಾರತ ಹಾಗೂ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಕಳೆದುಕೊಂಡಿದ್ದು ಮೊದಲಿಗೆ ಬೌಲಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿದೆ ಪಾಕಿಸ್ತಾನ. ಆದರೆ ಈ ಪಂದ್ಯದಲ್ಲಿ ಟಾಸ್ ಸೋತರೂ ಚಿಂತೆಯಿಲ್ಲ ಎಂದು ನಾಯಕ ರೋಹಿತ್ ಶರ್ಮಾ ಧೈರ್ಯವಾಗಿ ಹೇಳಿದ್ದಾರೆ. ಇದಕ್ಕೆ ಕಾರಣವನ್ನು ಕೂಡ ಟಾಸ್ ಸಂದರ್ಭದಲ್ಲಿಯೇ ವಿವರಿಸಿದ್ದಾರೆ ನಾಯಕ ರೋಹಿತ್ ಶರ್ಮಾ.
ಹೌದು, ಟಾಸ್ ಸಂದರ್ಭದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಂ ಬೌಲಿಂಗ್ ನಿರ್ಧಾರ ತೆಗೆದುಕೊಂಡ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ ನಮ್ಮ ಆಯ್ಕೆ ಮೊದಲಿಗೆ ಬ್ಯಾಟಿಂಗ್ ನಡೆಸುವುದೇ ಆಗಿತ್ತು ಎಂದಿದ್ದಾರೆ. ಈ ಮೂಲಕ ಟಾಸ್ ಸೋತಿರುವುದು ತಂಡಕ್ಕೆ ಯಾವುದೇ ಹಿನ್ನಡೆಯಾಗುವುದಿಲ್ಲ ಎನ್ನುವ ಸಂದೇಶವನ್ನು ರವಾನಿಸಿದ್ದಾರೆ ರೋಹಿತ್ ಶರ್ಮಾ.

"ಕಠಿಣವಾದ ಸವಾಲು ನಮ್ಮ ಮುಂದಿದ್ದು ಅವರ ಬೌಲರ್‌ಗಳ ಸವಾಲನ್ನು ನಾವು ಎದುರಿಸಬೇಕಿದೆ. ಕಳೆದ ಪಂದ್ಯದಲ್ಲಿ ನೀಡಿದ ಬ್ಯಾಟಿಂಗ್ ಪ್ರದರ್ಶನ ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದೆ. ಇಲ್ಲಿಂದ ಪ್ರತಿಯೊಂದು ಪಂದ್ಯ ಕೂಡ ಬಹಳ ಮುಖ್ಯವಾಗಿರುತ್ತದೆ. ಆದರೆ ಒಂದು ಪಂದ್ಯದ ಸಂದರ್ಭದಲ್ಲಿ ಆ ಪಂದ್ಯದ ಮೇಲೆ ಮಾತ್ರವೇ ನಮ್ಮ ಗಮನವಿರಲಿದೆ ಎನ್ನುವ ಮಾತನ್ನು ಹೇಳಿದ್ದಾರೆ ನಾಯಕ ರೋಹಿತ್ ಶರ್ಮಾ.
ಕಳೆದ ಪಂದ್ಯದಲ್ಲಿ ಭಾರತ ತಂಡ ನೇಪಾಳ ತಂಡವನ್ನು ಎದುರಿಸಿತ್ತು. ಆ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಅದ್ಭುತವಾದ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಯಾವುದೇ ವಿಕೆಟ್ ಕಳೆದುಕೊಳ್ಳದೆ ಬ್ಯಾಟಿಂಗ್ ನಡೆಸಿದ ಭಾರತ ತಂಡ 10 ವಿಕೆಟ್‌ಗಳ ಅಂತರದ ಬೃಹತ್ ಗೆಲುವು ಸಾಧಿಸಿತ್ತು.
ಇನ್ನು ಇದೇ ಸಂದರ್ಭದಲ್ಲಿ ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆಗಳೋಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದೆ. ನೇಪಾಳ ವಿರುದ್ಧದ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಗುಳಿದಿದ್ದ ಜಸ್ಪ್ರೀತ್ ಬೂಮ್ರಾ ಈ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ನಾಳ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಐಯ್ಯರ್ ಬದಲಿಗೆ ಕೆಎಲ್ ರಾಹುಲ್‌ಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿದೆ. ಶ್ರೇಯಸ್ ಐಯ್ಯರ್ ಸಣ್ಣ ಗಾಯದ ಗಾಯದ ಕಾರಣದಿಂದಾಗಿ ಈ ಪಂದ್ಯದಿಂದ ಹೊರಗುಳಿಯುವಂತಾಗಿದೆ ಎಂದು ನಾಯಕ ಶರ್ಮಾ ಮಾಹಿತಿ ನೀಡಿದರು.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಶ್ರೇಯಸ್ ಅಯ್ಯರ್, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ
ಪಾಕಿಸ್ತಾನ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶದಬ್ ಖಾನ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್
ಬೆಂಚ್: ಸೌದ್ ಶಕೀಲ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ವಾಸಿಮ್ ಜೂನಿಯರ್