For Quick Alerts
ALLOW NOTIFICATIONS  
For Daily Alerts
 

Ind vs SA 2nd ODI: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ 11

India vs South africa

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಭಾನುವಾರ ಅಕ್ಟೋಬರ್ 9 ರಂದು ನಡೆಯಲಿದೆ. ರಾಂಚಿಯ ಜೆಎಸ್ ಸಿಎ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡ ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕಾಗಿದೆ.

ಲಕ್ನೋದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ನಾಯಕತ್ವದ ಟೀಂ ಇಂಡಿಯಾ ಸೋಲುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಹಿನ್ನಡೆ ಅನುಭವಿಸಿದೆ. ಹೀಗಾಗಿ ಸರಣಿ ಜೀವಂತವಾಗಿರಿಸಲು ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಟೀಂ ಇಂಡಿಯಾಗೆ ಮಾಡು ಇಲ್ಲವೆ ಮಡಿ ಪಂದ್ಯ

ಟೀಂ ಇಂಡಿಯಾಗೆ ಮಾಡು ಇಲ್ಲವೆ ಮಡಿ ಪಂದ್ಯ

ಮೊದಲ ಏಕದಿನ ಪಂದ್ಯದ ಸೋಲಿನ ನಂತರ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಶಿಖರ್ ಧವನ್ ನಾಯಕತ್ವದ ಭಾರತ ತಂಡ ಮೂರೂ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ. ಕಳೆದ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಕೊನೆಯ ಓವರ್‌ನಲ್ಲಿ ರನ್ ಕೊಳ್ಳೆ ಹೊಡೆದಿದ್ದರು. ಜೊತೆಗೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಕೆಟ್ಟದಾಗಿ ಫ್ಲಾಪ್ ಆಗಿದ್ದರು. ಈ ಪಂದ್ಯದಲ್ಲಿ ಭಾರತ ತನ್ನ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕಿದೆ.

ಶಿಖರ್ ಧವನ್ ತಮ್ಮ ಅನುಭವವನ್ನ ಇಲ್ಲಿ ತೋರಬೇಕಿದ್ದು, ಶುಭಮನ್ ಗಿಲ್ ಜೊತೆಗೆ ಉತ್ತಮ ಜೊತೆಯಾಟದ ಆರಂಭ ನೀಡಬೇಕಿದೆ. ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ತಮ್ಮ ಜವಾಬ್ದಾರಿ ಅರಿತು ಬ್ಯಾಟ್ ಬೀಸಬೇಕಿದೆ.

ಫಾರ್ಮ್‌ನಲ್ಲಿರುವ ಸಂಜು ಮತ್ತು ಶ್ರೇಯಸ್

ಫಾರ್ಮ್‌ನಲ್ಲಿರುವ ಸಂಜು ಮತ್ತು ಶ್ರೇಯಸ್

ಮೊದಲ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಮಾಡಿದ್ದರು. ಈ ಇಬ್ಬರೂ ಆಟಗಾರರು ಅರ್ಧ ಶತಕಗಳನ್ನು ಬಾರಿಸಿ ಭಾರತವನ್ನು ಗೆಲುವಿನ ಸಮೀಪಕ್ಕೆ ಕೊಂಡೊಯ್ದರು, ಆದರೆ ಅವರು ತಂಡವನ್ನು ಗೆಲುವಿನ ದಡ ತಲುಪಿಸುವಲ್ಲಿ ವಿಫಲರಾದರು.

ಸ್ಯಾಮ್ಸನ್ 63 ಎಸೆತಗಳಲ್ಲಿ 86 ರನ್ ಗಳಿಸಿ ಕೊನೆಯ ಓವರ್‌ನವರೆಗೂ ಪಂದ್ಯದಲ್ಲಿ ಭಾರತದ ಭರವಸೆಯನ್ನು ಜೀವಂತವಾಗಿರಿಸಿದರು. ಸಂಜು ಸ್ಯಾಮ್ಸನ್ ಅವರ ಈ ಪ್ರಬಲ ಇನ್ನಿಂಗ್ಸ್ ನಂತರ, ಅನೇಕ ಕ್ರಿಕೆಟ್ ದಿಗ್ಗಜರು ಹೊಗಳಿದ್ದಾರೆ.

ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಸಂಜು ಕಳೆದ ಕೆಲವು ತಿಂಗಳಿನಿಂದ ಉತ್ತಮ ಫಾರ್ಮ್‌ನಲ್ಲಿದ್ದು, ರನ್‌ಗಳ ಬೇಟೆಯಾಡುತ್ತಿದ್ದಾರೆ. ಸಂಜು ಸ್ಯಾಮ್ಸನ್‌ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿ ಬಹಳ ಸಮಯವೇ ಆಗಿದ್ರೂ, ಸ್ಥಿರ ಪ್ರದರ್ಶನದ ಕೊರತೆ ಜೊತೆಗೆ, ಸತತ ಅವಕಾಶಗಳ ಕೊರತೆಯನ್ನ ಎದುರಿಸುತ್ತಿದ್ದರು. ಆದ್ರೆ ಸ್ಯಾಮ್ಸನ್ ಇದೀಗ ಟೀಂ ಇಂಡಿಯಾದಲ್ಲಿ ಅವಕಾಶ ಪಡೆಯುತ್ತಿದ್ದು, ಸಿಕ್ಕ ಅವಕಾಶವನ್ನ ಎರಡೂ ಕೈನಿಂದ ಬಾಚಿಕೊಂಡಿದ್ದಾರೆ.

T20 ವಿಶ್ವಕಪ್‌ಗೂ ಮುನ್ನ ಭಾರತಕ್ಕೆ ಮತ್ತೊಂದು ಆಘಾತ, ದ.ಆಫ್ರಿಕಾ ಸರಣಿಯಿಂದ ದೀಪಕ್ ಚಹಾರ್ ಔಟ್‌

ದುರ್ಬಲಗೊಂಡಿರುವ ಭಾರತದ ಬೌಲಿಂಗ್

ದುರ್ಬಲಗೊಂಡಿರುವ ಭಾರತದ ಬೌಲಿಂಗ್

ಮೊಹಮ್ಮದ್ ಸಿರಾಜ್ ಮತ್ತು ಅವೇಶ್ ಖಾನ್ ಮೊದಲ ಏಕದಿನ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದ ಮೊದಲು ತರಬೇತಿ ಅವಧಿಯಲ್ಲಿ ದೀಪಕ್ ಚಹಾರ್ ಗಾಯಗೊಂಡರು, ಇದರಿಂದಾಗಿ ಅವರು ಪಂದ್ಯದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

ಆದ್ರೀಗ ಉಳಿದ ಎರಡು ಪಂದ್ಯಗಳಿಗೆ ದೀಪಕ್ ಚಹಾರ್ ಅಲಭ್ಯರಾಗಿದ್ದು, ಅವರ ಬದಲು ಸ್ಕ್ವಾಡ್‌ಗೆ ವಾಷಿಂಗ್ಟನ್ ಸುಂದರ್‌ಗೆ ಅವಕಾಶ ನೀಡಲಾಗಿದೆ. ಆದ್ರೆ ಇವರಿಗೆ ನೇರವಾಗಿ ಎರಡನೇ ಪಂದ್ಯದಲ್ಲಿ ಅವಕಾಶ ನೀಡುವ ಸಾಧ್ಯತೆ ತೀರಾ ಕಡಿಮೆ. ವೇಗದ ಬೌಲರ್ ಮುಖೇಶ್ ಕುಮಾರ್ ಇಲ್ಲವೆ ಶಹಬಾಜ್ ಅಹಮದ್‌ಗೆ ಪದಾರ್ಪಣೆ ಅವಕಾಶ ನೀಡಬಹುದು.

ಟಿ20 ವಿಶ್ವಕಪ್ 2022: ನಾನು ಭಾರತದ ಈ ಆಟಗಾರನ ದೊಡ್ಡ ಅಭಿಮಾನಿ; ವಿವಿಯನ್ ರಿಚರ್ಡ್ಸ್

ಭಾರತ ಮತ್ತು ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ 11

ಭಾರತ ಮತ್ತು ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ 11

ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಶಹಬಾಜ್ ನದೀಮ್/ರವಿ ಬಿಷ್ನೋಯಿ, ಮೊಹಮ್ಮದ್ ಸಿರಾಜ್, ಅವೇಶ್ ಖಾನ್

ದಕ್ಷಿಣ ಆಫ್ರಿಕಾ: ಜೆನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ತಬ್ರೇಜ್ ಶಮ್ಸಿ

Story first published: Saturday, October 8, 2022, 17:11 [IST]
Other articles published on Oct 8, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+