Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Pak: ಅಹ್ಮದಾಬಾದ್‌ಗೆ ಬಂದಿಳಿದ ರೋಹಿತ್ ಶರ್ಮಾ ಪಡೆ: ವಿಡಿಯೋ

ಭಾರತ ಹಾಗೂ ಪಾಕಿಸ್ತಾನದ ವಿರುದ್ಧ ವಿಶ್ವಕಪ್ ಟೂರ್ನಿಯ ಮೆಗಾ ಸೆಣೆಸಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ಈ ಎರಡು ತಂಡಗಳ ನಡುವೆ ಅಹ್ಮದಾಬಾದ್‌ನಲ್ಲಿ ಮುಖಾಮುಖಿಯಾಗಲಿದ್ದು ತೀವ್ರ ಪೈಪೋಟಿಯನ್ನು ನಿರೀಕ್ಷಿಸಲಾಗಿದೆ. ಎರಡು ತಂಡಗಳು ಕೂಡ ಮೊದಲ ಎರಡು ಪಂದ್ಯಗಳಲ್ಲಿ ಬರ್ಜರಿಯಾಗಿ ಗೆಲುವು ಸಾಧಿಸಿದ್ದು ಮೂರನೇ ಪಂದ್ಯದಲ್ಲಿಯೂ ಗೆಲುವಿನ ಲಯವನ್ನು ಮುಂದುವರಿಸುವ ಆತ್ಮವಿಶ್ವಾಸದಲ್ಲಿದೆ.

ಈ ಪಂದ್ಯಕ್ಕಾಗಿ ಇದೀಗ ಟೀಮ್ ಇಂಡಿಯಾ ಸಜ್ಜಾಗಿದ್ದು ಈಗಾಗಲೇ ಅಹ್ಮದಾಬಾದ್‌ಗೆ ಆಗಮಿಸಿದೆ. ಎರಡನೇ ಪಂದ್ಯವನ್ನು ದೆಹಲಿಯಲ್ಲಿ ಆಡಿದ ಬಳಿಕರೋಹಿತ್ ಶರ್ಮಾ ಪಡೆ ಮೂರನೇ ಪಂದ್ಯಕ್ಕಾಗಿ ಅಹ್ಮದಾಬಾದ್‌ಗೆ ಬಂದಿಳಿದಿದೆ. ಅನಾರೋಗ್ಯದಿಂದ ಮೊದಲ ಎರಡು ಪಂದ್ಯಗಳಿಮದ ಹೊರಗುಳಿದಿದ್ದ ಶುಬ್ಮನ್ ಗಿಲ್ ಭಾರತ ತಂಡ ಈಗ ಇಲ್ಲಿಗೆ ಬಂದಿಳಿದಿದೆ.

Ind vs Pak: Team India players arrive in Ahmedabad for mega India vs Pakistan World cup match

ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಶುಬ್ಮನ್ ಗಿಲ್ ಕಳೆದ ರಾತ್ರಿ ಅಹಮದಾಬಾದ್‌ಗೆ ಬಂದಿಳಿದಿದ್ದಾರೆ ಎನ್ನುವುದು ಗಮನಿಸಬೇಕಾದ ಸಂಗತಿ.

ಇನ್ನು ಶುಬ್ಮನ್ ಗಿಲ್ ಡೆಂಗ್ಯೂ ಜ್ವರದಿಂದಾಗಿ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೆ ಅಲಭ್ಯವಾಗಿದ್ದರು. ತಕ್ಷತದಲ್ಲಿ ಪ್ಲೇಟ್ಲೇಟ್‌ಗಳ ಸಂಖ್ಯೆ ಕುಸಿತವಾಗಿದ್ದ ಕಾರಣ ಆಸ್ಪತ್ರೆಗೂ ದಾಖಲಾಗಿ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ಇದೀಗ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಶುಬ್ಮನ್ ಗಿಲ್ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಈ ಮಹತ್ವದ ಪಂದ್ಯಕ್ಕೆ ಗಿಲ್ ಆಯ್ಕೆಗೆ ಲಭ್ಯವಿರುವ ಸಾಧ್ಯತೆ ಹೆಚ್ಚಿದೆ.

ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ಶುಬ್ಮನ್ ಗಿಲ್

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಶದಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಮ್.

Story first published: Thursday, October 12, 2023, 16:52 [IST]
Other articles published on Oct 12, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+