ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs SA 1st ODI : ಸಂಜು ಸ್ಯಾಮ್ಸನ್ ಹೋರಾಟ ವ್ಯರ್ಥ: ಧವನ್ ಪಡೆಗೆ ಸೋಲಿನ ಕಹಿ

Ind vs SA, 1st ODI: India lost the match by 9 runs against South Africa

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಅಂತ್ಯವಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ ರೋಚಕ ಸೆಣೆಸಾಟ ನಡೆಸಿತಾದರೂ ಅಂತಿಮವಾಗಿ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ಗೆಲುವಿನ ನಗುಬೀರುವಲ್ಲಿ ಯಶಸ್ವಿಯಾಗಿದೆ. ಶಿಖರ್ ಧವನ್ ನೇತೃತ್ವದ ಭಾರತ ತಂಡ ಅದ್ಭುತ ಹೋರಾಟ ನಡೆಸಿತಾದರೂ ಕೇವಲ 9 ರನ್‌ಗಳ ಅಂತರದಿಂದ ಸೋಲು ಅನುಭವಿಸಿದೆ. ಮಳೆಯಿಂದಾಗಿ ಎರಡು ತಂಡಗಳಿಗೂ 40 ಓವರ್‌ಗಳ ಪಂದ್ಯವನ್ನು ನಿಗದಿಗೊಳಿಸಲಾಗಿದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 250 ರನ್‌ಗಳ ಗುರಿಯನ್ನು ಭಾರತಕ್ಕೆ ನಿಗದಿಪಡಿಸಿತು. ಇದನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 240 ರನ್‌ಗಳಿಗೆ ತನ್ನ ಆಟವನ್ನು ಅಂತ್ಯಗೊಳಿಸಿ 9 ರನ್‌ಗಳ ಅಂತರದಿಂದ ಸೋಲು ಒಪ್ಪಿಕೊಂಡಿದೆ.

ಈ ಪಂದ್ಯದಲ್ಲಿ ಭಾರತ ತಂಡದ ಪರವಾಗಿ ಮಧ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಐಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಅವರಿಂದ ಅದ್ಭುತ ಪ್ರದರ್ಶನ ವ್ಯಕ್ತವಾಯಿತು. ಅದರಲ್ಲೂ ಸಂಜು ಸ್ಯಾಮ್ಸನ್ ಅಂತಿಮ ಹಂತದವರೆಗೂ ಅಮೋಘ ಹೋರಾಟ ನಡೆಸಿತಾದರೂ ಗೆಲುವು ಸಾಧ್ಯವಾಗಲಿಲ್ಲ.

ಕ್ಲಾಸೆನ್- ಮಿಲ್ಲರ್ ಕ್ಲಾಸ್ ಆಟ: ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಆರಂಭದಲ್ಲಿ ರನ್‌ಗಳಿಸಲು ತಿಣುಕಾಡಿತು. ಆದರೆ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ತಮ್ಮ ಉತ್ತಮ ಫಾರ್ಮ್ ಮುಂದಿವರಿಸಿದ್ದು ಈ ಪಂದ್ಯದಲ್ಲಿಯೂ 48ರನ್‌ಗಳ ಕೊಡುಗೆ ನೀಡಿದರು. ಆದರೆ ಆರಂಭಿಕ ಆಟಗಾರ ಜಾನ್ನೆಮನ್ ಮಲನ್ 22 ರನ್‌ಗಳಿಗೆ ವಿಕೆಟ್ ಕಳೆದುಕೊಂಡರೆ ನಾಯಕ ಬವುಮಾ ಮತ್ತಿಮ್ಮೆ ವೈಫಲ್ಯವನ್ನು ಅನುಭವಿಸಿದರು. ಕೇವಲ 8 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು ಬವುಮಾ. ಬಳಿಕ ಮಾರ್ಕ್ರಮ್ ಕುಲ್‌ದೀಪ್ ಯಾದವ್ ಅವರ ಅದ್ಭುತ ಬೌಲಿಂಗ್‌ಗೆ ಬೌಲ್ಡ್ ಆಗುವ ಮೂಲಕ ವಿಕೆಟ್ ಕಳೆದುಕೊಂಡರು. 110 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡ ದಕ್ಷಿಣ ಆಫ್ರಿಕಾ ಸಂಕಷ್ಟದಲ್ಲಿತ್ತು. ಆದರೆ ಈ ಹಂತದಲ್ಲಿ ಬ್ಯಾಟಿಂಗ್‌ಗೆ ಇಳಿದ ಹೆನ್ರಿಕ್ ಕ್ಲಾಸಿನ್ ಹಾಗೂ ಡೇವಿಡ್ ಮಿಲ್ಲರ್ ಅದ್ಭುತ ಜೊತೆಯಾವನ್ನು ನೀಡಿದರು. ಈ ಜೋಡಿ ಭರ್ಜರಿ 139 ರನ್‌ಗಳ ಜೊತೆಯಾಟವನ್ನು ನೀಡುವ ಮೂಲಕ ತಂಡದ ದೊಡ್ಡ ಮೊತ್ತದ ಗುರಿ ನಿಗದಿಪಡಿಸಲು ಕಾರಣವಾದರು.

ಮಧ್ಯಮ ಕ್ರಮಾಂಕದ ಜವಾಬ್ಧಾರಿಯುತದ ಬ್ಯಾಟಿಂಗ್

ಆರಂಭಿಕ ಆಟಗಾರರಾದ ಶಿಖರ್ ಧವನ್ ಹಾಗೂ ಶುಬ್ಮನ್ ಗಿಲ್ ಈ ಪಂದ್ಯದಲ್ಲಿ ವೈಫಲ್ಯವನ್ನು ಅನುಭವಿಸಿದರು. ಆದರೆ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಭಾರತ ತಂಡದ ಹೋರಾಟವನ್ನು ಚಾಲ್ತಿಯಲ್ಲಿಟ್ಟಿತ್ತು. ಅದರಲ್ಲೂ ಶ್ರೇಯಸ್ ಐಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಜೊತೆಯಾಟ ತಂಡಕ್ಕೆ ಗೆಲುವಿನ ವಿಶ್ವಾಸವನ್ನು ಮುಡಿಸಿತ್ತು. ಆದರೆ ಈ ಹಂತದಲ್ಲಿ ಅರ್ಧ ಶತಕ ಸಿಡಿಸಿದ್ದ ಐಯ್ಯರ್ ವಿಕೆಟ್ ಕಳೆದುಕೊಂಡರು. ನಂತರ ಸಂಜು ಸ್ಯಾಮ್ಸನ್‌ಗೆ ಶಾರ್ದೂಲ್ ಠಾಕೂರ್ ಅದ್ಭುತವಾಗಿ ಸಾಥ್ ನೀಡಿದರು. ಈ ಜೋಡಿಯಿಂದ 6ನೇ ವಿಕೆಟ್‌ಗೆ ಮಹತ್ವದ 93 ರನ್‌ಗಳ ಜೊತೆಯಾಟ ಬಂದಿತ್ತು. ಆದರೆ ಶಾರ್ದೂಲ್ ಠಾಕೂರ್ ವಿಕೆಟ್ ಕಳೆದುಕೊಂಡ ನಂತರ ಮತ್ತೊಂದು ತುದಿಯಲ್ಲಿ ಸಂಜು ಸ್ಯಾಮ್ಸನ್‌ಗೆ ಸೂಕ್ತ ಜೊತೆಗಾರ ದೊರೆಯಲಿಲ್ಲ. ಹಾಗಿದ್ದರೂ ಹೋರಾಟ ಮುಂದುವರಿಸಿದ ಸಂಜು ಸ್ಯಾಮ್ಸನ್ ಗೆಲುವಿನ ಸನಿಹದವರೆಗೆ ತಲುಪಿಸಿದರೂ ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ 63 ಎಸೆತಗಳಲ್ಲಿ 86 ರನ್‌ಗಳಿಸಿ ಅಜೇಯವಾಗುಳಿದರು.

ಭಾರತ vs ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯದ ಆಡುವ 11ರ ಬಳಗ
ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್/ಉಪನಾಯಕ), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ: ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ತಬ್ರೈಜ್ ಶಮ್ಸಿ.

Story first published: Friday, October 7, 2022, 9:28 [IST]
Other articles published on Oct 7, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X