ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs SA 1st T20: ಟಾಸ್ ವರದಿ, ಉಭಯ ತಂಡಗಳ ಪ್ಲೇಯಿಂಗ್ 11

India vs south africa

ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದು, ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡಲಿದೆ.

ಟಾಸ್‌ ಗೆದ್ದು ಮೇಲುಗೈ ಸಾಧಿಸಿರುವ ರೋಹಿತ್ ಟೀಂನಲ್ಲಿ ಕೆಲವು ಬದಲಾವಣೆಗಳಾಗಿದ್ದು, ಮೂವರು ಪ್ರಮುಖ ಆಟಗಾರರು ಬದಲಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಸ್ನಾಯು ಸೆಳೆತದಿಂದಾಗಿ ಪ್ಲೇಯಿಂಗ್ ಇಲೆವೆನ್‌ನಿಂದ ಹೊರಗುಳಿದಿದ್ದು, ಅರ್ಷ್‌ದೀಪ್‌ ಹಿಂದಿರುಗಿದ್ದಾರೆ. ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಯುಜವೇಂದ್ರ ಚಹಾಲ್‌ ಬದಲು ಸ್ಥಾನ ಪಡೆದಿದ್ದಾರೆ. ಜೊತೆಗೆ ರಿಷಭ್ ಪಂತ್ ಕೂಡ ಪ್ಲೇಯಿಂಗ್ ಇಲೆವೆನ್‌ನಲ್ಲಿದ್ದಾರೆ.

ಹಾರ್ದಿಕ್ ಮತ್ತು ಭುವನೇಶ್ವರ್ ಬದಲು ಪಂತ್, ಅರ್ಷ್‌ದೀಪ್‌ಗೆ ಸ್ಥಾನ

ಹಾರ್ದಿಕ್ ಮತ್ತು ಭುವನೇಶ್ವರ್ ಬದಲು ಪಂತ್, ಅರ್ಷ್‌ದೀಪ್‌ಗೆ ಸ್ಥಾನ

ಟಿ20 ವಿಶ್ವಕಪ್ ದೃಷ್ಟಿಯಿಂದ ದಕ್ಷಿಣ ಆಫ್ರಿಕಾ ಸರಣಿಗೆ ಹಾರ್ದಿಕ್ ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್‌ಗೆ ವಿಶ್ರಾಂತಿ ನೀಡಲಾಗಿದ್ದು, ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಯುವ ಡೆತ್ ಓವರ್ ಸ್ಪೆಷಲಿಸ್ಟ್‌ ಅರ್ಷ್‌ದೀಪ್ ಸಿಂಗ್ ಸ್ಥಾನ ಪಡೆದಿದ್ದಾರೆ. ಇನ್ನು ಹಾರ್ದಿಕ್ ಪಾಂಡ್ಯ ಬದಲು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ.

ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎಂಬುದನ್ನ ಈ ಕೆಳಗೆ ತಿಳಿಯಿರಿ.

ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಭಾರತದ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್

ಸೂರ್ಯಕುಮಾರ್ ಯಾದವ್ ಸಿಕ್ಕ ಅವಕಾಶವನ್ನ ಚೆನ್ನಾಗಿ ಬಳಸಿಕೊಂಡ್ರು: ಪ್ರಮುಖ ವಿಚಾರ ಬಿಚ್ಚಿಟ್ಟ ರಿಕಿ ಪಾಂಟಿಂಗ್

ದಕ್ಷಿಣ ಆಫ್ರಿಕಾ ತಂಡದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ

ದಕ್ಷಿಣ ಆಫ್ರಿಕಾ ತಂಡದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ

ಕಳೆದ ಬಾರಿ ಭಾರತ ಪ್ರವಾಸ ಕೈಗೊಂಡಿದ್ದ ವೇಳೆಯಲ್ಲಿ ನಾಯಕ ಟೆಂಬಾ ಬವುಮಾ ಇಂಜ್ಯುರಿಯಿಂದಾಗಿ ಐದು ಪಂದ್ಯಗಳ ಟಿ20 ಸರಣಿಯನ್ನ ಕಳೆದುಕೊಂಡಿದ್ದರು. ಆದ್ರೆ ಟೆಂಬಾ ಬವುಮಾ ಇದೀಗ ದಕ್ಷಿಣ ಆಫ್ರಿಕಾ ತಂಡವನ್ನ ಮುನ್ನಡೆಸುತ್ತಿದ್ದು, ಟಿ20 ವಿಶ್ವಕಪ್‌ಗೂ ಮುನ್ನ ಉಭಯ ತಂಡಗಳು ಅಂತಿಮ ಟಿ20 ಸರಣಿಯಲ್ಲಿ ಭಾಗಿಯಾಗುತ್ತಿರುವುದರಿಂದ ಆಟಗಾರರ ಆತ್ಮವಿಶ್ವಾಸ ಹೆಚ್ಚಿಸಲು ಮತ್ತು ಉತ್ತಮ ಪ್ರದರ್ಶನ ಹೊರತರಲು ಫಲಿತಾಂಶ ಬಹಳ ಮುಖ್ಯವಾಗಿದೆ.

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾವೆಲ್ಲಾ ಆಟಗಾರರು ಸ್ಥಾನ ಪಡೆದಿದ್ದಾರೆ ಎಂಬುದನ್ನ ಈ ಕೆಳಗೆ ತಿಳಿಯಿರಿ.

ಟಿ20 ಕ್ರಿಕೆಟ್‌ನಲ್ಲಿ ಪ್ರಸ್ತುತ ಅಗ್ರ 5 ಆಟಗಾರರನ್ನ ಹೆಸರಿಸಿದ ಮಾರ್ಕ್ ವಾ: ಕೊಹ್ಲಿ, ಬಾಬರ್‌ಗಿಲ್ಲ ಸ್ಥಾನ

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11

ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಟೆಂಬಾ ಬವುಮಾ(ನಾಯಕ), ರಿಲೀ ರೋಸ್ಸೌ, ಏಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಎರ್ನಿಕ್ ನಾರ್ಟ್ಜೆ, ತಬ್ರೈಜ್ ಶಮ್ಸಿ

Story first published: Saturday, October 1, 2022, 18:06 [IST]
Other articles published on Oct 1, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X