IND vs PAK: ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಕಣಕ್ಕೆ ಇಳಿಯುವುದಿಲ್ಲ ಎಂದ ಪಾಕ್ ಪ್ರಧಾನಿ
ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ, ಭಾರತದ ವಿರುದ್ಧ ಗುಂಪು ಹಂತದಲ್ಲಿ ಕಣಕ್ಕೆ ಇಳಿಯುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ನೆರೆಯ ರಾಷ್ಟ್ರಗಳ ನಡುವಿನ ಹಗ್ಗಜಗ್ಗಾಟ ಎಲ್ಲರ ಗಮನ ಸೆಳೆದಿದೆ. ಪಾಕಿಸ್ತಾನ ಬಾಂಗ್ಲಾದೇಶಕ್ಕೆ ತನ್ನ ಒಗ್ಗಟ್ಟನ್ನು ಪ್ರದರ್ಶಿಸಲು ಮುಂದಾಗಿದೆ. ಇದರ ಪರಿಣಾಮವೇ ಪಾಕಿಸ್ತಾನ, ಭಾರತದ ವಿರುದ್ಧದ ಪಂದ್ಯದಲ್ಲಿ ಕಣಕ್ಕೆ ಇಳಿಯುವುದಿಲ್ಲ ಎಂದು ತಿಳಿಸಿತ್ತು. ಈಗ ಪಾಕಿಸ್ತಾನ ತನ್ನ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಬುಧವಾರ ಭಾರತದ ಪಂದ್ಯವನ್ನು ಬಾಯ್ಕಟ್ ಮಾಡುವ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಭಾರತ ವಿರುದ್ಧದ ಫೆಬ್ರವರಿ 15 ರಂದು ಶ್ರೀಲಂಕಾ ಕೊಲಂಬೊದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಪಾಕಿಸ್ತಾನದ ಪ್ರಧಾನಿಗಳು ಇಸ್ಲಾಮಾಬಾದ್‌ನಲ್ಲಿ ಕ್ಯಾಬಿನೇಟ್ ಉದ್ದೇಶಿಸಿ ಮಾತನಾಡುವಾಗ ಈ ವಿಚಾರ ಬಹಿರಂಗ ಪಡಿಸಿದ್ದಾರೆ. ಎಚ್ಚರಿಕೆಯಿಂದ ನಿರ್ಣಯಿಸಿದ ನಂತರ ಸೂಕ್ತ ನಿರ್ಧಾರಕ್ಕೆ ಬಂದಿರುವುದಾಗಿ ಪ್ರಧಾನಿ ತಿಳಿಸಿದ್ದಾರೆ.
ಪಾಕ್ ಪ್ರಧಾನಿ ಹೇಳಿದ್ದೇನು?
ಕ್ರೀಡೆಯಲ್ಲಿ ಕ್ರೀಡೆಯಲ್ಲಿ ರಾಜಕೀಯ ಸಲ್ಲದು. ನಾವು ಈ ವಿಷಯದ ಬಗ್ಗೆ ಸಾಕಷ್ಟು ಯೋಚಿಸಿ, ಚರ್ಚೆ ನಡೆಸಿದ ನಂತರವೇ ಈ ನಿರ್ಧಾರಕ್ಕೆ ಬಂದಿದ್ದೇವೆ. ಇದು ಅತ್ಯಂತ ಸೂಕ್ತವಾದ ನಿರ್ಧಾರವಾಗಿದೆ, ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ.
ಇದಕ್ಕೂ ಮೊದಲು ಪಾಕಿಸ್ತಾನ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಬಾಯ್ಕಟ್ ಮಾಡುವುದಾಗಿ ತಿಳಿಸಿತ್ತು. ಈ ಬಗ್ಗೆ ಪಾಕಿಸ್ತಾನ ಸರ್ಕಾರ ಸಾಮಾಜಿಕ ತಾಣದಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದೆ. ಈ ವಿಡಿಯೋದಲ್ಲಿ ಪಾಕ್ ಪ್ರಧಾನಿ ತಮ್ಮ ನಿರ್ಧಾರವನ್ನು ಕ್ಯಾಬಿನೇಟ್ ಮುಂದೆ ಪ್ರಕಟಿಸಿದರು. ಜಾಗತಿಕ ಕ್ರೀಡಾಕೂಟವೊಂದರಲ್ಲಿ ಹೀಗೆ 'ಆಯ್ದ ಪಂದ್ಯಗಳಲ್ಲಿ ಮಾತ್ರ ಭಾಗವಹಿಸುವುದು' ಕ್ರೀಡೆಯ ಮೂಲತತ್ವಕ್ಕೆ ವಿರುದ್ಧವಾಗಿದೆ ಎಂದು ಐಸಿಸಿ ತಿಳಿಸಿದೆ.
ಬಾಂಗ್ಲಾದೇಶ ತಂಡ ಐಸಿಸಿ ಟಿ20 ವಿಶ್ವಕಪ್‌ನಿಂದ ಹೊರ ನಡೆಯುತ್ತಿದ್ದಂತೆ ಪಾಕಿಸ್ತಾನ ತನ್ನ ಹೊಸ ನಾಟಕ ಆರಂಭಿಸಿತು. ಭದ್ರತಾ ಕಾರಣಗಳನ್ನು ನೀಡಿ ಬಾಂಗ್ಲಾದೇಶ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಪ್ರಯಾಣ ಬೆಳೆಸುವುದಿಲ್ಲ ಎಂದು ತಿಳಿಸಿತ್ತು. ಅಲ್ಲದೆ ತನ್ನ ಗುಂಪು ಹಾಗೂ ಸ್ಥಳವನ್ನು ಬದಲಿಸುವಂತೆ ಐಸಿಸಿಗೆ ಬೇಡಿಕೆ ಇಟ್ಟಿತ್ತು. ಆದರೆ ಐಸಿಸಿ ಈ ಬೇಡಿಕೆಗೆ ಸೊಪ್ಪು ಹಾಕಿರಲಿಲ್ಲ. ಅಲ್ಲದೆ ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್‌ನಿಂದ ಹೊರಗಿಡಲಾಯಿತು.ಬಾಂಗ್ಲಾದೇಶಕ್ಕೆ ಬೆಂಬಲವಾಗಿ ಪಾಕಿಸ್ತಾನ ಟೂರ್ನಿಯನ್ನು ಬಾಯ್ಕಟ್ ಮಾಡುವುದಾಗಿ ಈ ಮೊದಲು ಸುದ್ದಿಗಳು ಹೊರ ಬಂದಿದ್ದವು. ಆ ಬಳಿಕ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾಗವಹಿಸುತ್ತದೆ ಆದರೆ ಭಾರತದ ವಿರುದ್ಧ ಲೀಗ್ ಹಂತದ ಪಂದ್ಯವನ್ನು ಆಡುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.
ಶ್ರೀಲಂಕಾ ಪ್ರಯಾಣ ಬೆಳೆಸಿದ ಪಾಕ್
ಪಾಕಿಸ್ತಾನ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಲು ಈಗಾಗಲೇ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಿದೆ. ಪಾಕ್ ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯವನ್ನು ಫೆಬ್ರವರಿ 7 ರಂದು ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications