IND vs SA 1st ODI: 2023ರ ವಿಶ್ವಕಪ್‌ಗೆ ನನ್ನನ್ನು ಫಿಟ್ ಆಗಿಟ್ಟುಕೊಳ್ಳಲು ಬಯಸುತ್ತೇನೆ: ಧವನ್

ಭಾರತ ಕ್ರಿಕೆಟ್ ತಂಡದ ಹಂಗಾಮಿ ನಾಯಕ ಶಿಖರ್ ಧವನ್ ಅವರು 2023ರ ವಿಶ್ವಕಪ್‌ಗಾಗಿ ತನ್ನನ್ನು ತಾನು ಫಿಟ್ ಆಗಿ ಮತ್ತು ಉತ್ತಮ ಮನಸ್ಥಿತಿಯಲ್ಲಿರಿಸಿಕೊಳ್ಳುವುದರ ಮೇಲೆ ಕೇಂದ್ರೀಕರಿಸಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲು ಸಿದ್ಧರಾಗಿದ್ದಾರೆ.
ಅಕ್ಟೋಬರ್ 6ರಿಂದ ಲಕ್ನೋದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು ಆಡಲಿದೆ. ಶಿಖರ್ ಧವನ್ ಕಳೆದೆರಡು ವರ್ಷಗಳಲ್ಲಿ ಅತ್ಯಂತ ಸ್ಥಿರ ಬ್ಯಾಟಿಂಗ್‌ನಲ್ಲಿ ಒಬ್ಬರಾಗಿದ್ದಾರೆ ಮತ್ತು ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ಪ್ರವಾಸಗಳಲ್ಲಿ ಭಾರತದ ನಾಯಕರಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ.
36 ವರ್ಷದ ಶಿಖರ್ ಧವನ್ 158 ಏಕದಿನ ಪಂದ್ಯಗಳಲ್ಲಿ 92.07 ಸ್ಟ್ರೈಕ್ ರೇಟ್‌ನಲ್ಲಿ 6647 ರನ್ ಗಳಿಸಿದ್ದಾರೆ. ಅವರು 17 ಶತಕ ಮತ್ತು 38 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ತಮ್ಮ ಘನ ವೃತ್ತಿಜೀವನದ ಬಗ್ಗೆ ಮಾತನಾಡುತ್ತಾ, "ನಾನು ಸುಂದರವಾದ ವೃತ್ತಿಜೀವನವನ್ನು ಹೊಂದಿದ್ದೇನೆ ಎಂದು ನಾನು ಭಾವಿಸುತ್ತೇನೆ. ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ," ಎಂದು ಧವನ್ ಹೇಳಿದರು.

"ಸಾಧ್ಯವಾದಾಗಲೆಲ್ಲಾ, ನಾನು ನನ್ನ ಜ್ಞಾನವನ್ನು ಯುವಕರಿಗೆ ರವಾನಿಸುತ್ತೇನೆ. ಈಗ ನನ್ನ ಮೇಲೆ ಹೊಸ ಜವಾಬ್ದಾರಿ ಇದೆ. ಆದರೆ ನಾನು ಸವಾಲುಗಳಲ್ಲಿ ಅವಕಾಶವನ್ನು ನೋಡುತ್ತೇನೆ ಮತ್ತು ನಾನು ಅದನ್ನು ಆನಂದಿಸುತ್ತೇನೆ," ಎಂದು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನದ ಮುನ್ನಾದಿನದಂದು ಪತ್ರಿಕಾಗೋಷ್ಠಿಯಲ್ಲಿ ನಾಯಕ ಶಿಖರ್ ಧವನ್ ಹೇಳಿದರು.
"ಪ್ರಸ್ತುತ ನನ್ನ ಗುರಿ 2023ರ ವಿಶ್ವಕಪ್ ಆಗಿದೆ. ನಾನು ನನ್ನನ್ನು ಫಿಟ್ ಆಗಿಟ್ಟುಕೊಳ್ಳಲು ಬಯಸುತ್ತೇನೆ ಮತ್ತು ಕಣದಲ್ಲಿರಲು ಉತ್ತಮ ಮನಸ್ಥಿತಿಯಲ್ಲಿರಲು ಬಯಸುತ್ತೇನೆ," ಎಂದು ಧವನ್ ತಿಳಿಸಿದರು.
ಲಕ್ನೋದಲ್ಲಿ ಭಾರೀ ಮಳೆಯಿಂದಾಗಿ ಅಕ್ಟೋಬರ್ 5ರಂದು ಟೀಮ್ ಇಂಡಿಯಾದ ಐಚ್ಛಿಕ ಅಭ್ಯಾಸವನ್ನು ರದ್ದುಗೊಳಿಸಲಾಗಿದೆ. ಇನ್ನು ಮೊದಲ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದೆಯೇ ಎಂದು ಕಾದುನೋಡಬೇಕಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ:
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭ್‌ಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್ , ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications