Ind vs SA 1st T20: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11, ಸವಾಲುಗಳು

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳ ಟಿ20 ಸರಣಿಯನ್ನ 2-1 ಅಂತರದಲ್ಲಿ ರೋಹಿತ್ ಪಡೆ ವಶಪಡಿಸಿಕೊಂಡಿದ್ದು, ಕ್ಯಾಲೆಂಡರ್ ವರ್ಷದಲ್ಲಿ 21ನೇ ಗೆಲುವು ದಾಖಲಿಸಿದೆ.

ಭಾರತದ ಮುಂದಿನ ಚಾಲೆಂಜ್‌ ದಕ್ಷಿಣ ಆಫ್ರಿಕಾ ವಿರುದ್ಧ ಇರಲಿದೆ. ಸೆಪ್ಟೆಂಬರ್ 28ರಂದು ಬುಧವಾರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ತಿರುವನಂತಪುರಂನ ಕರಿಯಾವಟ್ಟಂನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕಾಗಿ ಭಾರತ ಸೋಮವಾರ ತಿರುವನಂತಪುರಕ್ಕೆ ಆಗಮಿಸಲಿದೆ. ನಿನ್ನೆಯಷ್ಟೇ ದಕ್ಷಿಣ ಆಫ್ರಿಕಾ ತಂಡ ತಿರುವನಂತಪುರಂ ತಲುಪಿತ್ತು.

ಟಿ20 ವಿಶ್ವಕಪ್‌ಗೂ ಮುನ್ನ ಕೊನೆಯ ಟಿ20 ಸರಣಿ

ಟಿ20 ವಿಶ್ವಕಪ್‌ಗೂ ಮುನ್ನ ಕೊನೆಯ ಟಿ20 ಸರಣಿ

ಟಿ20 ವಿಶ್ವಕಪ್‌ಗೂ ಮುನ್ನ ಭಾರತ ಆಡಲಿರುವ ಕೊನೆಯ ಟಿ20 ಸರಣಿ ಇದಾಗಿದೆ. ಟಿ20 ಸರಣಿಯ ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿಯೂ ನಡೆಯಲಿದೆ. ಟಿ20 ಸರಣಿಯ ಎರಡನೇ ಪಂದ್ಯ ಗುವಾಹಟಿಯಲ್ಲಿ ಅಕ್ಟೋಬರ್ 2 ರಂದು ಮತ್ತು ಮೂರನೇ ಪಂದ್ಯ ಇಂದೋರ್‌ನಲ್ಲಿ ಅಕ್ಟೋಬರ್ 4 ರಂದು ನಡೆಯಲಿದೆ. ಭಾರತ ಮೊದಲ ಪಂದ್ಯ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಗುರಿ ಹೊಂದಿದೆ. ಪಂದ್ಯ ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಆರಂಭಗೊಳ್ಳಲಿದ್ದು, ಸ್ಟಾರ್ ಸ್ಪೋರ್ಟ್ಸ್, ಹಾಟ್‌ಸ್ಟಾರ್ ಮತ್ತು ಜಿಯೋ ಟಿವಿಯಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಿಸಬಹುದು.

ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಟೀಂ ಇಂಡಿಯಾ

ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಟೀಂ ಇಂಡಿಯಾ

ಹೌದು, ಭಾರತ ಹೇಗಾದ್ರೂ ಮಾಡಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಗೆಲ್ಲಬೇಕೆಂದು ಪಣತೊಟ್ಟಿದೆ. ಟೀಂ ಇಂಡಿಯಾ ಆಫ್ರಿಕನ್ನರ ವಿರುದ್ಧ ಮಾತ್ರ ಇದುವರೆಗೆ ಚುಟುಕು ಸರಣಿ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಹೇಗಾದ್ರೂ ಮಾಡಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಲೇಬೇಕೆಂದು ದೃಢ ನಿರ್ಧಾರ ಹೊಂದಿದೆ.

ಅಕ್ಟೋಬರ್‌ನಲ್ಲಿ ಟಿ20 ವಿಶ್ವಕಪ್ ಆರಂಭವಾಗಲಿದ್ದು, ಯಾವುದೇ ಬೆಲೆ ತೆತ್ತಾದರೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನು ಗೆಲ್ಲುವುದು ಭಾರತದ ಗುರಿಯಾಗಿದೆ. ಭಾರತವು ಆಸೀಸ್ ವಿರುದ್ಧ ಸರಣಿಯನ್ನು ಗೆದ್ದುಕೊಂಡಿತು. ಆದರೆ ಮುಂದೆ ಇನ್ನೂ ಹಲವು ಸಮಸ್ಯೆಗಳಿವೆ. ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಸುಧಾರಣೆಗೆ ಅವಕಾಶವಿದೆ. ವಿಶ್ವಕಪ್‌ಗೂ ಮುನ್ನ ದಕ್ಷಿಣ ಆಫ್ರಿಕಾ ಸರಣಿಯ ಮೂಲಕ ಭಾರತದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು.

ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಸೋಲಿಗೆ ಪ್ರಮುಖ ಕಾರಣ ತಿಳಿಸಿದ ಆ್ಯರೋನ್ ಫಿಂಚ್

ಭಾರತದ ಬೌಲಿಂಗ್‌ನಲ್ಲಿ ಎದುರಾಗಿದೆ ಸವಾಲು!

ಭಾರತದ ಬೌಲಿಂಗ್‌ನಲ್ಲಿ ಎದುರಾಗಿದೆ ಸವಾಲು!

ಭಾರತದ ಪ್ರಮುಖ ಸಮಸ್ಯೆ ಬೌಲಿಂಗ್ ಲೈನ್ ಅಪ್ ನಲ್ಲಿದೆ. ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ಭುವನೇಶ್ವರ್ ಕುಮಾರ್ ಅವರಿಗೆ ವಿಶ್ರಾಂತಿ ನೀಡಿದೆ. ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್ ಮತ್ತು ಜಸ್ಪ್ರೀತ್ ಬುಮ್ರಾ ಭಾರತದ ವೇಗಿಗಳ ಸಾಲಿನಲ್ಲಿದ್ದಾರೆ.

ಆದ್ರೆ ಈ ಸರಣಿಯಲ್ಲಿ ಮೊಹಮ್ಮದ್ ಶಮಿ ಆಡುವ ಸಾಧ್ಯತೆ ಕಡಿಮೆ. ಈ ಸರಣಿಯು ವಿಶ್ವಕಪ್‌ನಲ್ಲಿ ಭಾರತದ ವೇಗದ ಜೊತೆಯಾಟವನ್ನು ನಿರ್ಧರಿಸಲಿದೆ ಎಂದು ಹೇಳಬಹುದು. ಡೆತ್ ಓವರ್‌ಗಳಲ್ಲಿ ಭಾರತಕ್ಕೆ ಸಾಕಷ್ಟು ಚಿಂತೆಗಳಿವೆ. ಬುಮ್ರಾ ಮತ್ತು ಹರ್ಷಲ್ ಅವರನ್ನು ತಿರಸ್ಕರಿಸಿದ ನಂತರ, ಈಗ ಭಾರತದ ಭರವಸೆ ಅರ್ಷದೀಪ್ ಸಿಂಗ್ ಅವರ ಮೇಲಿದೆ. ಅರ್ಷದೀಪ್ ಡೆತ್ ಓವರ್‌ನಲ್ಲಿ ಅದ್ಭುತ ಆದರೆ ಹೊಸ ಬಾಲ್‌ನಲ್ಲಿ ಅದ್ಭುತವಾಗಿಲ್ಲ.

T20 World cup 2022: ತಂಡದಲ್ಲಿ ಬದಲಾವಣೆ ಮಾಡಲು ಕೊನೆ ದಿನಾಂಕ ಯಾವಾಗ? ಈ ತಂಡಗಳಲ್ಲಿ ಬದಲಾವಣೆ?

ಇದೇ ವರ್ಷ ನಡೆದ ಟಿ20 ಸರಣಿಯಲ್ಲಿ ಸಮಬಲ ಸಾಧಿಸಿದ್ದ ಆಫ್ರಿಕನ್ನರು

ಇದೇ ವರ್ಷ ನಡೆದ ಟಿ20 ಸರಣಿಯಲ್ಲಿ ಸಮಬಲ ಸಾಧಿಸಿದ್ದ ಆಫ್ರಿಕನ್ನರು

ದಕ್ಷಿಣ ಆಫ್ರಿಕಾ ತಂಡ ಇದೇ ವರ್ಷ ಭಾರತ ಪ್ರವಾಸ ಕೈಗೊಂಡಿತ್ತು. ರಿಷಬ್ ಪಂತ್ ನಾಯಕತ್ವದಲ್ಲಿ ಭಾರತ 5 ಪಂದ್ಯಗಳ ಸರಣಿಯನ್ನು 2-2ರಲ್ಲಿ ಸಮಬಲಗೊಳಿಸಿದೆ. ದಕ್ಷಿಣ ಆಫ್ರಿಕಾ ಈ ಬಾರಿ ವಿಶ್ವಕಪ್‌ನ ಬ್ಲಾಕ್ ಹಾರ್ಸ್‌ ಆಗುವ ಸಾಧ್ಯತೆಯಿದೆ.

ಟೆಂಬಾ ಬವುಮಾ ನೇತೃತ್ವದ ತಂಡವು ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ಏಡೆನ್ ಮಾರ್ಕ್ರಾಮ್ ಮತ್ತು ಡೇವಿಡ್ ಮಿಲ್ಲರ್ ಅವರಂತಹ ಅನೇಕ ಉತ್ತಮ ಬ್ಯಾಟ್ಸ್‌ಮನ್‌ಗಳನ್ನು ಹೊಂದಿದ್ದು, ಟೀಂ ಇಂಡಿಯಾಗೆ ದೊಡ್ಡ ಸವಾಲನ್ನ ಹಾಕಬಹುದು. ಈ ಸ್ಟಾರ್ ಬ್ಯಾಟರ್‌ಗಳು ಟೀಂ ಇಂಡಿಯಾ ಎದುರು ಅಂಡರ್-19 ಪಂದ್ಯಗಳಿಂದ ಆಡಿದ್ದು, ಸಾಕಷ್ಟು ಅನುಭವ ಹೊಂದಿದ್ದಾರೆ.

ಇನ್ನು ಟೀಂ ಇಂಡಿಯಾ ಪರ ದಿನೇಶ್ ಕಾರ್ತಿಕ್ ಮತ್ತು ರಿಷಭ್ ಪಂತ್‌ ಇಬ್ಬರಲ್ಲಿ ಯಾರನ್ನ ಕಣಕ್ಕಿಳಿಸಬೇಕು ಎಂಬುದದು ಸಹ ಸವಾಲಾಗಿದೆ. ಭಾರತ ರಿಷಬ್ ಪಂತ್ ಗೆ ಅವಕಾಶ ನೀಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ರಿಷಭ್ ಅವಕಾಶ ಸಿಕ್ಕಾಗ ಮಿಂಚದಿದ್ರೆ, ಬೆಂಚ್ ಮೇಲೆ ಕುಳಿತು ಟಿ20 ವಿಶ್ವಕಪ್ ನೋಡಬೇಕಾಗಬಹುದು. ಬೌಲಿಂಗ್ ವಿಷಯಕ್ಕೆ ಬಂದರೆ, ದಕ್ಷಿಣ ಆಫ್ರಿಕಾದ ವೇಗಿಗಳ ಸಾಲಿನಲ್ಲಿ ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ಎರ್ನಿಕ್ ನೋಕಿಯಾ ಮತ್ತು ವೇಯ್ನ್ ಪಾರ್ನೆಲ್ ಇದ್ದಾರೆ.

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11

ಟೀಂ ಇಂಡಿಯಾ ಪ್ಲೇಯಿಂಗ್ 11
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಯುಜವೇಂದ್ರ ಚಹಾಲ್


ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಿಯನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಎರ್ನಿಕ್ ನೊರ್ಕಿಯಾ, ತಬ್ರೈಜ್ ಶಮ್ಸಿ, ಕೇಶವ್ ಮಹಾರಾಜ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Monday, September 26, 2022, 15:41 [IST]
Other articles published on Sep 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X