Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Pak: ಪಾಕ್ ಮಣಿಸಲು ಬಲಿಷ್ಠ ಆಡುವ ಬಳಗ ಸಿದ್ಧ: ಭಾರತ ತಂಡದಿಂದ ಹೊರಬೀಳುವ 4 ಆಟಗಾರರು ಇವರೇ!

ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಮುಖಾಮುಖಿ ತೀವ್ರ ಕುತೂಹಲ ಮೂಡಿಸಿದೆ. ಶನಿವಾರ ಅಹ್ಮದಾಬಾದ್‌ನಲ್ಲಿ ನಡೆಯಲಿರುವ ಈ ಮೆಗಾ ಸೆಣೆಸಾಟವನ್ನು ನೋಡಲು ವಿಶ್ವಕ್ರಿಕೆಟ್‌ನ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಹೀಗಾಗಿ ಈ ಪಂದ್ಯದ ಮಢಲಿನ ನಿರೀಕ್ಷೆ ಹೆಚ್ಚಾಗಿದೆ. ಎರಡು ತಂಡಗಳು ಕೂಡ ಈ ಪಂದ್ಯಕ್ಕೆ ಬಲಿಷ್ಠವಾದ ಆಡುವ ಬಳಗದೊಂದಿಗೆ ಕಣಕ್ಕಿಳಿಯಲು ಸಿದ್ಧವಾಗಿದೆ.

ಭಾರತ ಹಾಗೂ ಪಾಕಿಸ್ತಾನ ಎರಡು ತಂಡಗಳು ಕೂಡ ಈ ವಿಶ್ವಕಪ್‌ನಲ್ಲಿ ಅದ್ಭುತ ಆರಂಭ ಪಡೆದುಕೊಂಡಿದೆ. ಮೊದಲ ಎರಡು ಪಂದ್ಯಗಳಲ್ಲಿ ಎರಡು ತಂಡಗಳು ಕೂಡ ಗೆಲುವು ಸಾಧಿಸಿದ್ದು ತಲಾ ನಾಲ್ಕು ಅಂಕಗಳ್ನು ಖಾತೆಯಲ್ಲಿ ಹೊಂದಿದೆ. ಪಾಕಿಸ್ತಾನ ನೆದರ್ಲೆಂಡ್ಸ್ ಹಾಗೂ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದ್ದರೆ ಭಾರತ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡವನ್ನು ಮಣಿಸಿದೆ. ನೆಟ್ ರನ್‌ರೇಟ್ ಆಧಾರದಲ್ಲಿ ಭಾರತ ಪಾಕಿಸ್ತಾನಕ್ಕಿಂತ ಅಂಕಪಟ್ಟಿಯಲ್ಲಿ ಮುಂದಿದೆ.

Ind vs Pak: Team Indias strongest playing XI against Pakistan World cup match

ಇನ್ನು ಪಾಕಿಸ್ತಾನ ವಿರುದ್ಧದ ಈ ಪಂದ್ಯಕ್ಕೆ ಭಾರತದ ಬಲಿಷ್ಠ ಆಡುವ ಬಳಗ ಹೇಗಿರಲಿದೆ ಎನ್ನುವುದು ಈಗಿನ ಕುತೂಹಲ. ಟೀಮ್ ಇಂಡಿಯಾದ ಸಂಭಾವ್ಯ ಆಡುವ ಬಳಗ ಹೀಗಿದೆ.

ಟೀಮ್ ಇಂಡಿಯಾದ ಸಂಭಾವ್ಯ ಆಡುವ ಬಳಗ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.

ಒಂದು ಬದಲಾವಣೆ ಸಾಧ್ಯತೆ
ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಒಂದು ಬದಲಾವಣೆಯನ್ನು ನಿರೀಕ್ಷಿಸಲಾಗಿದೆ. ಟೀಮ್ ಇಂಡಿಯಾ ಮೂವರು ಸ್ಪಿನ್ನರ್‌ಗಳಿಂದಿಗೆ ಆಡುವ ಸಾಧ್ಯತೆಯಿದೆ. ಹೀಗಾಗಿ ಆರ್ ಅಶ್ವಿನ್ ಮತ್ತೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಬಹುದು. ಅವರಿಗಾಗಿ ಶಾರ್ದೂಲ್ ಠಾಕೂರ್ ಸ್ಥಾನವನ್ನು ಬಿಟ್ಟುಕೊಡಬೇಕಾಗಬಹುದು.

ಗಿಲ್‌ಗಿಲ್ಲ ಅವಕಾಶ?
ಇನ್ನು ಡೆಂಗ್ಯೂ ಜ್ವರದಿಂದ ಬಳಲಿ ಚೇತರಿಕೆ ಕಂಡಿರುವ ಶುಬ್ಮನ್ ಗಿಲ್ ಈಗಾಗಲೇ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಅಹ್ದಾಬಾದ್‌ನಲ್ಲಿ ಗಿಲ್ ಮತ್ತೆ ನೆಟ್ ಅಭ್ಯಾಸವನ್ನು ಕೂಡ ಆರಂಭಿಸಿದರು. ಆದರೆ ಏಕದಿನ ಪಂದ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಳ್ಳುವಷ್ಟು ಅವರಲ್ಲಿ ಈ ಹಂತದಲ್ಲಿ ಚೈತನ್ಯ ಇರುವುದು ಕಷ್ಟ. ಹಾಗಾಗಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅವರು ಭಾರತದ ಪರವಾಗಿ ಆಡುವ ಸಾಧ್ಯತೆ ಕ್ಷೀಣಿಸಿದೆ.

ಆಡುವ ಬಳಗದಿಂದ ಹೊರಗುಳಿಯುವ ನಾಲ್ವರು ಆಟಗಾರರು ಇವರು
ಟೀಮ್ ಇಂಡಿಯಾದ ಯುವ ಆಟಗಾರ ಶುಬ್ಮನ್ ಗಿಲ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಸಾಧ್ಯತೆ ಕಡಿಮೆಯಿದೆ. ಅವರ ಜೊತೆಗೆ ಸೂರ್ಯಕುಮಾರ್ ಯಾದವ್ ಕೂಡ ಈ ಪಂದ್ಯದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಖಂಡಿತಾ ಇಲ್ಲ. ಇನ್ನು ಶಾರ್ದೂಲ್ ಠಾಕೂರ್ ಈ ಪಂದ್ಯದಲ್ಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯಿದೆ. ಜೊತೆಗೆ ಅನುಭವಿ ಮೊಹಮ್ಮದ್ ಶಮಿ ಕೂಡ ಈ ಮಹತ್ವದ ಪಂದ್ಯದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಬಹಳ ಕಡಿಮೆಯಿದೆ.

Story first published: Friday, October 13, 2023, 16:52 [IST]
Other articles published on Oct 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+