ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ದ. ಆಪ್ರಿಕಾ: 1st ODI: ಪಂದ್ಯದ ಆರಂಭ, ಪ್ರಿವ್ಯೂ, ನೇರಪ್ರಸಾರ, ಹವಾಮಾನ ವರದಿ

Ind vs SA: 1st ODI: Live Telecast details, Pitch Report, Weather Forecast

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಏಕದಿನ ಸರಣಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಭಾರತ ದಕ್ಷಿಣ ಆಪ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕಳೆದುಕೊಂಡಿರುವ ಕಾರಣ ಈ ಏಕದಿನ ಸರಣಿಯನ್ನು ವಶಕ್ಕೆ ಪಡೆಯುವ ಹಂಬಲದಲ್ಲಿ ಭಾರತ ತಂಡವಿದೆ. ಕೆಎಲ್ ರಾಹುಲ್ ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದು ಜಸ್ಪ್ರೀತ್ ಬೂಮ್ರಾ ಉಪನಾಯಕನಾಗಿ ಸಾತ್ ನೀಡಲಿದ್ದಾರೆ.

ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿಲ್ಲದಿದ್ದರೂ ಬ್ಯಾಟರ್ ಆಗಿ ತಮ್ಮ ಕೊಡುಗೆಯನ್ನು ನೀಡಲಿದ್ದಾರೆ. ಇನ್ನು ಇತ್ತೀಚೆಗಷ್ಟೇ ಅಂತ್ಯವಾದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಇದೇ ಫಾರ್ಮ್‌ಅನ್ನು ಏಕದಿನ ಸರಣಿಯಲ್ಲಿಯೂ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಕೊನೆಯ ಬಾರಿಗೆ ಏಕದಿನ ಸರಣಿಯಲ್ಲಿ ಆಡಿದ್ದು ಕಳೆದ ಮಾರ್ಚ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ. ಇದೀಗ ದಕ್ಷಿಣ ಆಪ್ರಿಕಾ ನೆಲದಲ್ಲಿ ಕೊಹ್ಲಿ ಬ್ಯಾಟಿಂಗ್‌ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಇನ್ನು ಈ ಏಕದಿನ ಸರಣಿ ಮೂಲಕ ಭಾರತ ತಂಡ 2023ರ ಏಕದಿನ ವಿಶ್ವಕಪ್‌ಗೆ ಸಿದ್ಧತೆಯನ್ನು ಆರಂಭಿಸಲಿದೆ. ಹೊಸತನದೊಂದಿಗೆ ಭಾರತೀಯ ತಂಡ ತನ್ನ ಸಂಪೂರ್ಣ ಸಾಮರ್ಥ್ಯವನ್ನು ಪ್ರದರ್ಶಿಸುವ ಉತ್ಸಾಹದಲ್ಲಿದೆ. ಈ ಸರಣಿಯ ಮೂಲಕ ಈ ವರ್ಷವನ್ನು ಅದ್ಭುತವಾಗಿ ಆರಂಭಿಸುವ ಲೆಕ್ಕಾಚಾರದಲ್ಲಿದೆ ಭಾರತ ತಂಡ.

MS ಧೋನಿ ಟೆಸ್ಟ್‌ ಕ್ರಿಕೆಟ್ ನಿವೃತ್ತಿ ಘೋಷಿಸಿದಾಗ, ಗಳಗಳನೆ ಅತ್ತಿದ್ರಂತೆ ವಿರಾಟ್ ಕೊಹ್ಲಿ!MS ಧೋನಿ ಟೆಸ್ಟ್‌ ಕ್ರಿಕೆಟ್ ನಿವೃತ್ತಿ ಘೋಷಿಸಿದಾಗ, ಗಳಗಳನೆ ಅತ್ತಿದ್ರಂತೆ ವಿರಾಟ್ ಕೊಹ್ಲಿ!

ಈ ಮಧ್ಯೆ ಭಾರತ ತಂಡವನ್ನು ಟೆಸ್ಟ್ ಸರಣಿಯಲ್ಲಿ ಮಣಿಸಿ ಆತ್ಮವಿಶ್ವಾಸದಲ್ಲಿರುವ ದಕ್ಷಿಣ ಆಫ್ರಿಕಾ ತಂಡ ಈ ಗೆಲುವಿನ ಲಯವನ್ನು ಮುಂದುವರಿಸುವ ಉತ್ಸಾಹದಲ್ಲಿದೆ. ಆದರೆ ದಕ್ಷಿಣ ಆಫ್ರಿಕಾ ತಂಡ ಭಾರತವನ್ನು ಏಕದಿನ ಮಾದರಿಯಲ್ಲಿ ಹಗುವರಾಗಿ ಪರಿಗಣಿಸುವಂತಿಲ್ಲ.

ಭಾರತ ಏಕದಿನ ತಂಡ: ಕೆಎಲ್ ರಾಹುಲ್ (ನಾಯಕ), ಜಸ್ಪ್ರೀತ್ ಬುಮ್ರಾ, ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್, ಯುಜ್ವೇಂದ್ರ ಚಾಹಲ್ ಆರ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಎಂಡಿ ಸಿರಾಜ್, ಜಯಂತ್ ಯಾದವ್, ನವದೀಪ್ ಸೈನಿ.

ದಕ್ಷಿಣ ಆಫ್ರಿಕಾದ ಏಕದಿನ ತಂಡ: ಟೆಂಬಾ ಬವುಮಾ (ನಾಯಕ), ಕೇಶವ್ ಮಹಾರಾಜ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಜುಬೇರ್ ಹಮ್ಜಾ, ಮಾರ್ಕೊ ಜಾನ್ಸೆನ್, ಜನೆಮನ್ ಮಲನ್, ಸಿಸಂಡಾ ಮಾಗಲಾ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ವೇಯ್ನ್ ಪಾರ್ನೆಲ್, ಪ್ರೀ ಆಂಡಿಲ್ ಫೀಲ್ಯೂಕ್, ಡಿವಾಹ್ಲಿನ್‌ವೇ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ನೆ.

ಪಂದ್ಯದ ಸಂಪೂರ್ಣ ಮಾಹಿತಿ
ಪಂದ್ಯದ ದಿನ: ಜನವರಿ 19, ಬುಧವಾರ
ಪಂದ್ಯದ ಸಮಯ: ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಲೈವ್ ಸ್ಟ್ರೀಮಿಂಗ್: ಡಿಸ್ನಿ + ಹಾಟ್‌ಸ್ಟಾರ್

ರಾಜಗೋಪಾಲ್ ಸತೀಶ್‌ಗೆ 40 ಲಕ್ಷ ರೂಪಾಯಿ ಮ್ಯಾಚ್ ಫಿಕ್ಸಿಂಗ್‌ ಆಫರ್: ಬಿಸಿಸಿಐ, ಐಸಿಸಿಗೆ ದೂರುರಾಜಗೋಪಾಲ್ ಸತೀಶ್‌ಗೆ 40 ಲಕ್ಷ ರೂಪಾಯಿ ಮ್ಯಾಚ್ ಫಿಕ್ಸಿಂಗ್‌ ಆಫರ್: ಬಿಸಿಸಿಐ, ಐಸಿಸಿಗೆ ದೂರು

ಹವಾಮಾನ ವರದಿ: ಈ ಪಂದ್ಯ ಪಾರ್ಲ್‌ನಲ್ಲಿ ನಡೆಯುತ್ತಿದ್ದು ಮಂಗಳವಾರ ಮಳೆ ಹನಿಯುವ ಸಾಧ್ಯತೆಯಿದೆ. ಆದರೆ ಪಂದ್ಯದ ದಿನ ಬುಧವಾರ ಆಕಾಶ ಸ್ವಚ್ಚವಾಗಿರಲಿದ್ದು ಬಿಸಿಲಿನ ತಾಪಮಾನ 33 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ. ಮೋಡಕವಿದ ವಾತಾವರಣವಿದ್ದರೂ ಮಳೆಯಾಗುವ ಸಾಧ್ಯತೆ ಇಲ್ಲ. ಹೀಗಾಗಿ ಸಂಪೂರ್ಣ ಪಂದ್ಯ ನಡೆಯಲು ಯಾವುದೇ ಅಡ್ಡಿಯಾಗದು.

ಪಿಚ್ ರಿಪೋರ್ಟ್: ಬೊಲ್ಯಾಂಡ್ ಪಾರ್ಕ್‌ನಲ್ಲಿ ನಡೆಯುವ ಈ ಪಂದ್ಯದಲ್ಲಿ ರನ್ ಮಳೆ ಹರಿಯುವ ಸಾಧ್ಯತೆಯಿದೆ. ಔಟ್‌ಫೀಲ್ಡ್‌ ಕೂಡ ವೇಗವಾಗಿರಲಿದ್ದು ಬ್ಯಾಟರ್‌ಗಳಿಗೆ ಹೆಚ್ಚು ಅನುಕೂವಾಗಲಿದೆ. ಎರಡೂ ತಂಡಗಳಲ್ಲಿರುವ ವೇಗಿಗಳು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನಿಡುವ ಅವಕಾಶವಿದೆ.

New Lucknow ತಂಡವನ್ನು ಸೇರಿಕೊಂಡ ಹೊಸ ಆಟಗಾರರು ಯಾರು | Oneindia Kannada

ಬೊಲ್ಯಾಂಡ್ ಕ್ರೀಡಾಂಗಣದ ಏಕದಿನ ಪಂದ್ಯಗಳ ದಾಖಲೆ
ಒಟ್ಟು ಪಂದ್ಯಗಳು: 13
ಮೊದಲು ಬ್ಯಾಟಿಂಗ್ ಮಾಡಿದ ತಂಡದ ಗೆಲುವು: 7 ಬಾರಿ
ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ತಂಡದ ಗೆಲುವು: 5 ಬಾರಿ
ಅತ್ಯಧಿಕ ಸ್ಕೋರ್: ಬಾಂಗ್ಲಾದೇಶ ವಿರುದ್ಧ ದಕ್ಷಿಣ ಆಪ್ರಿಕಾ 6 ವಿಕೆಟ್‌ ಕಳೆದುಕೊಂಡು 353 ರನ್
ಕಡಿಮೆ ಮೊತ್ತ: ಶ್ರೀಲಂಕಾ ವಿರುದ್ಧ ಕೆನಡಾ 36 ರನ್

Story first published: Wednesday, January 19, 2022, 10:18 [IST]
Other articles published on Jan 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X