For Quick Alerts
ALLOW NOTIFICATIONS  
For Daily Alerts
 

Ind vs SA 1st ODI: ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್‌, ಪ್ಲೇಯಿಂಗ್ 11 LIVE

India vs south africa

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಪಾರ್ಲ್‌ನ ಬೊಲ್ಯಾಂಡ್ ಪಾರ್ಕ್ ಆತಿಥ್ಯ ವಹಿಸಿದ್ದು ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.

ಈಗಾಗಲೇ ಟೆಸ್ಟ್ ಸರಣಿಯನ್ನ 2-1 ಅಂತರದಲ್ಲಿ ಗೆದ್ದಿರುವ ದಕ್ಷಿಣ ಆಫ್ರಿಕಾ ಏಕದಿನ ಸರಣಿಯಲ್ಲಿ ಪ್ರಾಬಲ್ಯ ಮೆರೆಯಲು ಸಜ್ಜಾಗಿದೆ. ಮತ್ತೊಂದೆಡೆ ಟೀಂ ಇಂಡಿಯಾ ಟೆಸ್ಟ್ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.

ಭಾರತ ಪರ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು, ದಕ್ಷಿಣ ಆಫ್ರಿಕಾ ಪರ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ವೇಗಿ ಮಾರ್ಕೊ ಯಾನ್ಸನ್ ಏಕದಿನ ಕ್ರಿಕೆಟ್ ಪ್ರವೇಶಿಸಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ.ಎಲ್ ರಾಹುಲ್ ಟೀಂ ಇಂಡಿಯಾವನ್ನ ಮುನ್ನಡೆಸುತ್ತಿದ್ದು, ಜಸ್ಪ್ರೀತ್ ಬುಮ್ರಾ ಉಪನಾಯಕನಾಗಿ ಆಡಲಿದ್ದಾರೆ. ಸೈಯದ್ ಕಿರ್ಮಾನಿ ಮತ್ತು ವೀರೇಂದ್ರ ಸೆಹ್ವಾಗ್ ನಂತರ ಈ ಹಿಂದೆ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ನಾಯಕತ್ವ ವಹಿಸದೆ, ಏಕದಿನದಲ್ಲಿ ಭಾರತವನ್ನು ಮುನ್ನಡೆಸಿದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಕೆ.ಎಲ್ ರಾಹುಲ್ ಪಾತ್ರರಾಗಿದ್ದಾರೆ.

ಇದರ ಜೊತೆಗೆ ರಾಹುಲ್ ತನ್ನ 39 ನೇ ಏಕದಿನ ಪಂದ್ಯದಲ್ಲಿ ಮೊದಲ ಬಾರಿಗೆ ಭಾರತದ ನಾಯಕತ್ವ ವಹಿಸಿದ್ದಾರೆ. ಹೀಗೆ 50 ಏಕದಿನ ಪಂದ್ಯಗಳನ್ನ ಆಡುವ ಮೊದಲೆ ಕೊನೆಯ ಬಾರಿಗೆ ಆಟಗಾರನೊಬ್ಬ ಭಾರತವನ್ನು ಮುನ್ನಡೆಸಿದ್ದು ಅಕ್ಟೋಬರ್ 1984 ರಲ್ಲಿ. ಮಾಜಿ ಕ್ರಿಕೆಟಿಗ ಮೊಹಿಂದರ್ ಅಮರನಾಥ್ 35 ಏಕದಿನ ಪಂದ್ಯಗಳನ್ನ ಆಡಿದ ಸಂದರ್ಭದಲ್ಲಿ ಭಾರತ ತಂಡವನ್ನ ಮುನ್ನಡೆಸಿದ್ರು.

1
51802

ಭಾರತ ಪ್ಲೇಯಿಂಗ್ 11
ಕೆ.ಎಲ್ ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಶಾರ್ದೂಲ್ ಠಾಕೂರ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜವೇಂದ್ರ ಚಹಾಲ್

Australia ಹಾಗು Englandನ ಈ ಆಟಗಾರರಿಗೆ ದೊಡ್ಡ ಸಂಕಷ್ಟ | Oneindia Kannada

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11
ಕ್ವಿಂಟನ್ ಡಿ ಕಾಕ್, ಜನ್ನೆಮನ್ ಮಲನ್, ಟೆಂಬಾ ಬವುಮಾ (ಸಿ), ಏಡನ್ ಮಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸನ್, ಆಂಡಿಲೆ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ

Story first published: Wednesday, January 19, 2022, 13:50 [IST]
Other articles published on Jan 19, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+