ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs SA: ಒಂದೇ ಓವರ್‌ನಲ್ಲಿ ಮೂರು ವಿಕೆಟ್ ಪಡೆದ ಅರ್ಶ್‌ದೀಪ್: ವಿಡಿಯೋ

IND vs SA: 1st T20I: Arshdeep Singh gets 3 Wickets In An Over in 1st match against South Africa

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ತಿರುವನಂತಪುರಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗ ಅಮೋಘ ಪ್ರದರ್ಶನ ನೀಡುವ ಮೂಲಕ ಹರಿಣ ಪಡೆ ಹಿಂದೆಂದೂ ಅನುಭವಿಸದ ಆಘಾತವನ್ನು ಅನುಭವಿಸಿದೆ. ಮೊದಲ 2.3 ಓವರ್‌ಗಳಲ್ಲಿಯೇ ದಕ್ಷಿಣ ಆಫ್ರಿಕಾ ತಂಡ ಅರ್ಧದಷ್ಟು ಆಟಗಾರರನ್ನು ಕಳೆದುಕೊಳ್ಳುವ ಮೂಲಕ ದೊಡ್ಡ ಆಘಾತಕ್ಕೆ ಒಳಗಾಯಿತು.

ದೀಪಕ್ ಚಾಹರ್ ಹಾಗೂ ಅರ್ಷದೀಪ್ ಸಿಂಗ್ ಆರಂಭದಲ್ಲಿಯೇ ದಕ್ಷಿಣ ಆಫ್ರಿಕಾ ತಂಡವನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ಪಂದ್ಯದಲ್ಲಿ ಕೇವಲ 2.3 ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್ ಕಳೆದುಕೊಂಡಿತ್ತು. ಇದರಲ್ಲಿ ಎರಡು ವಿಕೆಟ್‌ಗಳನ್ನು ದೀಪಕ್ ಚಾಹರ್ ಪಡೆದುಕೊಂಡಿದ್ದರೆ ಮೂರು ವಿಕೆಟ್‌ಗಳು ಅರ್ಷದೀಪ್ ಸಿಂಗ್ ಪಾಲಾದವು.

ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್

ಕಳೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಅರ್ಶ್‌ದೀಪ್ ಸಿಂಗ್ ಈ ಪಂದ್ಯದಲ್ಲಿ ತಂಡಕ್ಕೆ ಅದ್ಭುತವಾಗಿಉ ಕಮ್‌ಬ್ಯಾಕ್ ಮಾಡಿದ್ದಾರೆ. ತಮ್ಮ ಒದಲ ಓವರ್‌ನಲ್ಲಿಯೇ ಅತ್ಯಂತ ಅಪಾಯಕಾರಿಯಾಗಿ ಕಾಣಿಸಿದ ಅರ್ಶ್‌ದೀಪ್ ಸಿಂಗ್ ವಿಕೆಟ್‌ಗಳ ಮೇಲೆ ವಿಕೆಟ್ ಪಡೆದುಕೊಂಡರು. ಈ ಒಂದು ಓವರ್‌ನಲ್ಲಿಯೇ ಅರ್ಶ್‌ದೀಪ್ ಸಿಂಗ್ ಮೂರು ವಿಕೆಟ್ ಪಡೆದುಕೊಂಡಿದ್ದಾರೆ.

ಮೊದಲಿಗೆ ಒಂದು ರನ್‌ಗಳಿಸಿದ್ದ ಕ್ವಿಂಟನ್ ಡಿಕಾಕ್ ಅವರನ್ನು ಬೌಲ್ಡ್ ಮಾಡಿದ ಅರ್ಶ್‌ದೀಪ್ ಸಿಂಗ್ ನಂತರ ರಿಲೀ ರೊಸ್ಸೋ ಅವರನ್ನು ಫೆವಿಲಿಯನ್‌ಗೆ ಅಟ್ಟಿದರು. ತಮ್ಮ ಮುಂದಿನ ಎಸೆತದಲ್ಲಿಯೇ ಡೇವಿಡ್ ಮಿಲ್ಲರ್‌ಗೆ ಕೂಡ ಫೆವಿಲಿಯನ್‌ಗೆ ದಾರಿ ತೋರಿಸಿದರು. ಈ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ಆಘಾತ ನೀಡಿದರು.

107 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ: ಆರಂಭಿಕ ಆಘಾತ ಅನುಭವಿಸಿ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗಿದ್ದ ದಕ್ಷಿಣ ಆಫ್ರಿಕಾ ಪರವಾಗಿ ಮಾರ್ಕ್ರಮ್, ಪಾರ್ನೆಲ್ ಹಾಗೂ ಅಂತಿಮ ಹಂತದಲ್ಲಿ ಕೇಶವ್ ಮಹಾರಾಜ್ ಜವಾಬ್ಧಾರಿಯುತ ಪ್ರದರ್ಶನ ನೀಡಿದರು. ಹೀಗಾಗಿ ದಕ್ಷಿಣ ಆಫ್ರಿಕಾ ತಂಡ ನಿಗದಿತ 20 ಓವರ್‌ಗಳ ಆಟವನ್ನು ಪೂರ್ಣಗೊಳಿಸಿದ್ದು 106 ರನ್‌ಗಳನ್ನು ಗಳಿಸಲು ಶಕ್ತವಾಯಿತು. ಕೇಶವ್ ಮಹಾರಾಜ್ 35 ಎಸೆತಗಳಲ್ಲಿ 41 ರನ್‌ಗಳನ್ನು ಗಳಿಸಿದರು.

ವಿರಾಟ್ ಕೊಹ್ಲಿಗೆ ರನ್ ಹಸಿವಿದೆ, ಲಯಕ್ಕೆ ಮರಳಿದ್ದಾರೆ: ಸಂಜಯ್ ಬಂಗಾರ್ವಿರಾಟ್ ಕೊಹ್ಲಿಗೆ ರನ್ ಹಸಿವಿದೆ, ಲಯಕ್ಕೆ ಮರಳಿದ್ದಾರೆ: ಸಂಜಯ್ ಬಂಗಾರ್

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (WK), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಅರ್ಷದೀಪ್ ಸಿಂಗ್
ಬೆಂಚ್: ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್, ಶಹಬಾಜ್ ಅಹ್ಮದ್, ಉಮೇಶ್ ಯಾದವ್

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೋಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ
ಬೆಂಚ್: ಡ್ವೈನ್ ಪ್ರಿಟೋರಿಯಸ್, ರೀಜಾ ಹೆಂಡ್ರಿಕ್ಸ್, ಲುಂಗಿ ಎನ್ಗಿಡಿ, ಹೆನ್ರಿಚ್ ಕ್ಲಾಸೆನ್

Story first published: Wednesday, September 28, 2022, 21:09 [IST]
Other articles published on Sep 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X